ಹಾಕಿ ಪಂದ್ಯಾವಳಿ: ಕಕ್ಕಬ್ಬೆ ಕೇಂದ್ರ ಆಂಗ್ಲ ಶಾಲೆ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

KannadaprabhaNewsNetwork |  
Published : Dec 11, 2025, 03:00 AM IST
ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ | Kannada Prabha

ಸಾರಾಂಶ

ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದ ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಂಡದಲ್ಲಿ ಪಾಲ್ಗೊಂಡಿದ್ದ ಏಳನೇ ತರಗತಿ ವಿದ್ಯಾರ್ಥಿ ಜಹೀರ್ ಟಿ.ಎ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಿದ್ದಾರೆ.

---------------------------------------

ಕೊಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪುಕನ್ನಡಪ್ರಭ ವಾರ್ತೆ ಮಡಿಕೇರಿಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಒಂದೇ ಕುಟುಂಬದ ನಾಲ್ವರ ಹತ್ಯೆ ಗೈದಿದ್ದ ಆರೋಪಿ :

2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು ಕಾವೇರಿ (7), ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು. ಆರೋಪಿ ಗಿರೀಶ್ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ.ಕಾನೂನು ಪ್ರಕ್ರಿಯೆ:

ಪ್ರಕರಣದ ಭೀಕರತೆ ಮತ್ತು ಗಂಭೀರತೆಯನ್ನು ಮನಗಂಡ ಪೊನ್ನಂಪೇಟೆ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಿರೀಶ್‌ನನ್ನು ಬಂಧಿಸಿದ್ದರು. ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.ಈ ಮಹತ್ವದ ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎಲ್ಲಾ ಸಾಕ್ಷ್ಯ ಮತ್ತು ವಾದಗಳನ್ನು ಪರಿಶೀಲಿಸಿದ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್‌ನ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಆತನಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಕೊಡಗಿನ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಮರಣದಂಡನೆಯ ತೀರ್ಪು ಪ್ರಕಟವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವಿಶ್ವನಾಥ ಆಯ್ಕೆ
ತುಮ್ಮರಗುದ್ದಿ ಮದ್ಯ ಮುಕ್ತ ಆಗಲಿ