ಹೊದ್ದೂರು ಗ್ರಾ.ಪಂ ಅಭಿವೃದ್ಧಿ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Feb 27, 2025, 12:31 AM IST
ಚಿತ್ರ :  26ಎಂಡಿಕೆ2 : ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.  | Kannada Prabha

ಸಾರಾಂಶ

ಸರ್ಕಾರದಿಂದ ಬಿಡುಗಡೆಯಾದ 2 ಕೋಟಿ ರು. ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭಕ್ಕೆ ಹೆಚ್‌.ಎ. ಹಂಸ ಚಾಲನೆ ನೀಡಿದರು. ಈ ಸಂದರ್ಭ ಕಾಮಗಾರಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.

ಮಡಿಕೇರಿ: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ ಹಾಗೂ ಕಾನ್ಶಿರಾಮ್ ನಗರದಲ್ಲಿ ಸರ್ಕಾರದಿಂದ ಬಿಡುಗಡೆಯಾದ 2 ಕೋಟಿ ರು. ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್ ಎ ಹಂಸ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಹೊದ್ದೂರು ಗ್ರಾಮ ಪಂಚಾಯಿತಿಯ ಬಗ್ಗೆ ಶಾಸಕರಾದ ಡಾ ಮಂತರ್ ಗೌಡ ಅವರು ವಿಶೇಷ ಕಾಳಜಿ ವಹಿಸಿ ಅನುದಾನ ನೀಡುತ್ತಿದ್ದಾರೆ.

ಪಾಲೆಮಾಡು ಮತ್ತು ಕಾನ್ಶಿರಾಮ ಕಾಲೋನಿಗೆ ತಲಾ ಒಂದು ಕೋಟಿ ರು. ಅನುದಾನ ನೀಡಿದ್ದಾರೆ‌ ಎಂದು ಹೇಳಿದರು.

ಈ ಸಂದರ್ಭ ಕಾಮಗಾರಿಯ ಗುಣಮಟ್ಟವನ್ನು ಕಾಪಾಡುವಂತೆ ಗುತ್ತಿಗೆದಾರರಿಗೆ ಎಚ್.ಎ ಹಂಸ ಅವರು ಸೂಚನೆ ನೀಡಿದ್ದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅನುರಾಧ, ಸದಸ್ಯರಾದ ಹಮೀದ್ , ಹೊನ್ನಪ್ಪ ಕುಸುಮಾವತ, ಮೊಣ್ಣಪ್ಪ ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌