ಬ್ರಹ್ಮಕುಮಾರಿ ಈಶ್ವರೀಯ ವಿವಿಯಲ್ಲಿ ಧ್ವಜಾರೋಹಣ

KannadaprabhaNewsNetwork |  
Published : Feb 16, 2026, 01:30 AM IST
15ಕೆಎಂಎನ್‌ಡಿ-10ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ವಿದ್ಯಾಲಯದಲ್ಲಿ ಶಿವರಾತ್ರಿ ಹಿನ್ನಲೆಯಲ್ಲಿ ನಡೆದ ದ್ವಜಾರೋಹಣಾ ಮತ್ತು ಪ್ರವಚನ ಕಾರ್ಯಕ್ರಮಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ  ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯ ಇತರ ಸಂಸ್ಥೆಗಳಿಗಿಂತ ಭಿನ್ನವಾಗಿದೆ. ವಿಶ್ವಕ್ಕೆ ಶಾಂತಿ ಸಂದೇಶ ಸಾರುವಲ್ಲಿ ಅಗ್ರಸ್ಥಾನದಲ್ಲಿದೆ. ಇಂತಹ ಸಂಸ್ಥೆಗೆ ಸಾರ್ವಜನಿಕರು ತನು, ಮನ, ಧನದಿಂದ ಪ್ರೋತ್ಸಾಹಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಯಾವುದೇ ಜಾತಿ, ಪಂಥ, ಧರ್ಮ-ಭೇದ ಭಾವವಿಲ್ಲದ ಸಂಸ್ಥೆ ಇದಾಗಿದ್ದು ಸ್ವಯಂ ಪರಮಾತ್ಮನನ್ನು ಪರಿಚಯ ಮಾಡಿಕೊಡುವ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣವನ್ನು ಜನತೆಗೆ ತಿಳಿಸುತ್ತಿದ್ದು ಜನರಲ್ಲಿ ಧಾರ್ಮಿಕ ಭಾವನೆಗಳು ಹೆಚ್ಚುವಂತೆ ಮಾಡುತ್ತಿದೆ ಎಂದು ಬಿ.ಕೆ.ವೀಣಾ ತಿಳಿಸಿದರು.

ಇಲ್ಲಿನ ಓಂಶಾಂತಿ ರಸ್ತೆಯಲ್ಲಿ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ವಿದ್ಯಾಲಯದಲ್ಲಿ ಶಿವರಾತ್ರಿ ಹಿನ್ನೆಲೆಯಲ್ಲಿ ಧ್ವಜಾರೋಹಣಾ, ಶ್ರೀಓಂಕಾರೇಶ್ವರನ ಪ್ರತಿಷ್ಠಾಪಿಸಿ ವಿಶೇಷ ಪೂಜೆ ವೇಳೆ ಪ್ರವಚನ ವೇಳೆ ಮಾತನಾಡಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯ ಇತರ ಸಂಸ್ಥೆಗಳಿಗಿಂತ ಭಿನ್ನವಾಗಿದೆ. ವಿಶ್ವಕ್ಕೆ ಶಾಂತಿ ಸಂದೇಶ ಸಾರುವಲ್ಲಿ ಅಗ್ರಸ್ಥಾನದಲ್ಲಿದೆ. ಇಂತಹ ಸಂಸ್ಥೆಗೆ ಸಾರ್ವಜನಿಕರು ತನು, ಮನ, ಧನದಿಂದ ಪ್ರೋತ್ಸಾಹಿಸಬೇಕು ಎಂದರು.

ಈ ವೇಳೆ ಗ್ರಾಪಂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸುಧಾ, ಮಾಜಿ ಸದಸ್ಯ ಕೆ.ಟಿ.ಶ್ರೀನಿವಾಸ್ ಅವರನ್ನು ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ವಿದ್ಯಾಲಯದ ವತಿಯಿಂದ ಅಭಿನಂದಿಸಲಾಯಿತು.

ಈ ವೇಳೆ ಆಶ್ರಮದ ಬಿ.ಕೆ. ಗೌರಕ್ಕ, ಸೇರಿದಂತೆ ಬ್ರಹ್ಮ ಕುಮಾರಿ ಸೇವಾ ಸಂಸ್ಥೆಯ ಪ್ರತಿನಿಧಿಗಳು ಹಲವರಿದ್ದರು.

ಶ್ರೀಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಹಲಗೂರು: ಇಲ್ಲಿಗೆ ಸಮೀಪದ ಕೊನ್ನಾಪುರ ಗ್ರಾಮದಲ್ಲಿರುವ ಶ್ರೀಶಂಭುಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ೨೦ನೇ ವರ್ಷದ ಶಿವರಾತ್ರಿಯ ಹಬ್ಬದ ಅಂಗವಾಗಿ ದೇವರ ಮೂರ್ತಿಗೆ ವಿಶೇಷವಾಗಿ ಅಲಂಕರಿಸಿ ಪೂಜೆ ಪುನಸ್ಕಾರಗಳು ನಡೆದ ನಂತರ ಬಂದ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದ್ದು ಹಾಗೂ ಜಾಗರಣೆ ಮತ್ತು ಹರಿಕಥೆ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಂತಿಗೆ ಹೆಚ್ಚಿನ ಪ್ರಾಮುಖ್ಯತೆ ಅಗತ್ಯ: ಡಾ.ಅನಿಲ್‌ ಆನಂದ್‌
ನಮ್ಮನ್ನು ನಾವು ಕಂಡುಕೊಳ್ಳುವುದೇ ಬದುಕು: ಆದಿಶ್ರೀ