ಹೊಕ್ರಾಣಿ: ಬಾವಿಯಲ್ಲಿ ಯುವತಿ ಶವ ಪತ್ತೆ

KannadaprabhaNewsNetwork |  
Published : Aug 21, 2026, 01:15 AM IST
20ಕೆಪಿಎಸ್ಡಬ್ಲ್ಯೂಆರ್ 01: ಅಶ್ವಿನಿ | Kannada Prabha

ಸಾರಾಂಶ

ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ದಲಿತ ಯುವತಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಮೃತಳನ್ನು ಹೊಕ್ರಾಣಿ ನಿವಾಸಿ ತಿಮ್ಮಾರೆಡ್ಡಿ ಅವರ ಪುತ್ರಿ ಅಶ್ವಿನಿ (21) ಎಂದು ಗುರುತಿಸಲಾಗಿದೆ.

ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ದಲಿತ ಯುವತಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಮೃತಳನ್ನು ಹೊಕ್ರಾಣಿ ನಿವಾಸಿ ತಿಮ್ಮಾರೆಡ್ಡಿ ಅವರ ಪುತ್ರಿ ಅಶ್ವಿನಿ (21) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಪದವಿ ಮುಗಿಸಿದ್ದ ಅಶ್ವಿನಿ ಬುಧವಾರ ಸಂಜೆ ಬಹಿರ್ದೆಸೆಗೆಂದು ತೆರಳಿದ್ದಳು. ರಾತ್ರಿಯಾದರೂ ಮನೆಗೆ ಬಾರದ ಕಾರಣ ಕುಟುಂಬದವರು ಹುಡುಕಾಡಿದಾಗ ಬಾವಿಯಲ್ಲಿ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಸಹಿತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಅನುಮಾನವಿದ್ದು, ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಸತ್ಯಾಂಶ ಹೊರಬರಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುದಗಲ್‌: ಈದ್ ಮಿಲಾದ್ ಹಬ್ಬದ ಶಾಂತಿ ಸಭೆ
ಆ. 23ರಂದು ಡಾ.ಅಜಯ ಸಿಂಗ್‌ಗೆ ಅಭಿನಂದನಾ ಸಮಾರಂಭ