ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ಕೈಹಿಡಿಯಿರಿ: ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ

KannadaprabhaNewsNetwork | Published : Apr 24, 2024 2:22 AM

ಸಾರಾಂಶ

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಆದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿ ಎಂದು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹಿರಿಯ ವಕೀಲ ಎಲ್.ಪಿ.ಪ್ರಕಾಶ್ ಗೌಡ ಹೇಳಿದರು. ನುಗ್ಗೇಹಳ್ಳಿಯಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ನಡೆಸಿ ಮಾತನಾಡಿದರು.

ಶ್ರೇಯಸ್‌ ಪಟೇಲ್‌ ಪರ ಪ್ರಚಾರ

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಮಹಿಳೆಯರಿಗೆ ಕೊಟ್ಟ ಮಾತಿನಂತೆ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಮಹಿಳೆಯರಿಗೆ ಆರ್ಥಿಕವಾಗಿ ಹೆಚ್ಚು ಅನುಕೂಲವಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಆದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿ ಎಂದು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹಿರಿಯ ವಕೀಲ ಎಲ್.ಪಿ.ಪ್ರಕಾಶ್ ಗೌಡ ಹೇಳಿದರು.

ಹೋಬಳಿಯ ತಗಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ನಡೆಸಿ ಮಾತನಾಡಿದರು.

‘ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ ಒಂದು ಲಕ್ಷ ರು.ಹಣ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇದರ ಜೊತೆಗೆ ನಿರುದ್ಯೋಗ ಯುವಕರಿಗೆ ಹಾಗೂ ರೈತರಿಗೆ ಹಲವು ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರ ಬರಬೇಕಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ವಾತಾವರಣವಿದೆ. ತಾಲೂಕಿನಲ್ಲಿ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಹಾಗೂ ಎಂ.ಎ.ಗೋಪಾಲಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದೆ. ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ 15 ಸದಸ್ಯರು ತಾಲೂಕಿನ 36 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಲಾಗುತ್ತಿದೆ’ ಎಂದು ಹೇಳಿದರು.

ತಗಡೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಟಿ.ಸಿ.ಷಡಕ್ಷರಿ, ಜಯಮ್ಮ, ಶಿವಕುಮಾರ ಸ್ವಾಮಿ, ನ್ಯಾಯ ಬೆಲೆ ಅಂಗಡಿ ಮಾಲೀಕ ಟಿ.ಎನ್.ಬಸವರಾಜು, ಗ್ರಾಪಂ ಸದಸ್ಯೆ ವಿಜಯಮ್ಮ ರಂಗಸ್ವಾಮಿ, ಮುಖಂಡರಾದ ಗುರುಪ್ರಸಾದ್, ಶಿವಕುಮಾರ್, ಮಂಜಮ್ಮ, ಲಿಂಗಮ್ಮ, ಗುರುರಾಜ್, ಸುಜಾತ, ಇತರರು ಹಾಜರಿದ್ದರು.

ನುಗ್ಗೇಹಳ್ಳಿಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಲೋಕಸಭಾ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ನಡೆಸಿದರು.

Share this article