ಕೆಂಪೇಗೌಡ ಒಂದೇ ಸಮುದಾಯಕ್ಕೆ ಸೀಮಿತವಾದವರಲ್ಲ:ನಾಗೇಂದ್ರ

KannadaprabhaNewsNetwork |  
Published : Jun 28, 2024, 12:48 AM IST
33 | Kannada Prabha

ಸಾರಾಂಶ

ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ

ಕನ್ನಡಪ್ರಭ ವಾರ್ತೆ ಮೈಸೂರು

ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಒಂದೇ ಸಮುದಾಯಕ್ಕೆ ಸೀಮಿತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ ಎಂದು ಬಿಜೆಪಿ ನಗರಾಧ್ಯಕ್ಷ ಎಲ್‌. ನಾಗೇಂದ್ರ ಹೇಳಿದರು.

ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಕೆಎಂಪಿಕೆ ಟ್ರಸ್ಟ್ ನಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ 2 ಸಾವಿರ ಹೋಳಿಗೆ ವಿತರಿಸಿ ಅವರು ಮಾತನಾಡಿದರು.

ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ ‘ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕರು ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು ಎಂದು ಸ್ಮರಿಸಿದರು.

ಶಾಸಕ ಜಿ.ಟಿ. ದೇವೇಗೌಡ, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ. ವಿಜಯಕುಮಾರ್, ಎಂಡಿಎ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್, ವಸ್ತು ಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕೆಪಿಸಿಸಿ ಸದಸ್ಯ ನಟರಾಜ್, ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷ ರವಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಒಕ್ಕಲಿಗರ ಸಂಘದ ಕಾರ್ಯದರ್ಶಿ ಚೇತನ್ ಗೌಡ, ಆನಂದ್, ಸೂರಜ್, ಸದಾಶಿವ್, ಗಿರೀಶ್ ಗೌಡ , ಒಕ್ಕಲಿಗ ಸಂಘದ ನಿರ್ದೇಶಕರು, ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ