ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

KannadaprabhaNewsNetwork |  
Published : Mar 29, 2024, 12:49 AM IST
ಪವಿತ್ರ28 | Kannada Prabha

ಸಾರಾಂಶ

ಧರ್ಮ ಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್‌ ಐಸಾಕ್‌ ಲೋಬೊ ನೇತೃತ್ವದಲ್ಲಿ ಆಚರಿಸಲಾಯಿತು. ಧರ್ಮಾಧ್ಯಕ್ಷರು, 12 ಮಂದಿ ವಿಶ್ವಾಸಿಗಳ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರಿತಿಯ ಸಂದೇಶವನ್ನು ಸಂಕೇತಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಅಂತಿಮ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರವನ್ನು ಉಡುಪಿ ಜಿಲ್ಲಾದ್ಯಂತ ಕ್ರೆಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಧರ್ಮ ಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್‌ ಐಸಾಕ್‌ ಲೋಬೊ ನೇತೃತ್ವದಲ್ಲಿ ನಡೆಯಿತು.

ಧರ್ಮಾಧ್ಯಕ್ಷರು, 12 ಮಂದಿ ವಿಶ್ವಾಸಿಗಳ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರಿತಿಯ ಸಂದೇಶವನ್ನು ಸಂಕೇತಿಸಿದರು.

ಈ ವೇಳೆ ತಮ್ಮ ಸಂದೇಶದಲ್ಲಿ ಬಿಷಪ್ ಲೋಬೊ ಅವರು ಪವಿತ್ರ ಗುರುವಾರದಂದು ಕ್ರೈಸ್ತ ಸಭೆ ಪ್ರಮುಖ ಮೂರು ವಿಷಯಗಳ ಬಗ್ಗೆ ನೆನಪು ಮಾಡುತ್ತದೆ. ಅಂದು ಯೇಸು ಸ್ವಾಮಿ ಪರಮ ಪ್ರಸಾದ ಸ್ಥಾಪನೆ, ಯಾಜಕ ದೀಕ್ಷೆಯ ಸ್ಥಾಪನೆ ಮತ್ತು ತನ್ನ ಅಂತಿಮ ಭೋಜನದ ದಿನದಂದು ಸೇವೆಯ ಆಜ್ಞೆಯನ್ನು ತನ್ನ ಅನುಯಾಯಿಗಳಿಗೆ ನೀಡಿದರು. ಯೇಸು ಸ್ವಾಮಿ ಲೋಕಕಲ್ಯಾಣಕ್ಕಾಗಿ ತನ್ನನ್ನು ತಾನೇ ಈ ಲೋಕಕ್ಕೆ ಅರ್ಪಿಸಿದರು. ಅಂತೆಯೇ ನಾವು ನಮ್ಮ ಜೀವನವನ್ನು ಪರರ ಒಳಿತಿಗಾಗಿ ಜೀವಿಸುವ ಮೂಲಕ ಮಾದರಿಯಾಗಬೇಕು ಎಂದರು.

ಕೆಥೆಡ್ರಲ್‌ನ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ.ಜೋಯ್ ಅಂದ್ರಾದೆ, ನಿವೃತ್ತ ಧರ್ಮಗುರು ವಂ.ಲೊರೆನ್ಸ್ ರೊಡ್ರಿಗಸ್ ಉಪಸ್ಥಿತರಿದ್ದರು.

ಪವಿತ್ರ ಗುರುವಾರದಂದು ಯೇಸು ಸ್ವಾಮಿಯು ತನ್ನ 12 ಮಂದಿ ಶಿಷ್ಯರೊಂದಿಗೆ ಸೇರಿ ತನ್ನ ಅಂತಿಮ ಭೋಜನ ನಡೆಸಿದ್ದರು. ಈ ವೇಳೆ ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ತನ್ನ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಈ ದಿನ ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ನಡೆಯುತ್ತವೆ.

ಪವಿತ್ರ ಗುರುವಾರದ ಬಳಿಕ ಶುಕ್ರವಾರದಂದು ಯೇಸು ಸ್ವಾಮಿಯನ್ನು ಶಿಲುಬೆಗೇರಿಸಿದ್ದು, ಶುಕ್ರವಾರವನ್ನು ಕ್ರೆಸ್ತರು ಶುಭ ಶುಕ್ರವಾರವಾಗಿ ಆಚರಿಸಿ ಧ್ಯಾನ, ಉಪವಾಸ ಹಾಗೂ ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸುವ ಮೂಲಕ ಆಚರಿಸುತ್ತಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!