ಮನೆ ಗ್ರಂಥಾಲಯ ಓದುವ ಸಂಸ್ಕೃತಿಗೆ ಪ್ರೇರಣೆ: ಅಬಿದ್ ಗದ್ಯಾಳ

KannadaprabhaNewsNetwork |  
Published : Jun 30, 2026, 02:45 AM IST
ಪಪೂ ಶಿಕ್ಷಣ ಇಲಾಖೆಯಲ್ಲಿ 20ನೇ ಗ್ರಂಥಾಲಯಕ್ಕೆ ಚಾಲನೆ ನೀಡಲಾಯಿತು  | Kannada Prabha

ಸಾರಾಂಶ

ಇಂದು ಮೊಬೈಲ್​ ಬಳಕೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಪುಸ್ತಕ ಸಂಸ್ಕೃತಿ ಮರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮ, ಪುಸ್ತಕಗಳನ್ನು ಓದುವುದಕ್ಕೆ ಪ್ರೇರಣಾದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ್​ ತಿಳಿಸಿದರು.

ಮಣಿಪಾಲ: ಇಂದು ಮೊಬೈಲ್​ ಬಳಕೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಪುಸ್ತಕ ಸಂಸ್ಕೃತಿ ಮರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮ, ಪುಸ್ತಕಗಳನ್ನು ಓದುವುದಕ್ಕೆ ಪ್ರೇರಣಾದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ್​ ತಿಳಿಸಿದರು.ಅವರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಮನೆಯೇ ಗ್ರಂಥಾಲಯ ಅಭಿಯಾನದ 200ನೇ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.ಸರ್ಕಾರಿ ಕಚೇರಿಗಳಲ್ಲಿ ಇಂತಹ ಗ್ರಂಥಾಲಯ ಸ್ಥಾಪನೆಯಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಚೇರಿಗೆ ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರಿಗೆ ಪುಸ್ತಕ ಓದುವಂತೆ ಪ್ರೇರೇಪಿಸಬೇಕು. ಪುಸ್ತಕಗಳನ್ನು ಓದುವುದರ ಮೂಲಕ ಪ್ರತಿಯೊಬ್ಬರೂ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು.ಮುಖ್ಯ ಅತಿಥಿಯಾಗಿ ಗಾಂಧಿ ಆಸ್ಪತ್ರೆಯ ಮುಖ್ಯಸ್ಥ ಡಾ. ಹರೀಶ್ಚಂದ್ರ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಕಾರ್ಯದರ್ಶಿ ಮುರಳೀಧರ್​, ಕಸಾಪ ತಾಲೂಕು ಕಾರ್ಯದರ್ಶಿಗಳಾದ ಜನಾರ್ದನ್​ ಕೊಡವೂರು, ರಂಜನಿ ವಸಂತ್​, ಪದಾಧಿಕಾರಿಗಳಾದ ಆರ್​. ವಸಂತ್​, ದೀಪಾ ಚಂದ್ರಕಾಂತ್​, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ಚಂದ್ರಕಾಂತ್​ ಉಪಸ್ಥಿತರಿದ್ದರು.ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್​ ಎಚ್​. ಪಿ. ಪ್ರಸ್ತಾವನೆಗೈದರು. ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಗವಿಕಲತೆ ತಡೆಗೆ ಪೋಲಿಯೋ ಲಸಿಕೆ ಕಡ್ಡಾಯ: ಪೊನ್ನಣ್ಣ
ಜಾಗತಿಕ ಆರ್ಥಿಕತೆಗೆ ಎಂಎಸ್‌ಎಂಇಯಿಂದ ಅಗಾಧ ಕೊಡುಗೆ: ಸಿಎ ಎಸ್‌.ಎಸ್‌. ನಾಯಕ್‌