ಮಾಗಡಿ: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿರುವ ಮುಳ್ಕಟ್ಟಮ್ಮ ದೇವಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರ ಧರ್ಮಪತ್ನಿ ಕನ್ನಿಕಾ ಪರಮೇಶ್ವರಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮುಗಿಸಿ ಬಂದು ಮುಳ್ಕಟ್ಟಮ್ಮ ದೇವಿಯ ಆಶೀರ್ವಾದ ಪಡೆದರು. ನನಗೆ ರಾಜಕೀಯವಾಗಿ ಸ್ಥಾನಮಾನ ಸಿಕ್ಕಿದ್ದು ದೇವಿಯ ಕೈಪೆಯಿಂದಲೆ. ವರ್ಷದಿಂದ ವರ್ಷಕ್ಕೆ ದೇವಸ್ಥಾನ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ ಎಂದರು. ಈ ವೇಳೆ ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ, ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಜತೆಯಲ್ಲಿದ್ದರು.