ಮಠಾಧೀಶರ ಭೇಟಿ ಮಾಡಿದ ಗೃಹ ಸಚಿವ ಪರಮೇಶ್ವರ್‌

KannadaprabhaNewsNetwork |  
Published : Apr 15, 2024, 01:16 AM IST
ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಹನುಮಂತನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಗ್ಋಹ ಸಚಿವ ಡಾ.ಜಿ.ಪರಮೇಶ್ವರ | Kannada Prabha

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತುಮಕೂರು ಜಿಲ್ಲೆಯ ಪ್ರಭಾವಿ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳನ್ನು ಭೇಟಿ ಮಾಡಿದ್ದಾರೆ

ಕೊರಟಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತುಮಕೂರು ಜಿಲ್ಲೆಯ ಪ್ರಭಾವಿ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚಿಸಿ ಕಾಂಗ್ರೆಸ್ ಅಭ್ಯರ್ಥಿಯ ಪರ ಮತಯಾಚನೆ ಮಾಡಿದ್ದಲ್ಲದೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡರುಗಳನ್ನು ಭೇಟಿ ಮಾಡಿ ಮತಯಾಚನೆ ಮಾಡುವ ಮೂಲಕ ಲಿಂಗಾಯಿತ ಮಾತುಗಳು ಚದುರದಂತೆ ಮತ ಬೇಟೆಗಿಳಿದ್ದಾರೆ. ಕೊರಟಗೆರೆ ತಾಲೂಕಿನ ಸುಪ್ರಸಿದ್ಧ ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಭೇಟಿ ಮಾಡಿ, ಆಶೀರ್ವಾದ ಪಡೆದುಮುದ್ದಹನುಮೇಗೌಡ ಪರ ಮತಯಾಚನೆ ಮಾಡಿದರು. ನಂತರ ಎಲೆ ರಾಂಪುರದ ಲಿಂಗಾಯಿತ ಮುಖಂಡರಾದ ಚಂದ್ರಶೇಖರ್, ನಟರಾಜಪ್ಪ, ಚಂದ್ರಣ್ಣ, ಇರಕಸಂದ್ರ ಕಾಲೋನಿಯ ರಾಜಣ್ಣ. ಆರ್.ಆರ್.ಆರ್ ರಾಜಣ್ಣ ಸೇರಿದಂತೆ ಇತರರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ್, ಅರಕೆರೆ ಶಂಕರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮಹಾಲಿಂಗಯ್ಯ, ಮಾಜಿ ತಾಲೂಕು ಪಂಚಾಯತಿ ಸದಸ್ಯ ಬೋರಣ್ಣ, ಹಾಲಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ,ಮಾಜಿ ಅಧ್ಯಕ್ಷ ರಂಗಯ್ಯ, ಸದಸ್ಯರಾದ ಪವನ್ ಕುಮಾರ್, ಮುಖಂಡ ಮಧು ಸೇರಿದಂತೆ ಹಲವು ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸ್‌ ರಸ್ತೆಯಲ್ಲಿ ಟೋಲ್‌ ಕಟ್ಟಬೇಡಿ: ಕುಮಾರಸ್ವಾಮಿ
ಕೆಪಿಎಸ್ಸಿ ನೇಮಕ ಹಗರಣ : ಮತ್ತೆ ಸಾಹುಕಾರ್‌ ಸಸ್ಪೆಂಡ್‌ಗೆ ಸಚಿವ ಸಂಪುಟ ಶಿಫಾರಸು