ಹಿರಿಸಾವೆಯಲ್ಲಿ ಗೃಹ ಸಚಿವ ಪರಮೇಶ್ವರಗೆ ಸ್ವಾಗತ

KannadaprabhaNewsNetwork |  
Published : Feb 07, 2026, 01:45 AM IST
6ಎಚ್ಎಸ್ಎನ್10 :  | Kannada Prabha

ಸಾರಾಂಶ

ಹಿರೀಸಾವೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರದಿಂದ ೭೫ ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿ ಹಾಗೂ ಹೆಚ್ಚಿನ ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಅನುದಾನ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಜಿ.ಪರಮೇಶ್ವರ್ ಯುವಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಮೌರ್ಯ, ಸಾಮಾಜಿಕ ಹೋರಾಟಗಾರ ಹೊಸಹಳ್ಳಿ ಅಣ್ಣಯ್ಯ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್, ಮಹೇಶ್, ದಲಿತಪರ ಸಂಘಟನೆಗಳ ಮುಖ್ಯಸ್ಥರು, ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇತರರು ಇದ್ದರು. ಹಿರೀಸಾವೆ ಪೊಲೀಸರು ಬಿಗಿಭದ್ರತೆ ಒದಗಿಸಿದ್ದರು.

ಚನ್ನರಾಯಪಟ್ಟಣ: ಕಾರ್ಯನಿಮಿತ್ತ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರನ್ನು ತಾಲೂಕಿನ ಹಿರೀಸಾವೆ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ದಲಿತಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಮುಖಂಡರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಬಳಿಕ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಮಾತನಾಡಿ, ನಿಮ್ಮೆಲ್ಲರ ಬೇಡಿಕೆಯಂತೆ ಹಿರೀಸಾವೆಯ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಸಲುವಾಗಿ ಶಂಕುಸ್ಥಾಪನೆಗೆ ದಿನಾಂಕ ನಿಗಧಿಪಡಿಸಿ ತಿಳಿಸಲಾಗುವುದು ಎಂದರು. ಇನ್ನು ಹಿರೀಸಾವೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರದಿಂದ ೭೫ ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿ ಹಾಗೂ ಹೆಚ್ಚಿನ ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಅನುದಾನ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಜಿ.ಪರಮೇಶ್ವರ್ ಯುವಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಮೌರ್ಯ, ಸಾಮಾಜಿಕ ಹೋರಾಟಗಾರ ಹೊಸಹಳ್ಳಿ ಅಣ್ಣಯ್ಯ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್, ಮಹೇಶ್, ದಲಿತಪರ ಸಂಘಟನೆಗಳ ಮುಖ್ಯಸ್ಥರು, ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇತರರು ಇದ್ದರು. ಹಿರೀಸಾವೆ ಪೊಲೀಸರು ಬಿಗಿಭದ್ರತೆ ಒದಗಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ