ಗೃಹ ಸಚಿವ ಪ್ರಿಯಾಂಕ ಖರ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕ್ಷಮೆ ಕೇಳಲಿ

KannadaprabhaNewsNetwork |  
Published : Nov 08, 2026, 02:15 AM IST
ರಾಮನಗೌಡ ಪಾಟೀಲ | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಗೃಹ ಸಚಿವರು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದು ಕರೆದಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಹಾನಗಲ್ಲ ತಾಲೂಕು ಜೆಡಿಎಸ್ ಅಧ್ಯಕ್ಷ ರಾಮನಗೌಡ ಪಾಟೀಲ ಆಗ್ರಹಿಸಿದ್ದಾರೆ.

ಹಾನಗಲ್ಲ: ರಾಜ್ಯ ಸರ್ಕಾರದ ಗೃಹ ಸಚಿವರು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದು ಕರೆದಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಹಾನಗಲ್ಲ ತಾಲೂಕು ಜೆಡಿಎಸ್ ಅಧ್ಯಕ್ಷ ರಾಮನಗೌಡ ಪಾಟೀಲ ಆಗ್ರಹಿಸಿದ್ದಾರೆ.

ಶನಿವಾರ ಹಾನಗಲ್ಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಅವರು ತಮ್ಮ ಮಿತಿಯನ್ನು ಮೀರಿ ಅವಹೇಳನಕಾರಿಯಾಗಿ ಮಾತನಾಡುವುದು ಸರಿ ಅಲ್ಲ. ಕುಮಾರಸ್ವಾಮಿ ಅವರು ಏನೇ ಹೇಳಿಕೆ ನೀಡಿದರೂ ಅದರಲ್ಲಿ ರಾಜ್ಯ ದೇಶದ ಹಿತವಿರುತ್ತದೆ. ಸಮಾಜದ ಉನ್ನತಿಗಾಗಿ ಜನತೆ ಮೆಚ್ಚುವ ಹಾಗೆ ಆಡಳಿತದಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದು ಕರೆದಿರುವುದು ಇಡೀ ರಾಜ್ಯದ ಜನತೆಗೆ ಮಾಡಿದ ಅವಮಾನ. ಇದನ್ನು ಜೆಡಿಎಸ್ ಪಕ್ಷ ಸೇರಿದಂತೆ ರಾಜ್ಯದ ಜನತೆ ಖಂಡಿಸುತ್ತದೆ. ಪ್ರಿಯಾಂಕ್ ಖರ್ಗೆ ಅವರು ಎಚ್.ಡಿ.ಕುಮಾರಸ್ವಾಮಿಯ ಅವರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.ವರದಾ-ಬೇಡ್ತಿ ನದಿ ಜೋಡಣೆ ವಿಷಯದಲ್ಲಿ ರಾಜ್ಯ ಕೇಂದ್ರ ಸರ್ಕಾರಗಳು ಹಿಂದೆ ಬೀಳದೆ ಅತೀ ಶೀಘ್ರವಾಗಿ ಈ ಯೋಜನೆ ಜಾರಿಯಾಗಿ ಹಾವೇರಿ ಸೇರಿದಂತೆ ೫-೬ ಜಿಲ್ಲೆಗಳಿಗೆ ನೀರಾವರಿ ಹಾಗೂ ಕುಡಿಯುವ ನೀರಿನ ಸುವ್ಯವಸ್ಥೆಗೆ ಅನುಕೂಲ ಕಲ್ಪಿಸಬೇಕು. ಕಾರವಾರ ಜಿಲ್ಲೆಯವರು ಈ ಯೋಜನೆಯನ್ನು ತಡೆಯುವ ಪ್ರಯತ್ನ ನಡೆಸಿರುವುದು ಖಂಡನೀಯ. ವರದಾ-ಬೇಡ್ತಿ ಯೋಜನೆ ಸಾಕಾರದ ಹೋರಾಟದಲ್ಲಿ ಹಾವೇರಿ ಜಿಲ್ಲೆಯ ಹೋರಾಟವನ್ನು ಹತ್ತಿಕ್ಕುವ ಯಾವ ತಂತ್ರಗಳೂ ಫಲಿಸುವುದಿಲ್ಲ ಎಂದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ಮಹಿಳೆಯರಿಗೆ ನೀಡುವ ವಿವಿಧ ಗ್ಯಾರಂಟಿ ಯೋಜನೆಗಳಿಗಾಗಿ ಪುರುಷರ ಜೇಬಿಗೆ ಕತ್ತರಿ ಹಾಕುತ್ತಿರುವ ರಾಜ್ಯ ಸರ್ಕಾರದ ನೀತಿ ಈಗ ಜನರಿಗೆ ಅರ್ಥವಾಗುತ್ತಿದೆ. ರಾಜ್ಯದ ಬೊಕ್ಕಸಕ್ಕೂ ಹೊರೆ, ಸಾರ್ವಜನಿಕರ ಮೇಲೆ ಕರದ ಹೊರೆಯೂ ಇದೆ ಬರ ಪರಿಹಾರ ನೀಡಿಲ್ಲ. ಸರ್ಕಾರದಲ್ಲಿ ಹಣವಿಲ್ಲ. ದಿವಾಳಿ ಹಾದಿಯಲ್ಲಿರು ಸರ್ಕಾರ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ರಾಮನಗೌಡ ಪಾಟೀಲ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಹಜರತಲಿ ಗುಮ್ಜದ, ಬಸವರಾಜ ಶಿವಣ್ಣನವರ, ಮಲಕಪ್ಪ ಆರೇರ, ಶಿವಯೋಗಿ ಹಿರೇಮಠ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ