ಕನ್ನಡಪ್ರಭ ವಾರ್ತೆ ಮಂಗಳೂರು
ಈ ವಿಚಾರದಲ್ಲಿ ಗೃಹ ಸಚಿವರು ಮಾತ್ರವಲ್ಲ ಮುಖ್ಯಮಂತ್ರಿಗಳೂ ಉತ್ತರ ನೀಡಬಹುದು. ಇದರಲ್ಲಿ ಮುಚ್ಚಿ ಹಾಕುವಂತದ್ದು ಏನೂ ಇಲ್ಲ. ದರ್ಶನ್, ಪ್ರಜ್ವಲ್ ರೇವಣ್ಣ ಪ್ರಕರಣಗಳೇ ಇರಲಿ, ನಿಜಾಂಶ ಹೊರಬೇಕು. ತಪ್ಪಾಗಿದ್ದರೆ ಶಿಕ್ಷೆಯಾಗಬೇಕು. ಅಮಾಯಕರಿಗೆ ತೊಂದರೆ ಆಗಬಾರದು ಎಂದವರು ಹೇಳಿದರು.ರಾಷ್ಟ್ರೀಯ ವಾಹಿನಿಗೆ ಸಂದರ್ಶನ ನೀಡುವ ಮೂಲಕ ದೂರುದಾರ ತನ್ನ ಗುರುತು ಪತ್ತೆಗೆ ಕಾರಣವಾಗುತ್ತಿದ್ದಾನೆ ಎಂಬ ಸುದ್ದಿಗಾರರ ಪ್ರಶ್ನೆಗೆ, ದೂರುದಾರ ಏನು ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ಕಾನೂನು ಪ್ರಕಾರ ಯಾವ ಕ್ರಮ ಆಗಬೇಕು ಎಂಬ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ. ಈ ವಿಚಾರ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆರೋಪ, ಪ್ರತ್ಯೋರೋಪಗಳಿಗೆ ಮಾಧ್ಯಮದಲ್ಲೂ ವ್ಯಾಪಕ ಪ್ರಚಾರ ದೊರಕಿದೆ. ಆರೋಪಗಳೆಲ್ಲವೂ ಗಂಭೀರವಾದ ಸಂಗತಿಗಳು. ಹಾಗಾಗಿ ಇದೀಗ ಉತ್ತಮ ಅಧಿಕಾರಿಗಳ ತನಿಖೆಯಿಂದ ಯಾರಿಗೂ ಅನುಮಾನ ಇರದು ಎಂದು ಸಚಿವರು ಹೇಳಿದರು.
ಯಾರ್‍ಯಾರು ಏನೇನೋ ಹೇಳಿಕೆ ನೀಡುವುದಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗದು. ನಿಜಾಂಶ ಏನಿದೆ, ಸಾಕ್ಷ್ಯ ಏನಿದೆ ಅದರ ಪ್ರಕಾರ ಸರ್ಕಾರ ಹಾಗೂ ಪೊಲೀಸ್ ಇಲಾಖೆ ನಡೆದುಕೊಳ್ಳಲಿದೆ ಎಂದರು.ಎಸ್‌ಐಟಿಗೆ ಬೇರೆ ಬೇರೆ ದೂರುಗಳು ದಾಖಲಾಗುತ್ತಿದ್ದು, ಅದರ ತನಿಖೆಯನ್ನು ನಡೆಸಲಿದೆಯೇ ಎಂಬ ಪ್ರಶ್ನೆಗೆ, ದೂರು ಯಾರೂ ಕೊಡಬಹುದು. ತನಿಖೆ ನಡೆಸುವ ಬಗ್ಗೆ ಎಸ್‌ಐಟಿ ನಿರ್ಧರಿಸಲಿದೆ. ದೇಶದಲ್ಲಿ ಇಷ್ಟುದೊಡ್ಡ ಸುದ್ದಿ ಆದಾಗ ಒಳ್ಳೆಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅಪಪ್ರಚಾರ ಮಾಡುವವರಿಗೆ ಸಣ್ಣ ವಿಷಯ ಸಾಕು. ಸತ್ಯವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಒತ್ತಡ ರಹಿತ ತನಿಖೆ ನಡೆಯುತ್ತಿದೆ: ನಾನು ಅನೇಕ ಸಂಘಟನೆಗಳು, ಅದರಲ್ಲಿ ಎಡಪಂಥೀಯ ಸಂಘಟನೆಗಳು ಸೇರಿ ಒತ್ತಡ ಹಾಕಿದ್ದರು ಎಂದಿರುವುದು. ಹಾಗಾಗಿ ಎಸ್‌ಐಟಿ ತನಿಖೆಗೆ ಆದೇಶಿಸಲಾಯಿತು. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರೂ ಎಸ್‌ಐಟಿ ತನಿಖೆಯಾದರೆ ಒಳ್ಳೆಯದು ಎಂದಿದ್ದರು. ನ್ಯಾಯಾಧೀಶ ಗೋಪಾಲ ಗೌಡರೂ ಹೇಳಿಕೆ ನೀಡಿದ್ದರು. ನಾನು ದ.ಕ. ಜಿಲ್ಲಾ ಪೊಲೀಸರೇ ತನಿಖೆ ಮಾಡುತ್ತಾರೆ, ಎಸ್‌ಐಟಿ ಅಗತ್ಯ ಇಲ್ಲ ಎಂದು ಹೇಳಿದ್ದೆ. ಆದರೆ ಎಸ್‌ಐಟಿ ಮಾಡಿದ್ದೇ ಒಳ್ಳೆಯದಾಯಿತು. ಇಲ್ಲವಾದರೆ ಸ್ಥಳೀಯ ಪೊಲೀಸರು ಸರಿಯಾಗಿ ಮಾಡಿಲ್ಲ ಎಂಬ ಗೂಬೆ ಕೂರಿಸುವ ಕೆಲಸ ಆಗುತ್ತಿತ್ತು. ಉತ್ತಮ ಅಧಿಕಾರಿಗಳ ಮೂಲಕ ಒತ್ತಡವಿಲ್ಲದೆ ತನಿಖೆ ನಡೆಯುತ್ತಿದೆ ಎಂದರು.
ಷಡ್ಯಂತರ ಅಲ್ಲಗಳೆಯಲಾರೆ: ಸಚಿವ ದಿನೇಶ್ ಗುಂಡೂರಾವ್
ಕ್ಷೇತ್ರಕ್ಕೂ ತನಿಖೆಗೂ ಸಂಬಂಧ ಇಲ್ಲ
ಧರ್ಮಸ್ಥಳ ಗ್ರಾಮದಲ್ಲಿ ಅನಾಥ ಶವಗಳನ್ನು ಹೂಳಿದ ಆರೋಪದ ಹಿಂದೆ ಯಾವುದೇ ಷಡ್ಯಂತ್ರ ಇರಬಹುದು ಎಂಬ ಆರೋಪವನ್ನೂ ಅಲ್ಲಗಳೆಯಲಾಗದು. ತನಿಖೆ ಮೂಲಕವೇ ಅದು ಹೊರಬರಬೇಕಿದೆ. ಆದರೆ ಅದು ಸಾಬೀತುಗೊಳ್ಳಬೇಕಾದರೆ ತನಿಖೆ ಮೂಲಕವೇ ಗೊತ್ತಾಗುವುದು.
---------------