ಬೇಡಿಕೆ ಈಡೇರಿಸಲು ಆಗ್ರಹಿಸಿ ವಸತಿ ರಹಿತರ ಪ್ರತಿಭಟನೆ

KannadaprabhaNewsNetwork |  
Published : Nov 06, 2025, 01:30 AM IST
ಹೆಸಗಲ್ ಗ್ರಾ.ಪಂ. ವ್ಯಾಪ್ತಿಯ ವಸತಿ ರಹಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್ ವೃತ್ತದಲ್ಲಿ ಬುಧವಾರ ಹೆಸಗಲ್ ಗ್ರಾಮ ಮತ್ತು ಬಿಳಗುಳ ಗ್ರಾಮಾಭಿವೃದ್ಧಿ ಸಮಿತಿಯಿಂದ ಸೂರಿನ ಸಮರಕ್ಕಾಗಿ ಗ್ರಾಮಸ್ಥರು  ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರುಹೆಸಗಲ್ ಗ್ರಾಪಂ ವ್ಯಾಪ್ತಿಯ ವಸತಿ ರಹಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಬುಧವಾರ ಹೆಸಗಲ್ ಗ್ರಾಮ ಮತ್ತು ಬಿಳಗುಳ ಗ್ರಾಮಾಭಿವೃದ್ಧಿ ಸಮಿತಿಯಿಂದ ಸೂರಿಗಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

- ಮೂಡಿಗೆರೆ ತಾಲೂಕಿನ ಹೆಸಗಲ್‌ ಗ್ರಾಮಸ್ಥರ ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಹೆಸಗಲ್ ಗ್ರಾಪಂ ವ್ಯಾಪ್ತಿಯ ವಸತಿ ರಹಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಬುಧವಾರ ಹೆಸಗಲ್ ಗ್ರಾಮ ಮತ್ತು ಬಿಳಗುಳ ಗ್ರಾಮಾಭಿವೃದ್ಧಿ ಸಮಿತಿಯಿಂದ ಸೂರಿಗಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಮೂಡಿಗೆರೆಯಲ್ಲಿ ನಡೆದ ನಿವೇಶನ ರಹಿತರ ಪ್ರತಿಭಟನೆಗೆ ಜಿಲ್ಲಾಡಳಿತ ಸದ್ಯಕ್ಕೆ 5 ಎಕರೆ ಭೂ ಮಂಜೂರಾತಿ ವ್ಯವಸ್ಥೆ ಕಲ್ಪಿಸಿದ್ದು ಇದು ಪ್ರಾರಂಭಿಕ ಜಯ ವಾಗಿದೆ. ಆದರೆ, 400ಕ್ಕೂ ಹೆಚ್ಚಿರುವ ನಿವೇಶನ ರಹಿತರಿಗೆ 5 ಎಕರೆ ಭೂ ಪ್ರದೇಶ ಸಾಕಾಗುವುದಿಲ್ಲ ಎಂದರು.ಈಗಾಗಲೇ ತಾವು ಜಿಲ್ಲಾಧಿಕಾರಿಗಳೊಂದಿಗೆ ನಿವೇಶನ ರಹಿತರ ಸಂಬಂಧ ಚರ್ಚೆ ನಡೆಸಿದ್ದು, ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಉಳಿದವರಿಗೂ ನಿವೇಶನದ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ. ಅಲ್ಲದೇ 94ಸಿ ಅರ್ಜಿಯನ್ನು ಪುನರ್ ಪ್ರಾರಂಭಿಸಿ ನಿವೇಶನ ಒದಗಿಸಲು ಜಿಲ್ಲಾಡಳಿತ ಮುಂದಾಗಲಿದೆ ಎಂದು ಹೇಳಿದರು.ನಿವೇಶನ ರಹಿತರು ತೋಟ ಅಥವಾ ವಿಶಾಲವಾದ ಬಂಗಲೆ ನಿರ್ಮಿಸಿಕೊಳ್ಳಲು ಜಾಗ ಕೇಳುತ್ತಿಲ್ಲ. ಬದುಕಲು 30-40 ಅಡಿ ನಿವೇಶನಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಸ್ವಲ್ಪ ಸಮಯಾವಕಾಶ ಬೇಕಿದ್ದು, ಈ ಬಗ್ಗೆ ವಿಧಾನ ಪರಿಷತ್‌ನಲ್ಲೂ ನಿವೇಶನ ರಹಿತರ ಪರವಾಗಿ ವಿಚಾರ ಪ್ರಸ್ತಾಪಿಸಿ ನ್ಯಾಯಯುತವಾಗಿ ದೊರೆಯಬೇಕಾದ ಸಲವತ್ತನ್ನು ಒದಗಿಸಲು ಪ್ರಯತ್ನಿಸುತ್ತೇನೆ ಎಂದರು.ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳು ಅವ್ಯವಹಾರ ನಡೆದಿವೆ ಎಂಬ ದೂರುಗಳಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗ್ರಾಪಂ ಪಿಡಿಒಗಳಿಂದ ಸೂಕ್ತ ದಾಖಲಾತಿ ಪಡೆದುಕೊಂಡು ಅವ್ಯವಹಾರ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತೇವೆ ಎಂದು ಹೇಳಿದ್ದಾರೆ.ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ಪಟ್ಟಣಕ್ಕೆ ಸಮೀಪವಿರುವ ಹೆಸಗಲ್ ಗ್ರಾಪಂ ವ್ಯಾಪ್ತಿಯಲ್ಲಿ ಹತ್ತಾರು ವರ್ಷಗಳಿಂದ ವಾಸಿಸುತ್ತಿರುವ ನಿವೇಶನ ರಹಿತರಿಗೆ ಮನೆ ನಿರ್ಮಿಸಿಕೊಳ್ಳಲು ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಈ ಜಾಗದಲ್ಲಿ ಸುಮಾರು 30 ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳ ಜಾಗವಿದ್ದು ಆ ಸ್ಥಳವನ್ನು ನಿವೇಶನ ರಹಿತರಿಗೆ ನೀಡಬೇಕು ಎಂದು ಹೇಳಿದರು.ದೇಶಕ್ಕೆ ಸ್ವಾತಂತ್ರ್ಯ ಬಂದು ಏಳೂವರೆ ದಶಕಗಳು ದಾಟಿದರೂ ಸ್ಥಳೀಯರಿಗೆ ತುಂಡು ಭೂಮಿಯಲ್ಲಿ ಮನೆ ನಿರ್ಮಿಸಿ ಕೊಳ್ಳಲು ಸಾಧ್ಯವಾಗದಿರುವುದು ದುರ್ದೈವದ ಸಂಗತಿ. ಈ ಜಾಗ ಅರಣ್ಯಕ್ಕೆ ಸೇರಿದ್ದಲ್ಲ. ಸಂಪೂರ್ಣ ಗೋಮಾಳ ಜಾಗ ವಾದ ಕಾರಣ, ಜಿಲ್ಲಾಡಳಿತ ಅರ್ಥಮಾಡಿಕೊಂಡು ಮೊದಲ ಆದ್ಯತೆಯಲ್ಲಿ ಹೆಸಗಲ್ ಗ್ರಾ.ಪಂ. ವ್ಯಾಪ್ತಿಯ ನಿವೇಶನ ರಹಿತರಿಗೆ ಪ್ರಾಶಸ್ತ್ಯ ನೀಡಬೇಕು ಎಂದು ಆಗ್ರಹಿಸಿದರು.94ಸಿ ಹಿಂದೆ ಕಾಗೋಡು ತಿಮ್ಮಪ್ಪ ಸಚಿವರಾದ ವೇಳೆ ಬಡವರು ಮನೆ ನಿರ್ಮಿಸಿಕೊಂಡ ಜಾಗವನ್ನು ಅವರಿಗೇ ನೀಡಬೇಕು ಎಂಬ ಕಾನೂನು ರೂಪಿಸಿದ್ದರು. ಹಾಗಾಗಿ ನಿವೇಶನ ರಹಿತರಿಗೆ ಕನಿಷ್ಠ 30-40 ಅಳತೆಯಲ್ಲಿ ಸ್ಥಳಾವಕಾಶ ಕಲ್ಪಿಸಿ ದುಡಿಯುವ ವರ್ಗದವರಿಗೆ ಬದುಕಲು ದಾರಿ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಮುಖಂಡ ದೀಪಕ್‌ ದೊಡ್ಡಯ್ಯ ಮಾತನಾಡಿ, ಹೆಸಗಲ್ ಗ್ರಾಮದ ವಸತಿ ರಹಿತರಿಗೆ 15 ಎಕರೆ ಜಾಗವನ್ನು ಆಶ್ರಯ ನಿವೇಶಕ್ಕಾಗಿ ಮೀಸಲಿರಿಸಬೇಕು. ರದ್ದುಗೊಳಿಸಿರುವ 94ಸಿ ಅರ್ಜಿ ಪುನರ್ ಆರಂಭಿಸಿ ಅರ್ಹರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ತಿಳಿಸಿದರು.ಪ್ರತಿಭಟನೆಯಲ್ಲಿ ದಸಂಸ ಮುಖಂಡ ಮರ್ಲೆ ಅಣ್ಣಯ್ಯ, ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್‌ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

5 ಕೆಸಿಕೆಎಂ 2

ಹೆಸಗಲ್ ಗ್ರಾ.ಪಂ. ವ್ಯಾಪ್ತಿಯ ವಸತಿ ರಹಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್ ವೃತ್ತದಲ್ಲಿ ಬುಧವಾರ ಹೆಸಗಲ್ ಗ್ರಾಮ ಮತ್ತು ಬಿಳಗುಳ ಗ್ರಾಮಾಭಿವೃದ್ಧಿ ಸಮಿತಿಯಿಂದ ಸೂರಿನ ಸಮರಕ್ಕಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

PREV

Recommended Stories

ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ನಿಂದ ರಸಪ್ರಶ್ನೆ ಸ್ಪರ್ಧೆ
ಕುತಂತ್ರ-ಅಸೂಯೆಯಿಂದ ಟನಲ್‌ ರಸ್ತೆಗೆ ಬಿಜೆಪಿ ವಿರೋಧ : ಡಿ.ಕೆ.ಸು