ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ಏರ್ಪಡಿಸಿರುವ ಪಂದ್ಯಾಟಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
ಕಬಡ್ಡಿ ಹಬ್ಬದ ಅಂಗವಾಗಿ ಬೈಚನಹಳ್ಳಿ ಮಾರಮ್ಮ ದೇವಾಲಯದಿಂದ ಶಾಲಾ ಮೈದಾನ ತನಕ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳು, ಸಮುದಾಯ ಬಾಂಧವರು ಮೆರವಣಿಗೆ ನಡೆಸಿದರು.ಮೈದಾನದಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಒಕ್ಕಲಿಗ ಸಂಘದ ರಾಜ್ಯ ನಿರ್ದೇಶಕ ಬಾಗೂರು ನಂಜೇಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಶಿವರುದ್ರಯ್ಯ, ಜಿಪಂ ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಪ್ರಮುಖರಾದ ಬಿ.ಬಿ.ಭಾರತೀಶ್ ಸೇರಿದಂತೆ ಒಕ್ಕಲಿಗ ಯುವ ವೇದಿಕೆಯ ಪದಾಧಿಕಾರಿಗಳಾದ ಜೈರಾಜ್, ಚಂದ್ರಶೇಖರ್ ಹೇರೂರು ಜಗದೀಶ್, ಕಿರಣ್ ಮತ್ತಿತರರು ಇದ್ದರು.