ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ

KannadaprabhaNewsNetwork |  
Published : Aug 30, 2025, 01:00 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್ (ಜಾಹೀರಾತು ಪೂರಕ)ಲಂ  | Kannada Prabha

ಸಾರಾಂಶ

ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಂಗಳೂರು ವಿಭಾಗ ಮಟ್ಟದ ಪದಾಧಿಕಾರಿಗಳ ಮತ್ತು ನಿವೃತ್ತ ನೌಕರರ ಹಾಗೂ ಕುಟುಂಬ ಪಿಂಚಣಿದಾರರ ಸಮಾವೇಶದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ನೌಕರರ ಸಂಘ ಸದೃಢ, ಸಮರ್ಥವಾಗಿದ್ದಾಗ ಮಾತ್ರ ಸರ್ಕಾರ ಮಾತು ಕೇಳುತ್ತದೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಶಾಖೆಯಿಂದ ವಿನಾಯಕ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಬೆಂಗಳೂರು ವಿಭಾಗದ ಮಟ್ಟದ ಪದಾಧಿಕಾರಿಗಳ ಮತ್ತು ನಿವೃತ್ತ ನೌಕರರ ಹಾಗೂ ಕುಟುಂಬ ಪಿಂಚಣಿದಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ಖರ್ಚು ಮಾಡುತ್ತಿದೆ. ನಾಮಿನಲ್ ಅಮೌಂಟ್ ಕೊಡುವಂತೆ ಸರ್ಕಾರದ ಗಮನ ಸೆಳೆದಿದ್ದೇವೆ. ಹಂತ ಹಂತವಾಗಿ ನಿವೃತ್ತ ನೌಕರರ ಸಮಸ್ಯೆಗಳ ನಿವಾರಣೆಗೆ ಭೈರಪ್ಪನವರು ಮತ್ತು ನಾನು ಸಾಕಷ್ಟು ಸಾರಿ ಸರ್ಕಾರದ ಜೊತೆ ಮಾತನಾಡಿದ್ದೇವೆ. ಬೇಡಿಕೆಗಳ ಈಡೇರಿಕೆಗಾಗಿ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಹಿಂದೆ ಮುಂದೆ ನೋಡಬಾರದೆಂದು ನಿವೃತ್ತ ನೌಕರರಲ್ಲಿ ಮನವಿ ಮಾಡಿದರು. ಸಂಘಟನೆ ಕಟ್ಟುವುದು ಕಷ್ಟದ ಕೆಲಸ. ಟೀಕೆ, ಟಿಪ್ಪಣಿ, ಸಮಸ್ಯೆ, ಗೊಂದಲಗಳು ಎದುರಾಗುವುದು ಸಹಜ. ಇದರ ನಡುವೆ ನಿವೃತ್ತ ನೌಕರರು ಸಂಘಟನೆ ಕಟ್ಟಿದ್ದೀರಿ. ಐಎಎಸ್ ಅಧಿಕಾರಿಗಳು ಹಾಗೂ ಮುಖ್ಯ ಇಂಜಿನಿಯರ್‌ಗಳು ನಿವೃತ್ತರಾದ ಕೂಡಲೆ ಸಂಘದಲ್ಲಿ ಗುರುತಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಸರ್ಕಾರದ ಸೌಲಭ್ಯಗಳೇನಾದರೂ ಸಿಕ್ಕಲ್ಲಿ ಮೊದಲು ಪಡೆದುಕೊಳ್ಳುವುದು ಅವರೆ. ಹಾಗಾಗಿ ಎಚ್ಚರಿಸುವ ಕೆಲಸವಾಗಬೇಕು ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ.ಎಲ್.ಭೈರಪ್ಪ ಮಾತನಾಡಿ, ರಾಜ್ಯ ಸರ್ಕಾರಿ ನೌಕರರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ರಾಜ್ಯದಲ್ಲಿ 4.20 ಲಕ್ಷ ನಿವೃತ್ತ ನೌಕರರು ಹಾಗೂ 1 ಲಕ್ಷ ಕುಟುಂಬ ಪಿಂಚಣಿದಾರರಿದ್ದಾರೆ. ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರು ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ಪಡೆದು ಆರಾಮಾಗಿದ್ದಾರೆನ್ನುವ ಮನೋಭಾವನೆ ಜನಸಾಮಾನ್ಯರಲ್ಲಿದೆ. ಅದೇ ರಾಜಕಾರಣಿಗಳು ಯಾವ ರೀತಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆನ್ನುವ ಬಗ್ಗೆ ಯಾರು ಚಿಂತಿಸುವುದಿಲ್ಲ. ಸರ್ಕಾರದಿಂದ ಆರ್ಥಿಕ, ಸಾಮಾಜಿಕ ಸೌಲಭ್ಯಗಳನ್ನು ಪಡೆದುಕೊಳ್ಳಲು ನಿವೃತ್ತ ನೌಕರರಿಗೆ ಸಂಘಟನೆ ಬಹಳ ಮುಖ್ಯ ಎಂದು ಹೇಳಿದರು.

ರಾಜ್ಯ ಸರ್ಕಾರ ಏನೆ ಯೋಜನೆಗಳನ್ನು ಜಾರಿಗೆ ತರಲಿ ಅದನ್ನು ಜನಸಾಮಾನ್ಯರಿಗೆ ತಲುಪಿಸುವವರು ಸರ್ಕಾರಿ ನೌಕರರು. ನಿವೃತ್ತ ನೌಕರರು ರಾಜ್ಯದ ಮೂಲೆ ಮೂಲೆಯಲ್ಲಿದ್ದಾರೆ. ಆಳುವ ಸರ್ಕಾರಗಳು ವಿರೋಧ ಮಾಡಿಕೊಂಡರೆ ಅಧಿಕಾರ ನಡೆಸಲು ಸಾಧ್ಯವಿಲ್ಲ. ಸೇವೆಯಲ್ಲಿದ್ದಾಗ ಅನೇಕ ಸಮಸ್ಯೆಗಳಿರುತ್ತವೆ. ನಿವೃತ್ತಿಯಾದ ಮೇಲೆ ಸಮಸ್ಯೆಗಳು ಗಂಭೀರವಾಗಿರುತ್ತವೆ. ನಿವೃತ್ತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸಂಧ್ಯಾ ಸುರಕ್ಷಾ ಯೋಜನೆ, ಎಂಟನೆ ವೇತನ ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ. 70 ವರ್ಷದಿಂದ ಎಂಬತ್ತು ವರ್ಷ ವಯೋಮಾನದವರಿಗೆ ಶೇ.10ರಷ್ಟು ಮೂಲ ಪಿಂಚಣಿಯಲ್ಲಿ ಹೆಚ್ಚಿಸಬೇಕು.

ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರೇಮ್‍ನಾಥ್ ಮಾತನಾಡಿ ನಿವೃತ್ತ ನೌಕರರ ಕಷ್ಠ-ಸುಖ ಕೇಳಲು ಯಾರು ಇಲ್ಲದ ಕಾರಣ ಸಂಘಟನೆ ಅನಿವಾರ್ಯ. ಹಾಗಾಗಿ ನಿವೃತ್ತ ನೌಕರರು ಸಂಘವನ್ನು ಬಲಪಡಿಸುವಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕವಾಗಿರಬೇಕೆಂದು ಕರೆ ನೀಡಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರುಗಳಾದ ಜೆ.ಸಿ.ಮಂಜುನಾಥ್, ನಂಜಪ್ಪ, ಜಿಲ್ಲಾ ಶಾಖೆಯ ಗೌರವಾಧ್ಯಕ್ಷ ವೈ.ಚಂದ್ರಶೇಖರಯ್ಯ, ನಿಕಟಪೂರ್ವ ಅಧ್ಯಕ್ಷ ಆರ್.ರಂಗಪ್ಪರೆಡ್ಡಿ, ಖಜಾಂಚಿ ಎನ್.ಆರ್.ಭೈಯಣ್ಣ, ಉಪಾಧ್ಯಕ್ಷ ಬಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಟಿ.ತಿಮ್ಮಪ್ಪ ಹಾಗೂ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ