ಡೆಂಘೀ ನಿಯಂತ್ರಣಕ್ಕೆ ಪ್ರಾಮಾಣಿಕ ಯತ್ನ: ಸುರೇಶ್

KannadaprabhaNewsNetwork |  
Published : May 16, 2025, 01:46 AM IST
ಪೋಟೋ೧೫ಸಿಎಲ್‌ಕೆ೨ ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ನಗರಸಭೆ ಪೌರಕಾರ್ಮಿಕರಿಗೆ ಏರ್ಪಡಿಸಿದ್ದ ಈಡೀಸ್‌ಲಾರ್ವ ಕುರಿತು ಒಂದುದಿನದ ಕಾರ್ಯಗಾರವನ್ನು ಡೆಂಗ್ಯೂ ನಿಯಂತ್ರಣಾಧಿಕಾರಿ ಸುರೇಶ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ನಗರಸಭೆ ಪೌರಕಾರ್ಮಿಕರಿಗೆ ಏರ್ಪಡಿಸಿದ್ದ ಈಡೀಸ್‌ ಲಾರ್ವ ಕುರಿತು ಒಂದು ದಿನದ ಕಾರ್ಯಗಾರವನ್ನು ಸುರೇಶ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ರಾಷ್ಟ್ರೀಯ ಡೆಂಘೀ ದಿನ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ನಗರಸಭೆ ಪೌರಕಾರ್ಮಿಕರಿಗೆ ಈಡೀಸ್‌ ಲಾರ್ವ ಕುರಿತು ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಡೆಂಘೀ ನಿಯಂತ್ರಣಾಧಿಕಾರಿ ಸುರೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಳೆದ ಹಲವಾರು ದಶಕಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವಾರು ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದೆ. ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ಪೌರಕಾರ್ಮಿಕರೂ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕತರು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಎಂತಹ ಸಂದರ್ಭದಲ್ಲೂ ಡೆಂಘೀ ಹರಡದಂತೆ ಎಚ್ಚರಿಕೆ ವಹಿಸಲಾಗಿದೆ. ಸಾರ್ವಜನಿಕರೂ ಸಹ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್, ನಿರೀಕ್ಷಣಾಧಿಕಾರಿಗಳಾ ಅಮೃತ್‌ರಾಜ್, ಸಂಜಯ್, ನಗರಸಭೆ ಆರೋಗ್ಯ ನಿರೀಕ್ಷಕರಾದ ಗೀತಾಕುಮಾರಿ, ಗಣೇಶ್, ಸಾಗರ್, ಭೀಮಣ್ಣ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೋಳಿ ಸಂಭ್ರಮದಲ್ಲಿ ಮಿಂದೆದ್ದ ಬೆಂಗಳೂರಿನ ಯುವ ಸಮೂಹ
ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಪ್ರತಿಷ್ಠಿತ ಯುಗಾದಿ ಪುರಸ್ಕಾರ ಪ್ರಕಟ