ಕನ್ನಡ ನಾಡು, ನುಡಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ

KannadaprabhaNewsNetwork | Published : Jul 8, 2024 12:39 AM

ಸಾರಾಂಶ

Honest work for kannada bhavan in challakere

-ಸೂಕ್ತ ಸ್ಥಳದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ: ಶಾಸಕ ಟಿ.ರಘುಮೂರ್ತಿ

--

ಕನ್ನಡಪ್ರಭ ವಾರ್ತೆ ಚಳ್ಳಕೆರೆ: ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಆತ್ಮಾಭಿಮಾನ ಹುಟ್ಟುವಲ್ಲಿ ನಗರದ ಹೃದಯ ಭಾಗದಲ್ಲಿ ಕನ್ನಡ ಭವನ ನಿರ್ಮಾಣಕ್ಕೆಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.

ಅವರು, ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾ. ಘಟಕ ಕಮಲಹಂಪನಾ ಸ್ಮರಣಾರ್ಥ ಆಯೋಜಿಸಿದ್ದ ಕವಿಗೋಷ್ಠಿ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಡಿದರು.

ಕಳೆದ ಹಲವಾರು ಕಾರ್ಯಕ್ರಮಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಮನವಿ ನೀಡುತ್ತಾ ಬಂದಿದ್ದಾರೆ. ನಾನು, ಸಹ ಅದರ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವೆ. ಮುಂದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಭವನದಲ್ಲೇ ಮಾಡೋಣ. ನಾಡು ನುಡಿ, ಜಲ, ಭೂಮಿಯ ಬಗ್ಗೆ ಪ್ರತಿಯೊಬ್ಬರು ಎಚ್ಚೆತ್ತುಕೊಳ್ಳಬೇಕಿದೆ. ತಾಲೂಕಿನಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ ನಾಡೋಜ ಕಮಲಹಂಪನಾ ಈ ನಾಡಿನ ಅದ್ಭುತ ಲೇಖಕಿ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ಸಂಸ್ಕಾರವನ್ನು ಕಲಿಸಿ ಸಮಾಜದ ಬಹುಮುಖ ಪ್ರತಿಭೆಯನ್ನಾಗಿ ಮಾಡಬೇಕೆಂದು ಕಿವಿಮಾತು ಹೇಳಿದರು.

ಲೇಖಕಿ ಕಮಲಹಂಪನಾ ಅವರ ಬಗ್ಗೆ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಪ್ರೊ.ಶಿವಲಿಂಗಪ್ಪ, ಪುರುಷ ಪ್ರಧಾನ ಸಮಾಜದಲ್ಲಿ ಮಹಿಳಾ ಸಮುದಾಯಕ್ಕೆ ಭದ್ರ ನೆಲೆ ಹಾಕಿಕೊಟ್ಟ ಮಹಾನ್ ಚಿಂತಕಿ ಕಮಲಹಂಪನಾ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಲೋಕದ ಸಾಕ್ಷಾ ಚಿತ್ರವನ್ನು ನಿರ್ಮಾಣ ಮಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಗಟ್ಟಿಯಾಗಿ ನೆಲೆಯೂರಿದವರು. ನಾಡು, ನುಡಿಯ ಬಗ್ಗೆ ತಮ್ಮದೇಯಾದ ಛಾಪು ಉಂಟು ಮಾಡಿದ ಮಹಾನ್ ವ್ಯಕ್ತಿ.

ಕನ್ನಡ ಸಾಹಿತ್ಯದ ಹಲವಾರು ಪ್ರಕಾರಗಳನ್ನು ಅದ್ಯಾಯನ ಮಾಡಿ ಮಹಿಳೆರಿಗೆ ಕಟ್ಟಿಯಾದ ಧ್ವನಿಯಾಗಿ ನೆಲೆನಿಂತವರು ಕಮಲಹಂಪನಾ ಎಂದರು.

ಕಸಾಪ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಮಾತನಾಡಿ, ಚಳ್ಳಕೆರೆ ನಗರದಲ್ಲಿ ಕನ್ನಡ ಭಾಷೆ ಉಳಿಸಿ, ಬೆಳೆಸಲು ಕನ್ನಡ ಭವನದ ಅವಶ್ಯಕತೆ ಇದೆ. ಶಾಸಕರು ಈ ಬಗ್ಗೆ ತುರ್ತಾಗಿ ಗಮನಹರಿಸಬೇಕು. ಕನ್ನಡ ನಾಡು ನುಡಿಯ ಬಗ್ಗೆ ಜನರಲ್ಲಿ ಜಾಗೃತಿ ಉಂಟು ಮಾಡಲು ಸೂಕ್ತ ಕನ್ನಡ ಭವನ ಬೇಕಿದೆ. ಪರಿಷತ್ ನಡೆಸುವ ಎಲ್ಲಾ ಕಾರ್ಯಗಳಿಗೂ ಸೂಕ್ತ ವೇದಿಕೆಯ ಅವಶ್ಯಕತೆ ಇದೆ ಎಂದು ಮನವಿ ಮಾಡಿದರು. ಕನ್ನಡ ಕಾರ್ಯಕ್ರಮ ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ಪ್ರತಿಯೊಂದು ಮನೆ, ಮನೆಯ ಕಾರ್ಯಕ್ರಮವಾಗಿ ರೂಪುಗೊಳ್ಳಬೇಕಿದೆ. ಇದೇ ತಿಂಗಳು ೧೨ರಂದು ನಗರಕ್ಕೆ ಆಗಮಿಸಲಿರುವ ಕನ್ನಡ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಪ್ರಾಂಶುಪಾಲ ರಾಮರೆಡ್ಡಿ, ಡಾ.ಬಿ.ವಿ.ರಾಜಣ್ಣ, ಡಾ.ಕೆ.ಚಿತ್ತಯ್ಯ, ಕಸಾಪ ಹೋಬಳಿ ಘಟಕದ ಅಧ್ಯಕ್ಷ ದಯಾನಂದ, ಈರಣ್ಣ, ಕೆಂಚವೀರನಹಳ್ಳಿಮಲ್ಲೇಶ್, ಮಹಂತೇಶ್, ದೊಡ್ಡಯ್ಯ, ಎಚ್.ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

------

ಪೋಟೋ೭ಸಿಎಲ್‌ಕೆ೧

ಚಳ್ಳಕೆರೆ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಆಯೋಜಿಸಿದ್ದ ಕವಿಗೋಷ್ಠಿ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

----

ಪೋಟೋ: ೭ಸಿಎಲ್‌ಕೆ೦೧ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನಿಸಲಾಯಿತು.

Share this article