ಕನ್ನಡಪ್ರಭವಾರ್ತೆ ಚಳ್ಳಕೆರೆ
ಪಟ್ಟಣದ ಪಾವಗಡ ರಸ್ತೆಯ ಶ್ರೀಸಾಯಿಬಾಬಾ ಮಂದಿರದಲ್ಲಿ ಚಳ್ಳಕೆರೆ, ಹಿರಿಯೂರು ಮತ್ತು ಮೊಳಕಾಲ್ಮೂರು ವ್ಯಾಪ್ತಿಯ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳಿಗೆ ತರಬೇತಿ ನೀಡುವ ಮೂಲಕ ಹಾಲು ಉತ್ಪಾದನೆ ಮತ್ತು ಮಾರಾಟದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿದಂತಾಗುತ್ತದೆ. ಹಾಲು ಉತ್ಪಾದಕರ ಸಂಘವನ್ನು ಲಾಭದತ್ತ ಮುನ್ನಡೆಸಬೇಕಿದೆ. ರೈತರು ತಮ್ಮ ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಸಹ ನಡೆಸಬೇಕು. ಈ ನಿಟ್ಟಿನಲ್ಲಿ ಸಂಘದ ಕಾರ್ಯದರ್ಶಿಗಳು ರೈತರನ್ನು ಜಾಗೃತೆಗೊಳಿಸಬೇಕು ಎಂದರು.ಶಿವಮೊಗ್ಗ ಹಾಲುಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಉತ್ಪಾದನಾ ಕೇಂದ್ರಗಳು ಉತ್ತಮ ಆಡಳಿತ ನಡೆಸುವ ಮೂಲಕ ಒಕ್ಕೂಟದ ಬಲವರ್ಧನೆಗೆ ಕಾರಣಕರ್ತರಾಗಿದ್ದಾರೆ. ಶಿವಮೊಗ್ಗ ಹಾಲು ಒಕ್ಕೂಟ ಕಳೆದ ಹಲವಾರು ದಶಕಗಳಿಂದ ಹೈನುಗಾರಿಕೆಯನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರೈತರೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.