ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಕಾಮಗಾರಿ ಮುಕ್ತಾಯ: ಎಂ.ಶ್ರೀನಿವಾಸ್

KannadaprabhaNewsNetwork |  
Published : Feb 28, 2026, 01:30 AM IST
ನರಸಿಂಹರಾಜಪುರ ತಾಲೂಕಿನ ಭದ್ರಾ ನದಿಯಲ್ಲಿ ನೂತನವಾಗಿ ನಿರ್ಮಿಸಿರುವ ಹೊನ್ನೇಕೊಡಿಗೆ ಸಂಪರ್ಕ ಸೇತುವೆಯನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಶುಕ್ರವಾರ ವೀಕ್ಷಣೆ ಮಾಡಿದರು. | Kannada Prabha

ಸಾರಾಂಶ

ನರಸಿಂಹರಾಜಪುರಭದ್ರಾ ನದಿಯಲ್ಲಿ ನಿರ್ಮಿಸಿರುವ ₹38.50 ಕೋಟಿ ವೆಚ್ಚದ ಹೊನ್ನೇಕೊಡಿಗೆ- ನರಸಿಂಹರಾಜಪುರ ಸಂಪರ್ಕ ಸೇತುವೆ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಸಂತಸ ವ್ಯಕ್ತಪಡಿಸಿದರು.

- ₹38.50 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸಂಪರ್ಕ ಸೇತುವೆ ವೀಕ್ಷಣೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಭದ್ರಾ ನದಿಯಲ್ಲಿ ನಿರ್ಮಿಸಿರುವ ₹38.50 ಕೋಟಿ ವೆಚ್ಚದ ಹೊನ್ನೇಕೊಡಿಗೆ- ನರಸಿಂಹರಾಜಪುರ ಸಂಪರ್ಕ ಸೇತುವೆ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಸಂತಸ ವ್ಯಕ್ತಪಡಿಸಿದರು.

ಶುಕ್ರವಾರ ಪಟ್ಟಣದಿಂದ ಪ್ರವಾಸಿ ಮಂದಿರದಿಂದ 3 ಕಿ.ಮೀ. ದೂರದ ಭದ್ರಾ ನದಿಯಲ್ಲಿ ನೂತನವಾಗಿ ನಿರ್ಮಿಸಿರುವ ₹38 ಕೋಟಿ ವೆಚ್ಚದ ಹೊನ್ನೇಕೊಡಿಗೆ- ನರಸಿಂಹರಾಜಪುರ ಸಂಪರ್ಕ ಸೇತುವೆ ಲೋಕಾರ್ಪಣೆಗೆ ಸಿದ್ಧವಾಗಿದೆ. ಎಡೇಹಳ್ಳಿಗೆ ನರಸಿಂಹರಾಜಪುರ ಎಂಬ ಹೆಸರು ನಾಮಕರಣವಾಗಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಮಾಡಿಸಿಕೊಡಲು ಮನವಿ ಮಾಡಿದ್ದೆ. ಸಿಎಂ ₹20 ಕೋಟಿ ಮಂಜೂರು ಮಾಡಿ 2017 ರಲ್ಲಿ ಸೇತುವೆಗೆ ಶಂಕುಸ್ಥಾಪನೆ ಮಾಡಿದ್ದರು. ಆದರೆ, ಕೋವಿಡ್ ವ್ಯಾಪಿಸಿದ್ದರಿಂದ ಕಾಮಗಾರಿ ವಿಳಂಬವಾಗಿತ್ತು. ಶೀರ್ಘ ಈ ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದಾರೆ ಎಂದರು.

ನರಸಿಂಹರಾಜಪುರ ಪಟ್ಟಣದ ಪ್ರವಾಸಿ ಮಂದಿರದಿಂದ ಈ ಸೇತುವೆಗೆ ಬರಲು ₹6 ಕೋಟಿ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ರಸ್ತೆ ಆಗಿದೆ. ಸೇತುವೆ ಹಾಗೂ ರಸ್ತೆ ಕಾಮಗಾರಿಗೆ ಸಿದ್ದರಾಮಯ್ಯ ₹44.50 ಕೋಟಿಯಷ್ಟು ದೊಡ್ಡ ಮೊತ್ತದ ಹಣ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಹೇಳುತ್ತೇನೆ. ಈ ಹಿಂದೆ ಹೊನ್ನೇಕೊಡಿಗೆ ಗ್ರಾಪಂನ ಸಾವಿರಾರು ಜನರು ನರಸಿಂಹ ರಾಜಪುರಕ್ಕೆ ಬರಲು 19 ಕಿ.ಮೀ.ಸುತ್ತಿಕೊಂಡು ಬರಬೇಕಿತ್ತು. ಈಗ ಹೊನ್ನೇಕೊಡಿಗೆ ಸಂಪರ್ಕ ಸೇತುವೆಯಿಂದ ಕೇವಲ 3 ಕಿ.ಮೀ.ಗೆ ಪಟ್ಟಣಕ್ಕೆ ಬರಬಹುದು.16 ಕಿ.ಮೀ.ಉಳಿತಾಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಪಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ, ಮಾಜಿ ಸದಸ್ಯ ಸುನೀಲ್ ಕುಮಾರ್,ಕಾಫಿ ಬೆಳೆಗಾರ ನಾರಾಯಣ ಮೂರ್ತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರರಿಗೆ ಸಚಿವ ಸ್ಥಾನ ನೀಡಿ
56 ಸಾವಿರ ಹುದ್ದೆಗಳ ಭರ್ತಿ ಹೇಳಿಕೆ ಬಿಜೆಪಿ ಹೋರಾಟದ ಫಲ