ಹುಬ್ಬಳ್ಳಿ:
ಶನಿವಾರ ತಾಲೂಕಿನ ಇನಾಂ ವೀರಾಪೂರ ಗ್ರಾಮಕ್ಕೆ ತೆರಳಿ ವಿವೇಕಾನಂದ ದೊಡಮನಿ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನರ ವಿರುದ್ಧ ದೂರು ದಾಖಲಾಗಿದ್ದು, ಈಗಾಗಲೇ 8 ಜನರನ್ನು ಬಂಧಿಸಿದ್ದು, ಒಬ್ಬರು ಅಪ್ರಾಪ್ತ, ಉಳಿದ ಐವರು ಮಹಿಳೆಯರಿದ್ದಾರೆ. ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯವು ಮುಖ್ಯ ಸಾಕ್ಷಿಯಾಗಿದೆ. ಅದನ್ನು ವಶಕ್ಕೆ ಪಡೆದಿದ್ದು, ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದೆ. ದೌರ್ಜನ್ಯ ಪ್ರಕರಣದಲ್ಲಿ 60 ದಿನಗಳೊಳಗೆ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈ ಪ್ರಕರಣಕ್ಕೆ ಡಿಜಿಟಲ್ ಸಾಕ್ಷ್ಯಾಧಾರಗಳು ಬಹಳ ಮುಖ್ಯವಾಗಿದ್ದು ನೊಂದವರಿಗೆ ನ್ಯಾಯ ಒದಗಿಸಲಾಗುವುದು ಎಂದರು.ಎಸ್ಪಿ ಗುಂಜನ್ ಆರ್ಯ ಮಾತನಾಡಿ, ಇನಾಂವೀರಾಪುರ ಗ್ರಾಮದಲ್ಲಿ ದೌರ್ಜನ್ಯ ಪ್ರಕರಣ ನಡೆದ ನಂತರದಲ್ಲಿ ಪೊಲೀಸ್ ಇಲಾಖೆಯಿಂದ ಅಗತ್ಯ ರಕ್ಷಣೆ ಕಾರ್ಯ ನಿರ್ವಹಿಸಲಾಗಿದೆ. ಈ ಪ್ರಕರಣದಲ್ಲಿ ಅಮಾನತು ಮಾಡಲಾಗಿರುವ ಪೇದೆಗಳನ್ನು ತನಿಖೆ ಮಾಡಿ, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ಡಿಸಿಆರ್‌ಇ ಬೆಳಗಾವಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದ ಇದ್ದರು.