ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪ, ಬಸವಕಲ್ಯಾಣ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಮಾ.7ರಂದು ಬೆಳಗ್ಗೆ 11.30ಕ್ಕೆ ಇಲ್ಲಿನ ಥೇರ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ
ಬಸವಕಲ್ಯಾಣ: ವಿಶ್ವ ಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪ, ಬಸವಕಲ್ಯಾಣ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಮಾ.7ರಂದು ಬೆಳಗ್ಗೆ 11.30ಕ್ಕೆ ಇಲ್ಲಿನ ಥೇರ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆಶಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವದು. ಕಾರ್ಯಕ್ರಮದ ಉದ್ಘಾಟನೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ. ಅಧ್ಯಕ್ಷತೆ ಸಚಿವ ಈಶ್ವರ ಖಂಡ್ರೆವಹಿಸಿದರೆ ಅಭಿನಂದನಾ ನುಡಿಯನ್ನು ಗೋ.ರು ಚನ್ನಬಸಪ್ಪ ಹಾಗೂ ಹಿರಿಯ ಸಾಹಿತಿ ಡಾ.ಅರವಿಂದ ಜತ್ತಿ ನುಡಿಯಲಿದ್ದಾರೆ. ಗೌರವ ಉಪಸ್ಥಿತಿಯನ್ನು ಸಚಿವ ರಹೀಮ್ ಖಾನ್ ಹಾಗೂ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್ನಾಬಾದ್‌ವಹಿಸಲಿದ್ದಾರೆ. ಸಚಿವರಾದ ಡಾ.ಜಿ.ಪರಮೇಶ್ವರ ಹಾಗೂ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಸೇರಿದಂತೆ ಸರ್ಕಾರದ ಇನ್ನಿತರ ಸಚಿವರು, ಶಾಸಕರುಗಳು ಅನೇಕ ಮಠಾಧೀಶರುಗಳು ಉಪಸ್ಥಿತರಿರಲಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.