ಅರವಿಂದ ಮೆಳ್ಳಿಗೇರಿಗೆ ಗೌರವ ಡಾಕ್ಟರೇಟ್‌ ಪದವಿ

KannadaprabhaNewsNetwork |  
Published : Dec 19, 2024, 01:32 AM IST
18ಎಚ್‌ಯುಬಿ21ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ವತಿಯಿಂದ ಏಕಸ್ ಚೇರಮನ್ ಅರವಿಂದ ಮೆಳ್ಳಿಗೇರಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ಏಕಸ್ ಚೇರಮನ್ ಅರವಿಂದ ಮೆಳ್ಳಿಗೇರಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಬುಧವಾರ ನಗರದ ಕೆಎಲ್ ಇ ತಾಂತ್ರಿಕ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಕುಲಾಧಿಪತಿ ಹಾಗೂ ಕೆಎಲ್‌ಇ ಸಂಸ್ಥೆ ಚೇರಮನ್ ಡಾ. ಪ್ರಭಾಕರ ಕೋರೆ ಪದವಿ ಪ್ರದಾನ ಮಾಡಿದರು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಏಕಸ್ ಚೇರಮನ್ ಅರವಿಂದ ಮೆಳ್ಳಿಗೇರಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಬುಧವಾರ ನಗರದ ಕೆಎಲ್ ಇ ತಾಂತ್ರಿಕ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಕುಲಾಧಿಪತಿ ಹಾಗೂ ಕೆಎಲ್‌ಇ ಸಂಸ್ಥೆ ಚೇರಮನ್ ಡಾ. ಪ್ರಭಾಕರ ಕೋರೆ ಪದವಿ ಪ್ರದಾನ ಮಾಡಿದರು.

ಗೌಡಾ ಪದವಿ ಸ್ವೀಕರಿಸಿ ಮಾತನಾಡಿದ ಅರವಿಂದ ಮೆಳ್ಳಿಗೇರಿ, ಇಂದು ಹೆಚ್ಚಾಗಿ ವಿದ್ಯಾರ್ಥಿಗಳು ಸೇವಾ ಕ್ಷೇತ್ರದತ್ತ ಆಸಕ್ತಿ ವಹಿಸುವುದರೊಂದಿಗೆ ಉತ್ಪಾದನಾ ಕ್ಷೇತ್ರದಿಂದ ವಿಮುಖರಾಗುತ್ತಿದ್ದಾರೆ. ಉತ್ಪಾದನಾ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ದೇಶದಲ್ಲಿ ಈ ವಲಯಕ್ಕೆ ಸಾಕಷ್ಟು ಬೇಡಿಕೆಯೂ ಇದೆ. ಹೀಗಾಗಿ ವಿದ್ಯಾರ್ಥಿಗಳು ಉದ್ಯೋಗದಾತರಾಗಿ ಹೊರಹೊಮ್ಮುವತ್ತ ಹೆಚ್ಚಿನ ಆಸಕ್ತಿ ವಹಿಸುವಂತೆ ಕರೆ ನೀಡಿದರು.

ಎಂಜಿನೀಯರಿಂಗ್ ಮಾಡಿದವರು ಸಾಕಷ್ಟು ಜನ ಇರಬಹುದು. ಆದರೆ, ನಿಮ್ಮದೇ ಕ್ಷೇತ್ರದಲ್ಲಿ ವಿಭಿನ್ನತೆ ಕಂಡುಕೊಂಡು ಅದರಲ್ಲಿ ಉತ್ಕೃಷ್ಟವಾದದನ್ನು ಮುನ್ನೆಲೆಗೆ ತರಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ನಿಮ್ಮ ಆಸಕ್ತಿ ಕ್ಷೇತ್ರದತ್ತ ಒಲವು ತೋರಿದರೆ ಸಾಧನೆಗೆ ದಾರಿಯಾಗುತ್ತದೆ ಎಂದರು.ಉದ್ಪಾದನಾ ಕ್ಷೇತ್ರಕ್ಕೆ ಬನ್ನಿ:

ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯಮಶೀಲಗುಣ ಬೆಳೆಸಿಕೊಂಡು ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡಬೇಕು. ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ಪಾದನಾ ಕ್ಷೇತ್ರಕ್ಕೆ ಆದ್ಯತೆ ನೀಡಿದರೆ ಭಾರತ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆ ಕಡಿಮೆಯಾಗಲಿದೆ ಎಂದರು.ಕೆಎಲ್‌ಇ ತಾಂತ್ರಿಕ ವಿವಿ ಕುಲಾಧಿಪತಿ ಹಾಗೂ ಕೆಎಲ್‌ಇ ಸಂಸ್ಥೆ ಚೇರಮನ್ ಡಾ. ಪ್ರಭಾಕರ ಕೋರೆ ಮಾತನಾಡಿ, ಕನ್ನಡ ಸರ್ಕಾರಿ ಶಾಲೆಯಲ್ಲಿ ಕಲಿತ ಅನೇಕರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ದೊಡ್ಡವರಾಗಿದ್ದಾರೆ. ಅರವಿಂದ ಮೆಳ್ಳಿಗೇರಿ ಸೇರಿ ತಾವು ಕೂಡ ಕನ್ನಡ ಸರ್ಕಾರಿ ಶಾಲೆಯಲ್ಲಿ ಕಲಿತಿದ್ದೇವೆ. ಪ್ರಸ್ತುತ ಅನೇಕ ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಂಡು ನೆಮ್ಮದಿ ಜೀವನಕ್ಕೆ ಜಾರುತ್ತಿದ್ದಾರೆ. ಇದರ ಪರಿಣಾಮದಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುವಂತಾಗಿದೆ. ಈ ಸಮಸ್ಯೆ ನಿವಾರಣೆಗೆ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಉದ್ಯೋಗದಾತರಾಬೇಕು ಎಂದರು.ಕೆಎಲ್‌ಇ ತಾಂತ್ರಿಕ ವಿವಿ ಪ್ರೊ ಕುಲಪತಿ ಡಾ. ಅಶೋಕ ಶೆಟ್ಟರ, ಉಪ ಕುಲಪತಿ ಪ್ರೊ.ಪ್ರಕಾಶ ತೇವಾರಿ, ಡಿ.ಬಿ.ಕೊಟ್ಟೂರಶೆಟ್ಟರ, ರವಿ ಗುತ್ತಲ್ ಸೇರಿದಂತೆ ಹಲವರಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ