ಮುಖ್ಯ ಶಿಕ್ಷಕ ಮಲ್ಲಿಕಾರ್ಜುನಯ್ಯಗೆ ಗೌರವ ಡಾಕ್ಟರೇಟ್

KannadaprabhaNewsNetwork |  
Published : Oct 15, 2026, 01:15 AM IST
ಪೋಟೋ 1 : ಗೌರವ ಡಾಕ್ಟರೇಟ್ ಪಡೆದ ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ | Kannada Prabha

ಸಾರಾಂಶ

ನೆಲಮಂಗಲ ತಾಲೂಕಿನ ಮೈಲನಹಳ್ಳಿ ಗ್ರಾಮದವರಾದ ಮಲ್ಲಿಕಾರ್ಜುನಯ್ಯ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿದ ಯೂನಿವರ್ಸ್ ಕಲ್ಟರ್ ಆ್ಯಂಡ್ ಎಜುಕೇಷನ್ ಪ್ರೊಟೆಕ್ಷನ್ ಕಮಿಷನ್ ಇಂಡಿಯಾ ಸಂಸ್ಥೆಯು ಅಕ್ಟೋಬರ್ 12ರಂದು ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.

ದಾಬಸ್‍ಪೇಟೆ: ಶೈಕ್ಷಣಿಕ ಕ್ಷೇತ್ರ ಸೇರಿ ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಕಳೆದ 38ವರ್ಷಗಳಿಂದ ಸಲ್ಲಿಸುತ್ತಿರುವ ನಿರಂತರ ಸೇವೆಯನ್ನು ಗುರುತಿಸಿ ಮಾಚೋನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ ಎಂ.ಆರ್. ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ನೆಲಮಂಗಲ ತಾಲೂಕಿನ ಮೈಲನಹಳ್ಳಿ ಗ್ರಾಮದವರಾದ ಮಲ್ಲಿಕಾರ್ಜುನಯ್ಯ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿದ ಯೂನಿವರ್ಸ್ ಕಲ್ಟರ್ ಆ್ಯಂಡ್ ಎಜುಕೇಷನ್ ಪ್ರೊಟೆಕ್ಷನ್ ಕಮಿಷನ್ ಇಂಡಿಯಾ ಸಂಸ್ಥೆಯು ಅಕ್ಟೋಬರ್ 12ರಂದು ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.

ಸುಮಾರು ನಾಲ್ಕು ದಶಕಗಳ ಸುದೀರ್ಘ ಸೇವಾವಧಿಯಲ್ಲಿ ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅವರು, ತಮ್ಮ ವೃತ್ತಿಪರ ಸೇವೆಯ ಮೂಲಕ ಗುರುತಿಸಿಕೊಂಡಿದ್ದಾರೆ. ಗೌರವ ಡಾಕ್ಟರೇಟ್ ಲಭಿಸಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನೂರಾರು ಶಿಕ್ಷಕರು ಹಾಗೂ ವಿದ್ಯಾರ್ಥಿ ಮಿತ್ರರು ಮಲ್ಲಿಕಾರ್ಜುನಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸದ ತಿಪ್ಪೆಯಲ್ಲಿ ಅವಧಿ ಮುಗಿದ ಔಷಧಿ ಡಬ್ಬಿಗಳು ಪತ್ತೆ
ಟಿಎಲ್‌ಬಿಸಿ ಮೇಲ್ಭಾಗ ನೀರಿನ ಕಳ್ಳಾಟ ಬಯಲು