ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸನ್ಮಾನ

KannadaprabhaNewsNetwork |  
Published : Apr 25, 2026, 01:15 AM IST
ಸ | Kannada Prabha

ಸಾರಾಂಶ

ಚಿಕ್ಕಮಗಳೂರುಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ಬೃಂದಾ ಎಂ.ತಾಪ್ಸೆ, ಬೀಕನಹಳ್ಳಿ ಮೂರಾರ್ಜಿ ದೇಸಾಯಿ ಶಾಲೆಯಲ್ಲಿ ಓದಿ 625ಕ್ಕೆ 622 ಅಂಕ ಗಳಿಸಿದ ರಕ್ಷಾ ಯು.ಆರ್‌ ಸೇರಿದಂತೆ ಅತಿ ಹೆಚ್ಚಿನ ಅಂಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅತ್ಯಂತ ಭಾವಸ್ಪರ್ಶಿಯಾಗಿ ಜಿಲ್ಲಾಧಿಕಾರಿ ಎನ್‌.ಎಂ.ನಾಜರಾಜ್‌ ಹಾಗೂ ಜಿಪಂ ಸಿಇಒ ಕೀರ್ತನಾ ಅಭಿನಂದಿಸಿದರು.

ಬೃಂದಾ ಸೇರಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಭಾವಸ್ಪರ್ಶಿ ಸನ್ಮಾನ । ಜಿಲ್ಲಾಧಿಕಾರಿ ಎನ್‌.ಎಂ.ನಾಜರಾಜ್‌

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ಬೃಂದಾ ಎಂ.ತಾಪ್ಸೆ, ಬೀಕನಹಳ್ಳಿ ಮೂರಾರ್ಜಿ ದೇಸಾಯಿ ಶಾಲೆಯಲ್ಲಿ ಓದಿ 625ಕ್ಕೆ 622 ಅಂಕ ಗಳಿಸಿದ ರಕ್ಷಾ ಯು.ಆರ್‌ ಸೇರಿದಂತೆ ಅತಿ ಹೆಚ್ಚಿನ ಅಂಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅತ್ಯಂತ ಭಾವಸ್ಪರ್ಶಿಯಾಗಿ ಜಿಲ್ಲಾಧಿಕಾರಿ ಎನ್‌.ಎಂ.ನಾಜರಾಜ್‌ ಹಾಗೂ ಜಿಪಂ ಸಿಇಒ ಕೀರ್ತನಾ ಅಭಿನಂದಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ 616 ಅಂಕ ಪಡೆದ ಸಖರಾಯಪಟ್ಟಣ ಸರ್ಕಾರಿ ಪ್ರೌಢಶಾಲೆಯ ಅರ್ಪಿತಾ, 593 ಅಂಕ ಪಡೆದ ಕುರುಬರಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆರ್.ಸಂಗೀತ ಹಾಗೂ 592 ಅಂಕ ಪಡೆದ ಮಾಚಗೊಂಡನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್.ಎಸ್.ಅಂಕಿತಾ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಎಸ್‌ಎಸ್‌ಎಲ್‌ಸಿಯಲ್ಲಿ ಶೇ.94.99 ರಷ್ಟು ಉತ್ತಮ ಫಲಿತಾಂಶದೊಂದಿಗೆ ನಗರದ ಸೆಂಟ್ ಮೇರಿಸ್ ಶಾಲೆ ವಿದ್ಯಾರ್ಥಿನಿ ಬೃಂದಾ ಎಂ. ತಾಪ್ಸೆ 625ಕ್ಕೆ 625 ಅಂಕ ಪಡೆದಿರುವುದು ಜಿಲ್ಲೆಗೆ ಹೆಮ್ಮೆ ಸಂಗತಿ ಎಂದರು.

ಜಿಲ್ಲೆಯ ಸರ್ಕಾರಿ ಶಾಲೆಗಳು ಶೇ. 97.02 ರಷ್ಟು ಉತ್ತಮ ಫಲಿತಾಂಶ ಬಂದಿದೆ. 69 ಸರ್ಕಾರಿ ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. ಅದಕ್ಕೆ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಡಿಡಿಪಿಐ, ಮಕ್ಕಳ ಪೋಷಕರು ಹಾಗೂ ಮಕ್ಕಳ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ಹೇಳಿದರು.

ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಇದೇ ಫಲಿತಾಂಶ ಬರುವಂತೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಶ್ರಮಿಸಲಿ ಎಂದ ಅವರು, ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕರೆಸಿ ಸನ್ಮಾನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಕರೆಸಿ ಸನ್ಮಾನ ಮಾಡಬೇಕೆಂಬ ಉದ್ದೇಶ ಹೊಂದಲಾಗಿದೆ. ಇದರಿಂದ ಬೇರೆ ಮಕ್ಕಳಿಗೆ ಸ್ಫೂರ್ತಿಯಾಗಲಿದೆ. ವಿದ್ಯಾರ್ಥಿಗಳ ಶ್ರಮ ಗುರುತಿಸಿದಂತೆ ಆಗುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94.99 ಫಲಿತಾಂಶ ಪಡೆದಿದೆ. ಅಂದರೇ 100 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ. ಈ ಹಿಂದೆ ಲಕ್ಷಾಂತರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತೀರ್ಣರಾಗುತ್ತಿದ್ದರು. ಅನುತೀರ್ಣರಾದ ವಿದ್ಯಾರ್ಥಿಯ ಜೀವನದಲ್ಲಿ ದೊಡ್ಡ ಸಮಸ್ಯೆಗಳು ಎದುರಾಗುತ್ತಿದ್ದವು. ಪ್ರತಿಯೊಂದು ವಿಚಾರದಲ್ಲೂ ಎಸ್‌ಎಸ್‌ಎಲ್‌ಸಿ ಇಂದು ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ತಿಳಿಸಿದರು.

ನಮ್ಮ ಹಂತದಲ್ಲಿನ ತಂಡದ ಪರಿಶ್ರಮದಿಂದ ಈ ಸಾಧನೆ ಮಾಡಲಾಗಿದೆ. ನಮ್ಮ ಗುರಿ ಶೇ.100 ಇತ್ತು. ಶಾಲಾ ಹಂತದಲ್ಲಿ ಹಲವಾರು ಕಾರ್ಯಕ್ರಮ ಹಮ್ಮಿಕೊಂಡ ಪರಿಣಾಮ ಅತ್ಯುತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ. ಶಿಕ್ಷಣ ಇಲಾಖೆ ಪರಿಶ್ರಮ ದಿಂದ ಶೇ.94.99 ಫಲಿತಾಂಶ ಬರಲು ಸಾಧ್ಯವಾಗಿದೆ. ಈ ಫಲಿತಾಂಶ ಬಹಳ ಖುಷಿಕೊಟ್ಟಿದೆ. ಸೆಂಟ್ ಮೇರಿಸ್ ವಿದ್ಯಾರ್ಥಿನಿ 625ಕ್ಕೆ 625 ಅಂಕ ಪಡೆದಿರುವುದು ಐತಿಹಾಸಿಕ ಸಾಧನೆ ಎಂದು ಹೇಳಿದರು.

ಅದ್ದೂರಿ ಸಮಾರಂಭದ ಮೂಲಕ ಉತ್ತೇಜನಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲಾ-ಕಾಲೇಜು ಹಾಗೂ ಅತಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು, ತಾಲೂಕುವಾರು ಹೆಚ್ಚಿನ ಅಂಕಪಡೆದ ಮಕ್ಕಳನ್ನು ಕರೆಸಿ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು, ಪ್ರಾಂಶುಪಾಲಕರನ್ನು ಕರೆಸಿ ಸನ್ಮಾನಿಸಲಾಗುವುದು ಎಂದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಮೊದಲಾದವರಿದ್ದರು.

---ಬಾಕ್ಸ್‌ ---

ಟಾಪರ್‌ ಉತ್ತರ ಪತ್ರಿಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಂಚಿಕೆ

ರಾಜ್ಯಕ್ಕೆ ಟಾಪರ್ ಆಗಿರುವ ಬೃಂದಾ ಎಂ.ತಾಪ್ಸೆ ಅವರ ಉತ್ತರ ಪತ್ರಿಕೆಯನ್ನು ಸ್ಕ್ಯಾನ್‌ ಮಾಡಿಸಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ 2026-27ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವುದಕ್ಕೆ ತೀರ್ಮಾನಿಸಲಾಗಿದೆ. ಪರೀಕ್ಷೆಯಲ್ಲಿ ಹೇಗೆ ಉತ್ತರ ಬರೆಯಬೇಕು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವುದು ಇದರ ಉದ್ದೇಶ ಎಂದು ಜಿಪಂ ಸಿಇಒ ಕೀರ್ತನಾ ಹೇಳಿದರು.---ಬಾಕ್ಸ್‌---

ಫೇಲ್‌ ಆಗಿರುವ ಪ್ರತಿ ವಿದ್ಯಾರ್ಥಿಗೆ ಒಬ್ಬ ಶಿಕ್ಷಕರ ಉಸ್ತುವಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ 570 ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ಪಾಸ್‌ ಆಗುವುದಕ್ಕೆ ಬೇಕಾದ ಸಿದ್ಧತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಪ್ರತಿ ಫೇಲ್‌ ಆದ ವಿದ್ಯಾರ್ಥಿಗೆ ಒಬ್ಬ ಶಿಕ್ಷಕರನ್ನು ನಿಯೋಜಿಸಿ ಪರೀಕ್ಷೆ 2ರಲ್ಲಿ ಪಾಸ್‌ ಆಗುವಂತೆ ಸಿದ್ಧಪಡಿಸಲಾಗುವದು ಎಂದು ಕೀರ್ತನಾ ತಿಳಿಸಿದರು.

---ಬಾಕ್ಸ್---

ದಾಖಲಾತಿ ಆಂದೋಲನಾ ಆರಂಭ:

2026-27ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೇ.100 ದಾಖಲಾತಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ಸಕಲ ಸೌಲಭ್ಯ ನೀಡಲಾಗುತ್ತಿದೆ. ಶಾಲಾ ದಾಖಲಾತಿ ಆಂದೋಲನಾ ಶುರು ಮಾಡಿದ್ದು, ಪೋಷಕರಿಂದ ಇದಕ್ಕೆ ಬೆಂಬಲ ನೀಡಬೇಕು ಎಂದು ಎಚ್.ಎಸ್.ಕೀರ್ತನಾ ಮನವಿ ಮಾಡಿದರು.----ಬಾಕ್ಸ್‌---

ಈ ವರ್ಷ ಹೊಸ 16 ಕೆಪಿಸಿ ಶಾಲೆ ಆರಂಭ

ಕೆ-ಪಿಸಿ ಶಾಲೆಗಳು ಜಿಲ್ಲೆಯಲ್ಲಿ ಈ ಹಿಂದೆ 8 ಶಾಲೆಗಳು ಇದ್ದು, ಮುಂಬರುವ ಶೈಕ್ಷಣಿಕ ವರ್ಷದಿಂದ ಹೊಸದಾಗಿ 16 ಕೆಪಿಸಿ ಶಾಲೆಗಳು ಆರಂಭವಾಗುತ್ತಿವೆ. ಒಟ್ಟು 24 ಕೆಪಿಸಿ ಶಾಲೆಗಳು ಕಾರ್ಯಾಚರಣೆ ಮಾಡಲಿವೆ. ಇಂಗ್ಲೀಷ್ ಮಾಧ್ಯಮ ಕೂಡ ಇದೆ.---ಕೋಟ್‌ ---

ಸರ್ಕಾರಿ ಶಾಲೆಗಳ ಬಗ್ಗೆ ಕೆಲವು ಪೋಷಕರ ಅಸಡ್ಡೆ ಭಾವನೆ ಇದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಅದನ್ನು ಸುಳ್ಳಾಗಿಸಿದೆ. ಜಿಲ್ಲೆಯ ಫಲಿತಾಶ ಶೇ.94.99 ಇದ್ದರೂ ಸರ್ಕಾರಿ ಶಾಲೆಗಳ ಫಲಿತಾಂಶ ಶೇ.97 ರಷ್ಟಿದೆ. ಸರ್ಕಾರಿ ಶಾಲೆಗಳು ಉತ್ತಮ ಸಾಧನೆ ಮಾಡಿವೆ. ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದರಿಂದ ಸರ್ಕಾರಿ ಶಾಲೆಗಳು ಉಳಿಯುತ್ತಿವೆ.

- ಎಚ್‌.ಎಸ್‌. ಕೀರ್ತನಾ, ಸಿಇಒ ಜಿಪಂ, ಚಿಕ್ಕಮಗಳೂರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಸಾಂಸ್ಕೃತಿಕ ಲೋಕದ ಧೃವತಾರೆ ಡಾ.ರಾಜ್‌
ಒಕ್ಕಲಿಗ, ವೀರಶೈವ ಲಿಂಗಾಯತರಿಗೆ ಅನ್ಯಾಯವಾದರೆ ಸಹಿಸಲ್ಲ