ಕನ್ನಡಪ್ರಭ ವಾರ್ತೆ ಭಾಲ್ಕಿ
ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಅಂದು ಬೆಳಗ್ಗೆ 11ಕ್ಕೆ ಥೇರ ಮೈದಾನದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ರಾಜ್ಯದ ಪ್ರತಿಷ್ಠಿತ ಮಠಗಳ ನೂರಕ್ಕೂ ಹೆಚ್ಚು ಮಠಾಧೀಶರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸಹದ್ಯೋಗಿಗಳು, ಗಣ್ಯರು, ಸಾಹಿತಿಗಳು, ಚಿಂತಕರು ಭಾಗಿಯಾಗಲಿದ್ದಾರೆ ಎಂದರು.
12ನೆಯ ಶತಮಾನದಲ್ಲಿ ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿರುವುದು ಅಸಂಖ್ಯಾತ ಬಸವ ಅನುಯಾಯಿಗಳಿಗೆ ಸಂತಸ ತಂದಿದೆ.ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಮಠಾಧೀಶರು ಇದುವರೆಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಸರ್ಕಾರಗಳನ್ನು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡುವಂತೆ ಮನವಿ ಮಾಡಿದರು. ಭರವಸೆ ಸಿಕ್ಕಿತೆ ಹೊರತು ಕಾರ್ಯರೂಪಕ್ಕೆ ಬರಲಿಲ್ಲ ಎಂದರು.
ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿಯು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡುವಂತೆ ನಿರ್ಣಯ ಕೈಗೊಳ್ಳಲಾಗಿತ್ತು.
ನಂತರ ಸಿಎಂ ಸಿದ್ದರಾಮಯ್ಯ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿದ್ದು ಬಸವಾಭಿಮಾನಿಗಳು ಸೇರಿ ಎಲ್ಲ ಸಮುದಾಯದ ಜನರಿಗೆ ಹರ್ಷ ತರಿಸಿತು.
ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಮಠಾಧೀಶರ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವುದು ಐತಿಹಾಸಿಕ ತೀರ್ಮಾನ. ಜತೆಗೆ ಬಸವಕಲ್ಯಾಣದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಿ ಸಿಎಂ ಸಿದ್ದರಾಮಯ್ಯರನ್ನು ಅಭಿನಂದಿಸಲಾಗುತ್ತಿದೆ. ಇದಕ್ಕೂ ಮುನ್ನ ಅಂದು ಅನುಭವ ಮಂಟಪದಲ್ಲಿ ದಾಸೋಹ ಭವನ ಲೋಕಾರ್ಪಣೆ ಮಾಡಿ, ಅನುಭವ ಮಂಟಪ ಕಾಮಗಾರಿ ವೀಕ್ಷಣೆ ನಡೆಸಲಿದ್ದಾರೆ ಎಂದು ತಿಳಿಸಿದರು.