ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ದೀಪಾವಳಿ ಮುಗಿದ ನಂತರ ಎಲ್ಲೆಡೆ ಸಂಭ್ರಮ ಸಡಗರದಿಂದ ಹೆಣ್ಣು ಮಕ್ಕಳೆಲ್ಲ ಒಂದೆಡೆ ಸೇರಿ ಹೊಸದ್ಯಾವರ ಹಬ್ಬದ ಆಚರಣೆ ಮಾಡುತ್ತಾರೆ. ಈ ಮೂಲಕ ಬಾಂಧವ್ಯದ ಬೆಸುಗೆ ಮೂಡಿಸಲಾಗುತ್ತದೆ. ದೀಪಾವಳಿ ಮುಗಿದ ಮೊದಲ ಅಥವಾ ಎರಡನೇ ಭಾನುವಾರದಲ್ಲಿ ಹೊಸದ್ಯಾವರ ಹಬ್ಬ ಆಚರಿಸಲಾಗುತ್ತದೆ.ತಲೆಯ ಮೇಲೆ ತಂಬಿಟ್ಟಿನ ದೀಪ
ಹೊಸದ್ಯಾವರ ಹಬ್ಬದಲ್ಲಿ ಭಾಗವಹಿಸುವ ಮಹಿಳೆಯರೆಲ್ಲ ಬಿಳಿಯ ಬಣ್ಣದ ಸೀರೆ ಧರಿಸುತ್ತಾರೆ. ಕೆಲವೆಡೆ, ವಿವಿಧ ಬಣ್ಣದ ಹೊಸ ಸೀರೆಯನ್ನು ತೊಟ್ಟು ಬೆರಳಿಗೆ ಬೆಳ್ಳಿಯ ಉಂಗುರ ಹಾಕಿಕೊಳ್ಳುತ್ತಾರೆ. ತಲೆಯ ಮೇಲೆ ಮಡಿಕೆ ಮತ್ತು ತಂಬಿಟ್ಟಿನ ದೀಪ ಹೊರುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಕುಟುಂಬದ ಹಿರಿಯ ಅಜ್ಜಿಯಿಂದ ಮೊದಲುಗೊಂಡು, ನವ ವಿವಾಹಿತೆವರೆಗೆ ಈ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ.ಶತಾಯುಷಿ ನಾರಾಯಣಮ್ಮ ಭಾಗಿ
ಅವಿಭಕ್ತ ಕುಟುಂಬಗಳೆ ಕಣ್ಮರೆಯಾಗುತ್ತಿರುವ ಈ ಸಂದರ್ಭದಲ್ಲಿ ಹೊಸದ್ಯಾವರ ಆಚರಣೆ ವೇಳೆ ಕುಟುಂಬದ ಎಲ್ಲರೂ ಒಂದೆಡೆ ಸೇರುವುದೆ ವಿಶೇಷ. ಆ ಕ್ಷಣ ಪೂರ್ವಿಕರ ಕಾಲದಲ್ಲಿದ್ದ ಅವಿಭಕ್ತ ಕುಟುಂಬ ಕಣ್ಮುಂದೆ ಬರಲಿದೆ. ಕುಟುಂಬದ ಸದಸ್ಯರು ಒಂದೆಡೆ ಸೇರಿ ಊಟವನ್ನು ತಯಾರಿಸಲಾಗುತ್ತದೆ. ಇದು ಸಮುದಾಯದ ಆಯಾ ಕುಟುಂಬಗಳು ಆಚರಿಸುವುದಾದರೂ, ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮೂಡಿಸುತ್ತದೆ ಎಂದು ತಿಳಿಸಿದರು.