ಕನ್ನಡಪ್ರಭ ವಾರ್ತೆ ಹೊಸನಗರ
ಹೊಸನಗರ ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆ ಹೋರಾಟ ಸಮಿತಿ ವತಿಯಿಂದ ಹೊಸನಗರ ತಾಲೂಕಿನ ನಗರದಿಂದ ರಿಪ್ಪನ್ ಪೇಟೆಯವರೆಗೆ ಆಯೋಜಿಸಿದ್ದ ಬೃಹತ್ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರ ನೆಲೆ ಹೊಸನಗರ ಕ್ಷೇತ್ರ. ಅಲ್ಲಿನ ಜನರ ಬವಣೆಗಳ ನಿವಾರಣೆಗೆ ಅವೈಜ್ಞಾನಿಕ ನೀತಿಯಿಂದ ಕೈತಪ್ಪಿ ಹೋಗಿರುವ ಕ್ಷೇತ್ರ ಪುನರ್ ರಚನೆ ಮಾಡುವುದು ಅತ್ಯಗತ್ಯ. ಈಶಾನ್ಯ ಭಾರತದ ಅಸ್ಸಾಮ್ ಹಾಗೂ ಮಿಜೋರಾಮ್‌ನಲ್ಲಿ ವಿಧಾನಸಭಾ ಕ್ಷೇತ್ರಗಳನ್ನು ಗುರುತಿಸುವಾಗ ಜನಸಂಖ್ಯೆಯನ್ನು ಮಾದರಿ ಆಗಿ ಇಟ್ಟುಕೊಂಡಿಲ್ಲ. ಹೊಸನಗರ ಕೂಡ ದಟ್ಟ ಅರಣ್ಯ ಹಾಗೂ ಐದು ಜಲಾಶಯಗಳಿಂದ ಕೂಡಿದ ತಾಲೂಕು. ಹೀಗಾಗಿ ಅದೇ ಮಾನದಂಡಗಳು ಹೊಸನಗರಕ್ಕೂ ಅನ್ವಯಿಸಲಿ ಎಂದರು.
ಮಾಜಿ ಶಾಸಕ ಬಿ.ಸ್ವಾಮಿರಾವ್ ಮಾತನಾಡಿ, ಹೊಸನಗರ ಸ್ವತಂತ್ರ ವಿಧಾನಸಭಾ ಕ್ಷೇತ್ರಕ್ಕೆ ಒತ್ತಾಯಿಸಿ ಮೂಲೆಗದ್ದೆ ಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಆಯೋಜಿಸಲಾಗಿದೆ. ನಮ್ಮಹೋರಾಟಕ್ಕೆ ಜಯ ಸಿಗುವವರೆಗೂ ಈ ಹೋರಾಟ ನಿಲ್ಲದು ಎಂದರು.ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಭೌಗೋಳಿಕವಾಗಿ ಸಾಗರ-ಹೊಸನಗರ ಕ್ಷೇತ್ರದ ವ್ಯಾಪ್ತಿ ದೊಡ್ಡದಿದೆ. ನಾಡಿಗೆ ಬೆಳಕು ಕೊಟ್ಟು ಯಾವುದೇ ಸೌಕರ್ಯವಿಲ್ಲದೇ ಅನಾಥರಾಗಿದ್ದೇವೆ. ಹೀಗಾಗಿ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ವಿಧಾನ ಸಭಾ ಕ್ಷೇತ್ರ ಅನಿವಾರ್ಯ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಹೊಸನಗರ ಕ್ಷೇತ್ರದ ಪುನರ್ ಸ್ಥಾಪನೆಯ ಬೇಡಿಕೆ ನ್ಯಾಯಯುತವಾಗಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈ ಕ್ಷೇತ್ರ ಸ್ವತಂತ್ರವಾಗಬೇಕಿದೆ ಎಂದರು.
ಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಶಿಮುಲ್ ಅಧ್ಯಕ್ಷ ವಿದ್ಯಾಧರ್, ಸಿಗಂದೂರು ಚೌಡೇಶ್ವರಿ ದೇವಾಲಯದ ಕಾರ್ಯದರ್ಶಿ ರವಿಕುಮಾರ್, ಪ್ರಮುಖರಾದ ಕರುಣಾಕರ ಶೆಟ್ಟಿ, ಸುರೇಶ್ ಸ್ವಾಮಿರಾವ್, ಬೆಳೆಗೋಡು ಗಣಪತಿ, ಹಾಲಗದ್ದೆ ಉಮೇಶ್
-----
-ಶ್ರೀ ರೇಣುಕಾನಂದ ಸ್ವಾಮಿ, ಗರ್ತಿಕೆರೆ ಮಠ.
ಮುಳುಗಡೆ ಕೂಪದಲ್ಲಿ ನಲುಗುತ್ತಿರುವ ಹೊಸನಗರಕ್ಕೆ ಹೊಸ ಬೆಳಕು ಚೆಲ್ಲಬೇಕಾಗಿದೆ. ಈ ಐತಿಹಾಸಿಕ ಪಾದಯಾತ್ರೆಗೆ ಜಾತಿ ಮತ, ಪಂಥ, ಧರ್ಮ, ರಾಜಕಾರಣ ಮೀರಿ ಎಲ್ಲರೂ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗುವವರೆಗೂ ಈ ಹೋರಾಟ ನಿಲ್ಲಬಾರದು.