ಅಭಿವೃದ್ಧಿ ಪರ್ವದಲ್ಲಿ ಹೊಸಕೋಟೆ ಕ್ಷೇತ್ರ; ಶಾಸಕ ಶರತ್ ಬಚ್ಚೇಗೌಡ

KannadaprabhaNewsNetwork |  
Published : Feb 27, 2026, 01:30 AM IST
ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಅಂಕೋನಹಳ್ಳಿ ನಲ್ಲಾಗನಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆAಕಟೇಶ್, ಯುವ ಮುಖಂಡ ನಾರಾಯಣಗೌಡ, ಗಂಗೇಗೌಡ, ಪ್ರಕಾಶ್, ಸೊಮಣ್ಣ, ಕೆಂಪೇಗೌಡ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಯಾವುದೇ ಸಮಸ್ಯೆ ಇಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನ ನೀಡುತ್ತಿದೆ. ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು

ಸೂಲಿಬೆಲೆ: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಯಾವುದೇ ಸಮಸ್ಯೆ ಇಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನ ನೀಡುತ್ತಿದೆ. ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ೨ ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಂಕೋನಹಳ್ಳಿ, ನಲ್ಲಗಾನಹಳ್ಳಿ, ಅರಸನಹಳ್ಳಿ, ಬೆಟ್ಟಹಳ್ಳಿ, ಗಿಡ್ಡಪ್ಪನಹಳ್ಳಿ, ವಳಗೆರೆಪುರ, ಸಾದಪ್ಪನಹಳ್ಳಿ, ಅತ್ತಿಬೆಲೆ, ಹಸಿಗಾಳ, ಸೊಣ್ಣಹಳ್ಳಿಪುರ, ತಿಮ್ಮಸಂದ್ರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ್ದು, ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಈ ವೇಳೆ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆಂಕಟೇಶ್, ಯುವ ಮುಖಂಡ ನಾರಾಯಣಗೌಡ, ಗ್ರಾಪಂ ಮಾಜಿ ಆಧ್ಯಕ್ಷ ಅಕ್ಬರ್ ಅಲಿಖಾನ್, ಸಹಕಾರ ಬ್ಯಾಂಕ್ ನಿರ್ದೇಶಕ ಸುರೇಶ್, ಗ್ರಾಪಂ ಮಾಜಿ ಉಪಾಧ್ಯಕ್ಷ ಅತ್ತಿಬೆಲೆ ನಾಗೇಶ್, ಸದಸ್ಯ ಬಸವರಾಜ್, ಅರಸನಹಳ್ಳಿ ಶಿವಣ್ಣ, ಜಿಲ್ಲಾ ಮಹಿಳಾ ಕಾಂಗ್ರೇಸ್ ಸದಸ್ಯೆ ಡಿ.ಸಿ.ಲಕ್ಷ್ಮಿ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಜಿಲ್ಲೆಯ ರೈಲ್ವೆ, ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ವಿ,ಸೋಮಣ್ಣ