400 ಲಾರಿಗಳ ನಿಲುಗಡೆಗೆ ನಿಲ್ದಾಣ, 120 ಬೆಡ್ ಡಾರ್ಮಿಟರಿಕೃಷ್ಣ ಲಮಾಣಿ
ವಿಜಯನಗರ ಜಿಲ್ಲೆಯ ಅಮರಾವತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿ. ಸಂಸ್ಥೆ ವತಿಯಿಂದ ಹೊಸಪೇಟೆ ಟ್ರಕ್ ಟರ್ಮಿನಲ್ ನಿರ್ಮಾಣವಾಗಿದ್ದು, ಈಗ ಲೋಕಾರ್ಪಣೆ ಆಗುತ್ತಿದೆ. ಒಂದೂವರೆ ದಶಕದ ಕನಸು ನನಸಾಗುತ್ತಿದೆ.
ಮೇ 5ರಂದು ಅಮರಾವತಿ ಗ್ರಾಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಈ ಹೊಸಪೇಟೆ ಟ್ರಕ್ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತವಾರಿ ಸಚಿವ ಜಮೀರ್ ಅಹಮದ್ ಖಾನ್, ಶಾಸಕ ಎಚ್.ಆರ್. ಗವಿಯಪ್ಪ, ಸಂಸದ ಈ. ತುಕಾರಾಂ, ಶಾಸಕರು ಹಾಗೂ ಜನಪ್ರತಿನಿಧಿಗಳು ಕೂಡ ಭಾಗವಹಿಸಲಿದ್ದಾರೆ.ಟ್ರಕ್ ಟರ್ಮಿನಲ್ ಸ್ವರೂಪ:
120 ಬೆಡ್ ಡಾರ್ಮಿಟರಿ:
ಇನ್ನೂ 39 ಏಜೆಂಟ್ ಕೊಠಡಿಗಳು, 9 ಗ್ಯಾರೇಜ್ ಶಾಪ್ ನಿರ್ಮಿಸಲಾಗಿದೆ. 100 ವಾಣಿಜ್ಯ ನಿವೇಶನ, ಎರಡು ಪೆಟ್ರೋಲ್ ಬಂಕ್‌ಗಳು, ಎರಡು ಶೌಚಾಲಯ ಬ್ಲಾಕ್ ನಿರ್ಮಿಸಲಾಗಿದೆ. ಜತೆಗೆ 22 ಉಗ್ರಾಣ ಪ್ಲಾಟ್ ಕೂಡ ನಿರ್ಮಿಸಲಾಗಿದೆ.
ಈ ಟ್ರಕ್ ಟರ್ಮಿನಲ್ 400 ಲಾರಿಗಳ ನಿಲುಗಡೆ ಸಾಮರ್ಥ್ಯ ಹೊಂದಿದೆ. ದೇಶದ ಯಾವುದೇ ಭಾಗದಿಂದ ಬರುವ ಲಾರಿಗಳನ್ನು ಇಲ್ಲಿ ಚಾಲಕರು, ಕ್ಲೀನರ್‌ಗಳು ನಿಲ್ಲಿಸಬಹುದು. ಇದರಿಂದ ಚಾಲಕರಿಗೂ ವಾಸ್ತವ್ಯಕ್ಕೆ ಅನುಕೂಲವೂ ಆಗಲಿದೆ. ಜತೆಗೆ ಈ ಟರ್ಮಿನಲ್ ಬಳಿ ವೈದ್ಯಕೀಯ ಸೌಲಭ್ಯ ಕೂಡ ದೊರೆಯಲಿದೆ. ಅಲ್ಲದೇ, ಈಗ ಜಿಲ್ಲಾಸ್ಪತ್ರೆ ಕಟ್ಟಡ ಕೂಡ ಟರ್ಮಿನಲ್‌ನಿಂದ 5 ಕಿಮೀ ಅಂತರದಲ್ಲಿ ನಿರ್ಮಾಣ ಆಗುತ್ತಿದೆ.
ಹೊಸಪೇಟೆ ಟ್ರಕ್ ಟರ್ಮಿನಲ್‌ನಲ್ಲಿ ಇನ್ನುಳಿದ 17.26 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಪಡಿಸಲು ₹85 ಕೋಟಿ ಮೊತ್ತದ ಪ್ರಸ್ತಾವನೆಯನ್ನು ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿ. ಸಂಸ್ಥೆ ಸರ್ಕಾರಕ್ಕೆ ಸಲ್ಲಿಸಿದೆ. ಈ ಹಣ ಮಂಜೂರಾದರೆ ಮತ್ತೆ 265 ಟ್ರಕ್ ಗಳ ನಿಲುಗಡೆಗೆ ನಿಲ್ದಾಣ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಕೂಡ ಪ್ಲಾನ್ ಮಾಡಲಾಗಿದೆ ಎಂದು ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿ. ಸಂಸ್ಥೆಯ ಕಾರ್ಯನಿರ್ವಾಹಕ ಎಂಜಿನಿಯರ್ ಗಿರಿಗೌಡ ಎನ್.ಜಿ. ''''ಕನ್ನಡಪ್ರಭ''''ಕ್ಕೆ ತಿಳಿಸಿದರು.
ಫುಡ್ ಪಾರ್ಕ್ ಪ್ಲಾನ್:
ಬೆಂಗಳೂರಿನ ಯಶವಂತಪುರ, ಮೈಸೂರು, ಧಾರವಾಡದ ಬೇಲೂರಿನಲ್ಲಿ ಟ್ರಕ್ ಟರ್ಮಿನಲ್ ಈಗಾಗಲೇ ಸ್ಥಾಪಿಸಲಾಗಿದೆ. ಬೆಂಗಳೂರಿನ ದಾಸನಪುರ, ಉತ್ತರ ಕನ್ನಡದ ದಾಂಡೇಲಿ, ಹುಬ್ಬಳ್ಳಿಯ ಅಂಚಟಗೇರಿ, ಚಾಮರಾಜನಗರ -ಗುಂಡ್ಲುಪೇಟೆ, ರಾಯಚೂರಿನ ಯರಮರಸ್‌ನಲ್ಲೂ ಟ್ರಕ್ ಟರ್ಮಿನಲ್ ಶೀಘ್ರವೇ ಪ್ರಾರಂಭವಾಗಲಿವೆ. ಈಗಾಗಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಟ್ರಕ್ ಟರ್ಮಿನಲ್‌ಗಳ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.