ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಯಶಸ್ಸಿಗೆ ಕೆಲಸ ಮಾಡಿ: ಡಾ.ಶರಣಬಸಪ್ಪ ಗಣಜಲಖೇಡ

KannadaprabhaNewsNetwork |  
Published : May 26, 2026, 02:30 AM IST
ಫೋಟೋವಿವರ- (22ಎಚ್‌ಪಿಟಿ2) ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು | Kannada Prabha

ಸಾರಾಂಶ

ಚಿಕಿತ್ಸೆ ಅರಸಿ ಬರುವ ಗರ್ಭಿಣಿಯರು ಮತ್ತು ಬಾಣಂತಿಯರ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ಹೊಸಪೇಟೆ: ಸರ್ಕಾರದಿಂದ ಜಾರಿಯಾಗುತ್ತಿರುವ ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಬೇಕು. ಜಿಲ್ಲೆಯ ಎಲ್ಲ ಆರೋಗ್ಯ ಅಧಿಕಾರಿಗಳು ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು ಎಂದು ಕಲ್ಬುರ್ಗಿ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಉಪನಿರ್ದೇಶಕ ಡಾ. ಶರಣಬಸಪ್ಪ ಗಣಜಲಖೇಡ ಸೂಚಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿಕಿತ್ಸೆ ಅರಸಿ ಬರುವ ಗರ್ಭಿಣಿಯರು ಮತ್ತು ಬಾಣಂತಿಯರ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಸಂಪೂರ್ಣವಾಗಿ ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು. ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡಲಾಗುವ ಲಸಿಕೆಗಳನ್ನು ಕಾಲಕಾಲಕ್ಕೆ ಯಾವುದೇ ಲೋಪವಾಗದಂತೆ ನಿಗದಿತ ಗುರಿ ಸಾಧಿಸಬೇಕು ಎಂದರು.

ಇನ್ನೇನು ಮಳೆಗಾಲ ಹತ್ತಿರ ಬರುತ್ತಿರುವುದರಿಂದ ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸದಾ ಸನ್ನದ್ಧವಾಗಿರಬೇಕು. ತುರ್ತು ಚಿಕಿತ್ಸೆಗೆ ಔಷಧಗಳ ಕೊರತೆಯಾಗದಂತೆ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು. ಸೊಳ್ಳೆಗಳ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಗಾರ ಆಯೋಜಿಸಬೇಕು ಎಂದ ಅವರು ಹೇಳಿದರು.

ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾಯಿ ಕಡಿತ, ಹಾವು ಕಡಿತಕ್ಕೆ ಅಗತ್ಯವಿರುವ ತುರ್ತು ಚಿಕಿತ್ಸಾ ಲಸಿಕೆಗಳು ಹಾಗೂ ಔಷಧಗಳು ಸದಾ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು.

ಕ್ಷಯ ಹಾಗೂ ಕುಷ್ಠರೋಗ ಮುಕ್ತ ಜಿಲ್ಲೆಯಾಗಿಸಿ:

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರಂಭಿಕ ಹಂತದಲ್ಲೇ ಕ್ಷಯ ರೋಗಿಗಳನ್ನು ಸಕಾಲದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಇದರೊಂದಿಗೆ ಕುಷ್ಠರೋಗ ನಿರ್ಮೂಲನೆಗೆ ವಿಶೇಷ ಒತ್ತು ನೀಡಬೇಕು ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್. ಆರ್. ಶಂಕರ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳಾದ ಡಾ. ಜಂಬಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸತೀಶ್ ಚಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ, ಶಸ್ತ್ರಚಿಕಿತ್ಸಕರಾದ ಡಾ. ಹರಿಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಪಿ. ದೊಡ್ಡಮನಿ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

(ರಾಜ್ಯಕ್ಕೂ ಮುಖ್ಯ) ಪ್ರಗತಿಪರ ಚಿಂತನೆ ಯತಿ ವಿಶ್ವೇಶ ತೀರ್ಥರು: ಈಶ್ವರ ಖಂಡ್ರೆ
2015ರ ನಂತರದ ಒತ್ತುವರಿ ತೆರವಿಗೆ ಖಂಡ್ರೆ ಸೂಚನೆ