ಆಸ್ಪತ್ರೆ ಸಂಬಂಧಿತ ಸೋಂಕು ನಿಯಂತ್ರಣ ಅಗತ್ಯ: ಡಾ. ಪೂರ್ಣಿಮಾ

KannadaprabhaNewsNetwork |  
Published : Jun 13, 2026, 02:15 AM IST
 | Kannada Prabha

ಸಾರಾಂಶ

ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೋಂಕು ತಡೆ ಮತ್ತು ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅಗತ್ಯ.

ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ ಸಮಿತಿ ತರಬೇತಿ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಕಾರವಾರ

ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೋಂಕು ತಡೆ ಮತ್ತು ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅಗತ್ಯ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ. ಹೇಳಿದರು.

ಶುಕ್ರವಾರ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ ಸಮಿತಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸೋಂಕು ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಬಲಪಡಿಸಿ, ಆಸ್ಪತ್ರೆ ಸಂಬಂಧಿತ ಸೋಂಕುಗಳನ್ನು ಕಡಿಮೆ ಮಾಡಲು ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ರೋಗಿಗಳ ಸುರಕ್ಷತೆಯನ್ನು ಖಚಿತಪಡಿಸಲು ಇಂತಹ ಕಾರ್ಯಾಗಾರಗಳು ಅತ್ಯಂತ ಅಗತ್ಯವಾಗಿದ್ದು, ಆರೋಗ್ಯ ಸಿಬ್ಬಂದಿ ಹಾಗೂ ರೋಗಿಗಳ ಸುರಕ್ಷತೆಯಲ್ಲಿ ಆಸ್ಪತ್ರೆ ಸೋಂಕು ನಿಯಂತ್ರಣ ಸಮಿತಿಯ ಪಾತ್ರ ಅತ್ಯಂತ ಮಹತ್ವಕರವಾಗಿದೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಿನಿ ಬೋರ್ಕರ್ ಮಾತನಾಡಿ, ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳು ಮುಂದಿನ ದಿನಗಳಲ್ಲಿ ಆಸ್ಪತ್ರೆ ಸಂಬಂಧಿತ ಸೋಂಕುಗಳನ್ನು ತಡೆಗಟ್ಟಲು, ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ರೋಗಿಗಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದರು.

ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ರಾವ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀಕ್ಷಕ ಡಾ. ನರೇಶ್ ಪವಾಸ್ಕರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಿಣಿ ಜೀವಿ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವೆಂಕಟೇಶ್ ವಿ.ಎನ್. ಇದ್ದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ ಹಾಗೂ ಮಿಣಿ ಜೀವಶಾಸ್ತ್ರ ವಿಭಾಗ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

40 ವರ್ಷ ಹಿಂದೆ ಸತ್ತವರ ಹೆಸರಲ್ಲಿ ಜಮೀನು ಮಾರಾಟ!
ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಲ್ಲರೂ ಕಾಳಜಿ ವಹಿಸಿ: ಡಿಸಿ ಸಿ.ಎನ್. ಶ್ರೀಧರ್