ಕನ್ನಡಪ್ರಭ ವಾರ್ತೆ ಕೋಲಾರವಸತಿ ಮತ್ತು ವಿದ್ಯಾರ್ಥಿನಿಲಯಗಳಲ್ಲಿರುವ ಅಧಿಕಾರಿ ಸಿಬ್ಬಂದಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಹಾಗೂ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದರ ಜೊತೆಗೆ ಅತ್ಯುತ್ತಮ ಪ್ರಜೆಗಳನ್ನಾಗಿ ಸಮಾಜಕ್ಕೆ ಕೊಡುಗೆಯಾಗಿ ಕೊಡುವುದು ವಿದ್ಯಾರ್ಥಿನಿಲಯಗಳ ಅಧಿಕಾರಿ, ಸಿಬ್ಬಂದಿಯ ಕರ್ತವ್ಯವಾಗಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಸತಿ ಶಾಲೆ ಮತ್ತು ವಿದ್ಯಾರ್ಥಿನಿಲಯಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಪುನಃಶ್ಚೇತನ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.ಅಪರೂಪದ ಕಾರ್ಯಾಗಾರ
ಕಾನೂನು ಪಾಲನೆ ಮಾಡಿ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್. ಹೊಸಮನಿ ಮಾತನಾಡಿ, ಈ ಕಾರ್ಯಗಾರದ ಪರಿಕಲ್ಪನೆ ಅಪೂರ್ವವಾಗಿದ್ದು, ತಾವು ನಿರ್ವಹಿಸುವ ಕೆಲಸಗಳ ಪುನರಾವಲೋಕನ ಮಾಡುವ ಅದ್ಭುತ ಅವಕಾಶ ಇದಾಗಿದ್ದು, ಲೋಪದೋಶಗಳನ್ನು ಸರಿಪಡಿಸಿಕೊಂಡು ಕಾನೂನುಗಳನ್ನು ಸರಿಯಾಗಿ ಪಾಲನೆ ಮಾಡಲು ಸುಸಂದರ್ಭವಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಉತ್ತಮವಾದ ಆರೋಗ್ಯ, ಆಶ್ರಯ, ಅನ್ನ ಮತ್ತು ಅಕ್ಷರಗಳನ್ನು ನೀಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ. ಈ ಮೂಲಕ ಸರ್ಕಾರವು ತ್ರಿವಿಧ ದಾಸೋಹ ನಡೆಸುತ್ತಿದೆ. ಈ ವಿದ್ಯಾರ್ಥಿ ನಿಲಯಗಳು ದೇವಾಲಯಕ್ಕೆ ಸಮಾನಾಗಿದ್ದು, ಇಲ್ಲಿನ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಅಧಿಕಾರಿಗಳು ಕಾನೂನಿನ ಅರಿವನ್ನು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ಮೂಡಿಸುವುದು ನಿಮ್ಮಗಳ ಜವಬ್ದಾರಿಯಾಗಿದೆ ಎಂದರು.ಮುಂಬರುವ ಬಾಲ ಕಾರ್ಮಿಕರ ದಿನ, ಪರಿಸರ ದಿನ, ಯೋಗ ದಿನ ಇಂತಹ ವಿಶೇ? ದಿನಗಳಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಕರೆದು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸಬೇಕು. ಮಾದಕ ವಸ್ತುಗಳ ಬಳಕೆಯಿಂದಾಗುವ ದು?ರಿಣಾಮಗಳನ್ನು ಕುರಿತು ಕಾರ್ಯಾಗಾರಗಳನ್ನು ಏರ್ಪಡಿಸಲು ಸಲಹೆ ನೀಡಿದರು. ಕಾನೂನಿನ ಸಲಹೆವಬೇಕಾದಲ್ಲಿ ಸಹಾಯವಾಣಿ ಸಂ. ೧೫೧೦೦ ಕರೆ ಮಾಡಿ ಉಚಿತ ಕಾನೂನು ಸಲಹೆ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.
ಮಕ್ಕಳ ರಕ್ಷಣೆಗೆ ಆದ್ಯತೆಕೆ.ಜಿ.ಎಫ್ ಎಸ್‌ಪಿ ಶಾಂತ್‌ರಾಜ್ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ಹಾಸ್ಟೆಲ್ ಗಳನ್ನು ನಿರ್ವಹಿಸುವುದು ತುಂಬ ಕ್ಲಿ?ಕರವಾಗಿದೆ. ಹಿಂದಿನ ಕಹಿ ಘಟನೆಗಳಿಂದ ಪಾಠ ಕಲಿತು ಮುಂದಾಗಬೇಕಾದ ಅಭಿವೃದ್ಧಿ ಕಡೆಗೆ ಗಮನ ಹರಿಸಿ ಕಾರ್ಯನಿರ್ವಹಿಸಬೇಕು. ವಸತಿ ನಿಲಯಗಳಲ್ಲಿ ಪೋಕ್ಸೊ ಪ್ರಕರಣಗಳು ನಡೆಯದಂತೆ ಅಥವಾ ಅದರ ಅವಗಣನೆ ಮಾಡದೆ, ಅಂತಹ ಪ್ರಕರಣ ಕಂಡು ಬಂದಲ್ಲಿ ತಕ್ಷಣವೇ ಪೊಲೀಸ್ ನೆರವು ಪಡೆಯಬೇಕು. ವಸತಿ ನಿಲಯಗಳ ಸಂದರ್ಶನ ವೇಳೆ ಅಲ್ಲದೇ ಬೇರೆ ಸಮಯಗಳಲ್ಲಿ ಸಂದರ್ಶಕರನ್ನು ಅನುಮತಿಸಬಾರದು. ಕಾನೂನನ್ನು ಪ್ರಜ್ಞಾಪೂರ್ವಕವಾಗಿ ಮುರಿಯಬಾರದು ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್, ಡಿಹೆಚ್‌ಒ ಡಾ.ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಣಿ, ಖ್ಯಾತ ಮನೋರೋಗ ತಜ್ಞೆ ಡಾ:ವಿಜೇತದಾಸ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮಂತರಾಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮುರಳಿ, ಹಿಂದುಳಿದ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸನ್ ಇದ್ದರು.