ಮನೆ ಹಂಚಿಕೆ ಕಾರ್ಯಕ್ರಮ ಪಕ್ಷದ ಪ್ರಚಾರಕ್ಕಲ್ಲ: ಜಮೀರ್

KannadaprabhaNewsNetwork |  
Published : Jan 20, 2026, 02:15 AM IST
ಪೂರ್ವಭಾವಿ ಸಭೆಯಲ್ಲಿ ಸಚಿವ ಜಮೀರಅಹ್ಮದ್ ಖಾನ್‌ ಮಾತನಾಡಿದರು. | Kannada Prabha

ಸಾರಾಂಶ

ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಈಗಾಗಲೇ ಒಂದು ಸಾವಿರ ಬಸ್‌ಗಳನ್ನು ಇದಕ್ಕಾಗಿ ಕಾಯ್ದಿರಿಸಲಾಗಿದೆ. ಪ್ರತಿ ಹಳ್ಳಿಯಿಂದಲೂ ಕಾರ್ಯಕರ್ತರನ್ನು ಕರೆದುಕೊಂಡು ಬರಲು ವಾಹನ ವ್ಯವಸ್ಥೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಹುಬ್ಬಳ್ಳಿ:

ಮನೆಗಳ ಹಂಚಿಕೆ ಪಕ್ಷದ ಪ್ರಚಾರಕ್ಕಲ್ಲ, ಬಡವರಿಗಾಗಿ, ಅವರ ಏಳ್ಗೆಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮ. ಪ್ರತಿಯೊಬ್ಬ ಕಾರ್ಯಕರ್ತರು ಮುಂಚೂಣಿಯಲ್ಲಿ ನಿಂತು ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿಸಲು ಶ್ರಮಿಸುವಂತೆ ವಸತಿ ಸಚಿವ ಜಮೀರ ಅಹಮದ್‌ ಖಾನ್‌ ಮನವಿ ಮಾಡಿದರು.

ಜ. 24ರಂದು ನಗರದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಿರುವ ಮನೆಗಳ ಹಂಚಿಕೆ ಕಾರ್ಯಕ್ರಮ ಹಿನ್ನೆಲೆ ಸೋಮವಾರ ಇಲ್ಲಿನ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಅಂದಿನ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಈಗಾಗಲೇ ಒಂದು ಸಾವಿರ ಬಸ್‌ಗಳನ್ನು ಇದಕ್ಕಾಗಿ ಕಾಯ್ದಿರಿಸಲಾಗಿದೆ. ಪ್ರತಿ ಹಳ್ಳಿಯಿಂದಲೂ ಕಾರ್ಯಕರ್ತರನ್ನು ಕರೆದುಕೊಂಡು ಬರಲು ವಾಹನ ವ್ಯವಸ್ಥೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲರೂ ನಿಂತು ಐತಿಹಾಸಿಕ ಕಾರ್ಯಕ್ರಮವನ್ನಾಗಿಸಲು ಶ್ರಮಿಸಿ. ಇದಕ್ಕೆ ಬೇಕಾದ ಎಲ್ಲ ಸಹಕಾರ ನೀಡಲು ಬದ್ಧ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಪಕ್ಷದ ಜಿಲ್ಲಾಧ್ಯಕ್ಷರು ಹೆಚ್ಚಿನ ಮುತುವರ್ಜಿ ವಹಿಸಿ. ಯಾವುದೇ ರೀತಿಯಲ್ಲಿ ಕಾರ್ಯಕರ್ತರು ಬರಲು ಅವ್ಯವಸ್ಥೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ವಿಪ ಮುಖ್ಯ ಸಚೇತಕ ಸಲೀಂಅಹ್ಮದ, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್‌.ಎಚ್‌. ಕೋನರಡ್ಡಿ, ವಿಪ ಸದಸ್ಯ ಎಫ್‌.ಎಚ್‌. ಜಕ್ಕಪ್ಪನವರ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿದರು. ಮಾಜಿ ಸಂಸದ ಐ.ಜಿ. ಸನದಿ, ಹೆಸ್ಕಾಂ ಅಧ್ಯಕ್ಷ ಅಜೀಮಪೀರ್‌ ಖಾದ್ರಿ, ಜಿಲ್ಲಾಧ್ಯಕ್ಷರಾದ ಅಲ್ತಾಫ ಹಳ್ಳೂರ, ಅನೀಲಕುಮಾರ ಪಾಟೀಲ ಸೇರಿದಂತೆ ಪಾಲಿಕೆ ಸದಸ್ಯರು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿದ್ದರು.

ಬಿಜೆಪಿ ಮನೆ ನಿರ್ಮಿಸಿಕೊಟ್ಟ ಉದಾಹರಣೆ ಇಲ್ಲ: ಜಮೀರ್‌ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಮಾತ್ರವೇ ಬಡವರಿಗೆ ಮನೆ ಕೊಟ್ಟಿದ್ದು, ಬಿಜೆಪಿ ಒಂದೇ ಒಂದು ಮನೆ ಕಟ್ಟಿಲ್ಲ. ಅವರು ಕಟ್ಟಿದ್ದು ಸಾಬೀತು ಪಡೆಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಈ ಹಿಂದೆಯೇ ಸವಾಲು ಹಾಕಿದ್ದೇನೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.ಧಾರವಾಡ ಜಿಪಂ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದೊಂದಿಗೆ ಮಂಡಳಿಯು ನಿರ್ಮಿಸುತ್ತಿರುವ 1,80,253 ಮನೆಗಳಲ್ಲಿ 2 ನೇ ಹಂತದಲ್ಲಿ ರಾಜ್ಯದ ಒಟ್ಟು 28 ಜಿಲ್ಲೆಗಳಲ್ಲಿ 42,345 ಮನೆಗಳ ಈಗ ಉದ್ಘಾಟನೆಯಾಗಲಿವೆ. ಬಿಜೆಪಿ ಸರ್ಕಾರ ಮತ್ತು ಜೆಡಿಎಸ್ ಸರ್ಕಾರ ಬಡವರಿಗೆ ಮನೆ ನೀಡಿಯೇ ಇಲ್ಲ. ಇದನ್ನು ಅರಿತ ನಾನು ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದೆ. ಇದೀಗ ಅವರು ಬಡವರಿಗಾಗಿ ಹೆಚ್ಚಿನ ಅನುದಾನ ಕೊಟ್ಟಿದ್ದು, ಈ ಮನೆಗಳನ್ನು ನಿರ್ಮಿಸಿದ್ದೇವೆ ಎಂದರು.ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿಯವರು ಬಡವರಿಗಾಗಿ ಏನು ಮಾಡಿಲ್ಲ. ಮನೆಗಳ ನಿರ್ಮಾಣಕ್ಕೂ ಹಣ ನೀಡಿಲ್ಲ ಎಂದು ಆರೋಪಿಸಿದರು. ನರೇಗಾ ಯೋಜನೆಗೆ ಹಿನ್ನೆಡೆಯಾಗಲು ಪ್ರಮುಖ ಕಾರಣ ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲವೇ ಅಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ
ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್‌ಐಆರ್‌?