ವಾತ್ಸಲ್ಯ ಕಾರ್ಯಕ್ರಮದಡಿ ಮಹಿಳೆಗೆ ಮನೆ ಹಸ್ತಾಂತರ

KannadaprabhaNewsNetwork |  
Published : Apr 09, 2026, 01:30 AM IST
08  | Kannada Prabha

ಸಾರಾಂಶ

ದೇವನಹಳ್ಳಿ: ತಾಲೂಕಿನ ದಾಸರಹಳ್ಳಿ ಗ್ರಾಮದ ಮುನಿಯಮ್ಮನವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ವಾತ್ಸಲ್ಯ ಕಾರ್ಯಕ್ರಮದಡಿ ಹೊಸ ಮನೆ ನಿರ್ಮಿಸಿ ಅವರಿಗೆ ಹಸ್ತಾಂತರಿಸಲಾಯಿತು

ದೇವನಹಳ್ಳಿ: ತಾಲೂಕಿನ ದಾಸರಹಳ್ಳಿ ಗ್ರಾಮದ ಮುನಿಯಮ್ಮನವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ವಾತ್ಸಲ್ಯ ಕಾರ್ಯಕ್ರಮದಡಿ ಹೊಸ ಮನೆ ನಿರ್ಮಿಸಿ ಅವರಿಗೆ ಹಸ್ತಾಂತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮಾರಬ್ಬ ಮಾತನಾಡಿ, ಪೂಜ್ಯ ಡಾ. ಡಿ.ವೀರೇಂದ್ರಹೆಗ್ಗಡೆ ಅವರು ಹಾಗೂ ಮಾತಶ್ಶ್ರೀ ಹೇಮಾವತಿ ಅಮ್ಮನವರ ಯೋಚನೆಯಂತೆ ನಿರ್ಗತಿಕ ಕುಟುಂಬಸ್ಥರನ್ನು ಆಯ್ಕೆ ಮಾಡಿ ಮನೆ ಕಟ್ಟಿಕೊಡುವ ಕೆಲಸ ಮಾಡಿಕೊಡಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಒಂದು ಸಾವಿರ ಮನೆ ನಿರ್ಮಾಣ ಮಾಡಿದ್ದು ತಾಲೂಕಿನಲ್ಲಿ ೩ ಮನೆಗಳನ್ನು ಇದುವರೆಗೆ ಕಟ್ಟಿ ಹಸ್ತಾಂತರಿಸಲಾಗಿದೆ ಎಂದರು. ಹಸ್ತಾಂತರ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ನರಸಿಂಹರಾಜು, ರಾಜಣ್ಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರವಿರಾಜ್‌ನಾಯಕ್, ಗ್ರಾಪಂ ಕಾರ್ಯದರ್ಶಿಗಳು, ದಾಸರಹಳ್ಳಿ ಭಾಗದ ಪಂಚಾಯಿತಿ ಮಾಜಿ ಸದಸ್ಯರು, ಯೋಜನೆಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಭಾಗದ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುವುದು ಅವಶ್ಯ
ಬಸ್‌ ನಿಲ್ದಾಣ ಉದ್ಘಾಟಿಸಿದ ಸಂಸದ ಡಾ.ಸುಧಾಕರ್‌