ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು, ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಬರುವ ಜೂನ್ 30 ರಿಂದ ಜುಲೈ 29ವರೆಗೆ ಬಿಎಲ್‌ಓಗಳು ಮನೆ-ಮನೆ ಗಣತಿ ಕಾರ್ಯ ಕೈಗೊಳ್ಳಲಿದ್ದು, ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಿದ್ದಾರೆ. ಎಸ್ಐಆರ್ ಪ್ರಕ್ರಿಯೆಗೆ ಅನುವಾಗುವಂತೆ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟ್‌ರನ್ನು ನೇಮಿಸುವಂತೆ ಸೂಚಿಸಿದರು.ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕತೆಯಿಂದ ಕೂಡಿದ್ದು, ಇದರ ಉದ್ದೇಶ ಅರ್ಹ ಮತದಾರರನ್ನು ಮತಪಟ್ಟಿಗೆ ಸೇರಿಸುವುದು ಮತ್ತು ಅನರ್ಹರನ್ನು ನಿಯಮಾನುಸಾರ ಕೈಬಿಡುವುದಾಗಿದೆ. ಯಾವುದೇ ತರಹದ ಸುಳ್ಳು ಮಾಹಿತಿ ಹಾಗೂ ಅಪಪ್ರಚಾರಗಳಿಗೆ ಕಿವಿಗೊಡಬಾರದು. 2002ರಲ್ಲಿ ಮತದಾರರ ಪಟ್ಟಿಯ ಕೊನೆಯ ವಿಶೇಷ ಸಮಗ್ರ ಪರಿಷ್ಕರಣೆ ನಡೆದಿದೆ.
ಮ್ಯಾಪಿಂಗ್ ಆಗದೆ ಇರುವವರು, ಹೊರಗಿನಿಂದ ಬಂದು ವಾಸಿಸುತ್ತಿರುವ ಉದ್ಯೋಗಿಗಳು, ವಲಸಿಗರು ಹಾಗೂ ಮದುವೆಯಾಗಿ ಬಂದಿರುವ ಹೊಸ ಮತದಾರರನ್ನು ಗುರುತಿಸಿ, ಭಾರತದ ನಾಗರಿಕರೆಂದು ದೃಢೀಕರಿಸುವ ಅಧಿಕೃತ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಪಡೆದು ಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು. ಸೂಕ್ತ ಮರಣ ಪ್ರಮಾಣ ಪತ್ರ ನೀಡದ ಹೊರತು ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ಕಡಿತಗೊಳಿಸುವುದಿಲ್ಲ. ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರನ್ನು ನೇಮಿಸಿದರೆ, ಅವರಿಗೆ ಎಸ್‌ಐಆರ್ ಕುರಿತು ಸೂಕ್ತ ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, 2026ರ ಮೇ 20ರ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1661 ಮತಗಟ್ಟೆಗಳು ಇದ್ದು ಒಟ್ಟು 14,40,922 ಮತದಾರರು ಇದ್ದಾರೆ.
ಸಭೆಯಲ್ಲಿ ಚುನಾವಣಾ ತಹಸೀಲ್ದಾರ್ ಬಿ.ಬಿ.ಪಾತೀಮಾ, ಚುನಾವಣೆ ಶಿರೇಸ್ತೆದಾರ್ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯ್ಕ್, ಜಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಯಶವಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಪಿ.ಎಂ.ಮಂಜುನಾಥ್, ಎಎಪಿ ಪಕ್ಷದ ಎಂ.ವಿ.ಲೋಕೇಶ್, ಸಿಪಿಐ(ಎಂ) ಪಕ್ಷದ ಗೌಸ್ ಪೀರ್ ಸೇರಿದಂತೆ ಮತ್ತತರರು ಇದ್ದರು.