ಮನೆ ಗೋಡೆ ಕುಸಿತ: ಡಾ.ಮಂತರ್‌ ಗೌಡ ಪರಿಶೀಲನೆ

KannadaprabhaNewsNetwork |  
Published : Jul 16, 2026, 03:15 AM IST
ಮಳೆಗೆ ಕುಸಿದ ಮನೆಯ ಗೋಡೆ: ಶಾಸಕ ಡಾ.ಮಂಥರ್‌ ಗೌಡ ಭೇಟಿ, ಪರಿಶೀಲನೆ | Kannada Prabha

ಸಾರಾಂಶ

ಪಟ್ಟಣದ ಬಸವೇಶ್ವರ ರಸ್ತೆಯ ವಾರ್ಡ್ ಸಂಖ್ಯೆ-1ರಲ್ಲಿ ವಾಸವಿರುವ ರಾಜಣ್ಣ ಅವರ ಮನೆಯ ಒಂದು ಬದಿಯ ಗೋಡೆ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಗೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಮಂಗಳವಾರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಪಟ್ಟಣದ ಬಸವೇಶ್ವರ ರಸ್ತೆಯ ವಾರ್ಡ್ ಸಂಖ್ಯೆ-1ರಲ್ಲಿ ವಾಸವಿರುವ ರಾಜಣ್ಣ ಅವರ ಮನೆಯ ಒಂದು ಬದಿಯ ಗೋಡೆ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಗೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಮಂಗಳವಾರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳದಲ್ಲಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರಿಗೆ ಮನೆಯ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಪರಿಹಾರ ಮಂಜೂರಾತಿಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಶಿಫಾರಸು ಸಲ್ಲಿಸುವಂತೆ ಸೂಚಿಸಿದರು.

ಸ್ಥಳದಿಂದಲೇ ತಹಸೀಲ್ದಾರ್ ಅವರಿಗೆ ದೂರವಾಣಿ ಕರೆ ಮಾಡಿ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳ ಬಗ್ಗೆ ತಕ್ಷಣ ಗಮನಹರಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್, ಖಜಾಂಚಿ ಚೇತನ್, ಆರೋಗ್ಯ ನಿರೀಕ್ಷಕ ಜಾಸೀಂ ಖಾನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಳುವಾಯಿ ಘಟಕಕ್ಕೆ ಮುರಳಿಧರ್ ಎಸ್. ಅಧ್ಯಕ್ಷರಾಗಿ ಆಯ್ಕೆ
ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ