ಮಳೆಗೆ ಮನೆ ಗೋಡೆ ಕುಸಿತ: ಅಜ್ಜಿ-ಮೊಮ್ಮಗಳು ಪಾರು, ಬಡ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

KannadaprabhaNewsNetwork |  
Published : Nov 06, 2026, 01:45 AM IST
5ಸಿಎಚ್‌ಎನ್56ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವುದು. | Kannada Prabha

ಸಾರಾಂಶ

ಆದರೆ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು, ಅಡುಗೆ ಪಾತ್ರೆಗಳು, ಬಟ್ಟೆ ಬರೆ ಸೇರಿ ಮನೆಬಳಕೆಯ ಬಹುತೇಕ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಗೊಳಗಾಗಿವೆ. ಈಗ ದುಬ್ಬಮ್ಮ ಅವರ ಕುಟುಂಬಕ್ಕೆ ಉಳಿಯಲು ಸೂರು ಇಲ್ಲದಂತಾಗಿದೆ.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ಅಜ್ಜಿ ಮತ್ತು ಮೊಮ್ಮಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ನಿವಾಸಿ ದುಬ್ಬಮ್ಮ ಹಾಗೂ ಅವರ ಮೊಮ್ಮಗಳು ಮಾದೇವಿ ಅವರು ರಾತ್ರಿ ಮನೆಯಲ್ಲಿ ಮಲಗಿದ್ದರು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಮಣ್ಣಿನ ಗೋಡೆ ಸಂಪೂರ್ಣ ನೆನೆದು ಹೋಗಿತ್ತು. ರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ದಿಢೀರ್ ಎಂದು ದೊಡ್ಡ ಶಬ್ದದೊಂದಿಗೆ ಗೋಡೆ ಕುಸಿದು ಬಿದ್ದಿದೆ. ಶಬ್ದ ಕೇಳಿ ಎಚ್ಚರಗೊಂಡ ಇಬ್ಬರೂ ಕೂಡಲೇ ಹೊರಗೆ ಓಡಿ ಬಂದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆದರೆ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು, ಅಡುಗೆ ಪಾತ್ರೆಗಳು, ಬಟ್ಟೆ ಬರೆ ಸೇರಿ ಮನೆಬಳಕೆಯ ಬಹುತೇಕ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಗೊಳಗಾಗಿವೆ. ಈಗ ದುಬ್ಬಮ್ಮ ಅವರ ಕುಟುಂಬಕ್ಕೆ ಉಳಿಯಲು ಸೂರು ಇಲ್ಲದಂತಾಗಿದೆ.

ಅತ್ಯಂತ ಕಡು ಬಡತನದಲ್ಲಿರುವ ದುಬ್ಬಮ್ಮ ಅವರಿಗೆ ಸರ್ಕಾರದಿಂದ ಕೂಡಲೇ ಸೂಕ್ತ ಪರಿಹಾರ ಹಾಗೂ ಶಾಶ್ವತ ಸೂರು ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೆರವು ನೀಡಬೇಕೆಂದು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಳಸಿದ ಕಪ್‌ನಲ್ಲೇ ಪೆಪ್ಸಿ ಸರ್ವ್‌ ಮಾಡಿದ ಪಿವಿಆರ್ ತಿನಿಸು ಮಳಿಗೆ
ಬಿಎಂಟಿಸಿ ಬಸ್‌ ಪಾಸ್‌ ದರ ಹೆಚ್ಚಳ!