ವಸತಿ ನಿಗಮದ ಹಗರಣ ಸಿಬಿಐಗೆ ವಹಿಸಲಿ: ತೆಲ್ಕೂರ್

KannadaprabhaNewsNetwork |  
Published : Jun 25, 2025, 12:33 AM IST
ಫೋಟೋ- ಬಿಜೆಪಿ ಪ್ರೇಸ್‌ ಮೀಟ್‌ | Kannada Prabha

ಸಾರಾಂಶ

ದುಡ್ಡು ಕೊಟ್ಟು ಮನೆ ಮಂಜೂರು ಮಾಡಲಾಗಿದೆ ಎನ್ನುವ ವಸತಿ ನಿಗಮದ ಹಗರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ದುಡ್ಡು ಕೊಟ್ಟು ಮನೆ ಮಂಜೂರು ಮಾಡಲಾಗಿದೆ ಎನ್ನುವ ವಸತಿ ನಿಗಮದ ಹಗರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಆಗ್ರಹಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಗಮದಲ್ಲಿ ಭ್ರಷ್ಟಾಚಾರ ಆಗಿದೆ ಎನ್ನುವ ವಿಚಾರದಲ್ಲಿ ನೈತಿಕ ಹೊಣೆ ಹೊತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಅವರು ಜಮೀರ್ ಅವರನ್ನು ಸಂಪುಟ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ 2 ವರ್ಷದಿಂದಲೂ ಭ್ರಷ್ಟಾಚಾರದಲ್ಲಿ ತೊಡಗಿದೆ. ಯಾವುದಾದರೂ ಭ್ರಷ್ಟಾಚಾರದ ಆರೋಪಗಳು ಹೊರ ಬಿದ್ದರೆ, ಅಂಥಹವುಗಳನ್ನು ಮುಚ್ಚಿ ಹಾಕಲು ಸರ್ಕಾರ ವಿಷಯಾಂತರದ ಅಂಶಗಳನ್ನು ಬಿಚ್ಚಿಡುತ್ತದೆ. ಎಸ್.ಸಿ ಎಸ್.ಟಿ ಹಣ, ವಾಲ್ಮೀಕಿ ನಿಗಮದ ಹಣ, ಮುಡಾ ಹಗರಣ ಮಾಡಿರುವುದು ನೋಡಿದರೆ ಸರಕಾರ ಭ್ರಷ್ಟಾಚಾರದಿಂದ ಕೂಡಿದೆ ಎಂದರ್ಥ ಎಂದು ವಿವರಿಸಿದರು.

ಒಂದು ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸಚಿವ ಸ್ಥಾನವನ್ನು ವಜಾಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಆಡಳಿತ ಸರ್ಕಾರದಲ್ಲಿ ರಾಜ್ಯದಲ್ಲಿ ಭಷ್ಟಾಚಾರ ಮೀತಿ ಮೀರಿದೆ. ಹಲ್ಲು ಇಲ್ಲದ ಸಂಸ್ಥೆಗಳನ್ನು ಇಟ್ಟುಕೊಂಡು ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ, ಅದಕ್ಕೆ ಉದಾಹರಣೆ ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ,

ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲಾ ಹಗರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದರಲ್ಲದೆ ವಸತಿ ಹಗರಣ

ಸಿಬಿಐ ತನಿಖೆಗೆ ಒತ್ತಾಯಿಸಿದರು.

ಕಲಬುರಗಿಯಲ್ಲಿ ತುಘಲಕ್ ದರ್ಬಾರ್ ನಡೆದಿದೆ, ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಲ್ಲಿ ಇದ್ರಿ ಪ್ರಿಯಾಂಕ್ ಖರ್ಗೆ ಅವರೇ ? ವಿರೋಧ ಪಕ್ಷದವರ ಧ್ವನಿ ದಮನ ಮಾಡುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದ್ದಾರೆ, ಮುಂದಿನ ಚುನಾವಣೆ ನಂತರ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ, ಮುಂದಿನ ಸಲ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬರುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಅಶೋಕ್ ಬಗಲಿ, ಶಾಸಕ ಬಸವರಾಜ್ ಮತ್ತಿಮಡು, ಚಂದು ಪಾಟೀಲ್, ಮಹದೇವ ಬೆಳಮಗಿ, ಅಮರನಾಥ್ ಪಾಟೀಲ್, ಹರ್ಷಾ ಗುತ್ತೇದಾರ್, ಆನಂದ ಪಾಟೀಲ್, ಶರಣಗೌಡ ಪಾಟೀಲ ದೇವಂತಗಿ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ