ಕನ್ನಡಪ್ರಭ ವಾರ್ತೆ ಮಂಡ್ಯ
ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪ್ರಗತಿ, ದಡಾರ ರುಬೆಲ್ಲಾ ನಿರ್ಮೂಲನೆ ಹಾಗೂ ಎಚ್‌ಪಿವಿ ಲಸಿಕಾ ಅಭಿಯಾನದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮುಂದಿನ ಒಂದು ತಿಂಗಳವರೆಗೆ ೧೪ ರಿಂದ ೧೫ ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳನ್ನು ಗುರುತಿಸಿ ಲಸಿಕೆ ಪಡೆಯುವಂತೆ ಅರಿವು, ಮಕ್ಕಳಲ್ಲಿ ತಪ್ಪು ಗ್ರಹಿಕೆ ಮತ್ತು ಗೊಂದಲವನ್ನು ಹೋಗಲಾಡಿಸುವ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಲಸಿಕೆ ಪ್ರಯೋಜನದ ತಿಳಿವಳಿಕೆ ಜಾಗೃತಿಯನ್ನು ಮೂಡಿಸಬೇಕು ಎಂದರು.ಪ್ರಾಥಮಿಕ ಅರೋಗ್ಯ ವೈದ್ಯಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿರುವುದಿಲ್ಲ. ಎಚ್‌ಪಿವಿ ಸುರಕ್ಷಿತ ಲಸಿಕೆಯಾಗಿದ್ದು, ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂಬ ಮಹತ್ವದ ಮಾಹಿತಿಯನ್ನು ತಿಳಿಸಬೇಕು ಎಂದರು.
ಸಭೆಯಲ್ಲಿ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕೆ.ಮೋಹನ್, ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎಂ.ಎನ್.ಆಶಾಲತಾ, ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬೆಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಜಿ.ವೇಣುಗೋಪಾಲ್ ಉಪಸ್ಥಿತರಿದ್ದರು.