ಉಡುಪಿ ಜಿಲ್ಲೆಯಲ್ಲಿ 11,274 ಹೆಣ್ಮಕ್ಕಳಿಗೆ ಎಚ್‌ಪಿವಿ ಲಸಿಕೆ: ಕೋಟ

KannadaprabhaNewsNetwork |  
Published : Mar 17, 2026, 02:45 AM IST
ಉಡುಪಿ ಜಿಲ್ಲೆಯ ಎಚ್‌.ಪಿ.ವಿ. ಲಸಿಕೆ ಕಾರ್ಯಕ್ರಮಕ್ಕೆ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಚಾಲನೆ ನೀಡಜಲಾಯಿತು | Kannada Prabha

ಸಾರಾಂಶ

ಮಹಿಳೆಯರಲ್ಲಿ ಕಂಡಬರುವ ಗರ್ಭಕಂಠ ಕ್ಯಾನ್ಸರ್ ತಡೆಯಲು ಎಚ್ ಪಿವಿ ಲಸಿಕೆ ಅಭಿಯಾನಕ್ಕೆ ಉಡುಪಿ ಜಿಲ್ಲೆಯಲ್ಲಿ 14 -15 ವರ್ಷದೊಳಗಿನ ಸುಮಾರು 11,274 ಹೆಣ್ಣು ಮಕ್ಕಳನ್ನು ಗುರುತಿಸಲಾಗಿದೆ. ಈಗಾಗಲೇ ಜಿಲ್ಲೆಗೆ 4150 ಲಸಿಕೆ ಸರಬರಾಜಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಲಸಿಕೆಯನ್ನು ಒದಗಿಸಲಾಗುತ್ತದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ: ಮಹಿಳೆಯರಲ್ಲಿ ಕಂಡಬರುವ ಗರ್ಭಕಂಠ ಕ್ಯಾನ್ಸರ್ ತಡೆಯಲು ಎಚ್ ಪಿವಿ ಲಸಿಕೆ ಅಭಿಯಾನಕ್ಕೆ ಉಡುಪಿ ಜಿಲ್ಲೆಯಲ್ಲಿ 14 -15 ವರ್ಷದೊಳಗಿನ ಸುಮಾರು 11,274 ಹೆಣ್ಣು ಮಕ್ಕಳನ್ನು ಗುರುತಿಸಲಾಗಿದೆ. ಈಗಾಗಲೇ ಜಿಲ್ಲೆಗೆ 4150 ಲಸಿಕೆ ಸರಬರಾಜಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಲಸಿಕೆಯನ್ನು ಒದಗಿಸಲಾಗುತ್ತದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಬ್ರಹ್ಮಗಿರಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ನಡೆದ ಎಚ್ ಪಿವಿ ಲಸಿಕೆ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಎಚ್ ಪಿವಿ ಲಸಿಕೆ ಪರಿಣಾಮಕಾರಿಯಾಗಿದ್ದು, ರಾಷ್ಟ್ರಮಟ್ಟದಲ್ಲಿ ಈ ಲಸಿಕಾ ಅಭಿಯಾನವನ್ನು ನಡೆಸಲಾಗುತ್ತಿದೆ. ದೇಶದಲ್ಲಿ 1.15 ಕೋಟಿ ಮತ್ತು ರಾಜ್ಯದಲ್ಲಿ ಸುಮಾರು 6.89 ಲಕ್ಷ ಹೆಣ್ಣು ಮಕ್ಕಳಿಗೆ ಈ ಲಸಿಕೆ ನೀಡುವ ಗುರಿ ಇರಿಸಲಾಗಿದೆ. ಈಗಾಗಲೇ ಒಟ್ಟು 2,54,000 ಲಸಿಕೆಗಳನ್ನು ಜಿಲ್ಲಾ ಕೇಂದ್ರಕ್ಕೆ ಕಳಹಿಸಲಾಗಿದೆ ಎಂದು ಅವರು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಮಾತನಾಡಿ, ಇಂದು ಕ್ಯಾನ್ಸರ್ ಎನ್ನುವುದು ಮಾರಣಾಂತಿಕ ಕಾಯಿಲೆಯಲ್ಲ. ಕ್ಯಾನ್ಸರ್ ಅಥವಾ ಯಾವುದೇ ರೋಗಗಳ ಲಕ್ಷಣಗಳು ಕಂಡುಬಂದ ಆರಂಭದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಿ ಆರೋಗ್ಯವಂತ ಜೀವನ ನಡೆಸಬಹುದು ಎಂದರು.ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ. ಜ್ಯೋತ್ಸ್ನ ಬಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಈ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡ 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಲಾಗುವುದು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್., ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಪ್ರಿಯಾ ಮರೀಯಾ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ನಿರೂಪಿಸಿ, ಚಂದ್ರಕಲಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾನಪದ ಕಲೆಗಳಿಗೆ ಪ್ರಕೃತಿ ನಿಕಟ ಸಂಬಂಧ: ಟಿ.ಪಿ. ರಮೇಶ್
ಮೂಡುಬಿದಿರೆ ಇನ್ಸ್‌ಪೆಕ್ಟರ್ ಪ್ರಕರಣ: ಪೀಡಿತೆಯರಿದ್ದರೆ ದೂರು ನೀಡಲು ಸಲಹೆ