ಎಚ್‌ಪಿವಿ ಸೋಂಕು ತಡೆಗೆ ಲಸಿಕೆ ಸಹಕಾರಿ: ಡಾ.ಅಕ್ಷತಾ ನಾಯಕ್

KannadaprabhaNewsNetwork |  
Published : Jul 26, 2026, 03:00 AM IST
ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಎಚ್‌ಪಿವಿ ಲಸಿಕೆ ಜಾಗೃತಿ: ಗರ್ಭಕಂಠದ ಕ್ಯಾನ್ಸರ್ ತಡೆಗೆ ಅರಿವು | Kannada Prabha

ಸಾರಾಂಶ

ಗರ್ಭಕಂಠದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿರುವ ಎಚ್‌ಪಿವಿ ಸೋಂಕನ್ನು ತಡೆಗಟ್ಟುವಲ್ಲಿ ಎಚ್‌ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿ ಎಂದು ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ತಿಳಿಸಿದರು. ತಿಳಿಸಿದ್ದಾರೆ.

ಮೂಡುಬಿದಿರೆ: ಗರ್ಭಕಂಠದ ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿರುವ ಎಚ್‌ಪಿವಿ ಸೋಂಕನ್ನು ತಡೆಗಟ್ಟುವಲ್ಲಿ ಎಚ್‌ಪಿವಿ ಲಸಿಕೆ ಅತ್ಯಂತ ಪರಿಣಾಮಕಾರಿ ಎಂದು ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ತಿಳಿಸಿದರು. ತಿಳಿಸಿದ್ದಾರೆ.

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ನಡೆದ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

2006ರಿಂದ ಬಳಕೆಯಲ್ಲಿರುವ ಎಚ್‌ಪಿವಿ ಲಸಿಕೆಯು ವೈರಸ್ ಸೋಂಕಿನಿಂದ ದೇಹವನ್ನು ರಕ್ಷಿಸುವ ಮೂಲಕ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಉಂಟಾಗುವ ಅಪಾಯ ಗಣನೀಯವಾಗಿ ಕಡಿಮೆ ಮಾಡುತ್ತದೆ. ಹೆಣ್ಣು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಲಸಿಕೆಯನ್ನು ಸರ್ಕಾರದ ವತಿಯಿಂದ ಮೊದಲ ಬಾರಿಗೆ ಉಚಿತವಾಗಿ ನೀಡಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿನಿಯೂ ಈ ಅವಕಾಶದ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಡಾ. ಅಕ್ಷತಾ ನಾಯಕ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಸಂಪತ್ ಕುಮಾರ್ ಮಾತನಾಡಿ, ಆರೋಗ್ಯವೇ ಜೀವನದ ಅಮೂಲ್ಯ ಸಂಪತ್ತು ಎಂಬ ಧ್ಯೇಯದೊಂದಿಗೆ ಎಕ್ಸಲೆಂಟ್ ಸಂಸ್ಥೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುತ್ತಿದೆ. ನಿಯಮಿತ ದೈಹಿಕ ವ್ಯಾಯಾಮ, ಆರೋಗ್ಯಕರ ಜೀವನಶೈಲಿ ಹಾಗೂ ಸ್ವಚ್ಛತೆ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ, ಕೇಂದ್ರ ಸರ್ಕಾರದ ಎಚ್‌ಪಿವಿ ಲಸಿಕೆ ಕುರಿತು ವಿದ್ಯಾರ್ಥಿನಿಯರು ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಕೈಗೊಂಡಿದ್ದು, ಎಲ್ಲ ಅರ್ಹ ವಿದ್ಯಾರ್ಥಿನಿಯರೂ ಲಸಿಕೆಯ ಪ್ರಯೋಜನ ಪಡೆದು ಆರೋಗ್ಯಕರ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲ ಶ್ರೀಪ್ರಸಾದ್, ಸಿಬಿಎಸ್‌ಇ ಸಂಯೋಜಕಿ ವಿಮಲ ಶೆಟ್ಟಿ ಉಪಸ್ಥಿತರಿದ್ದರು. ಚಾರ್ವಿ ಸ್ವಾಗತಿಸಿ, ಪೂರ್ವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಜ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಲಿ: ಪ್ರಭಾಕರ ಪ್ರಭು
ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರತಿಭಟನೆಗೆ ಸಿಪಿಐಎಂ ಬೆಂಬಲ