ಉಡುಪಿ: ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಜಿಲ್ಲಾ ಘಟಕ ವತಿಯಿಂದ ಸಂಘಟನೆಯ ಆಯ್ದ ಕಾರ್ಯಕರ್ತರಿಗಾಗಿ ವಿಶೇಷ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‌ಆರ್‌ಡಿ) ಕಾರ್ಯಾಗಾರವನ್ನು ಉಡುಪಿಯ ಜಾಮೀಯಾ ಮಸೀದಿಯಲ್ಲಿ ಭಾನುವಾರ ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಮುಖ್ಯವಾಗಿ ಕಾರ್ಯಕರ್ತರ ವೈಯಕ್ತಿಕ ಕೌಶಲ್ಯ ಅಭಿವೃದ್ಧಿ, ಸಮಯ ನಿರ್ವಹಣೆ, ಸಂವಹನ ಕಲೆ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಕುರಿತು ಸಂಪನ್ಮೂಲ ವ್ಯಕ್ತಿಗಳು ಸವಿಸ್ತಾರವಾಗಿ ಮಾರ್ಗದರ್ಶನ ನೀಡಿದರು.
ಸಮಾಜದ ಪ್ರಗತಿಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ತನ್ನ ಆಂತರಿಕ ಸಾಮರ್ಥ್ಯವನ್ನು ಹೇಗೆ ಧನಾತ್ಮಕವಾಗಿ ಬಳಸಿಕೊಳ್ಳಬಹುದು ಎಂಬುದನ್ನು ವಿವಿಧ ಉದಾಹರಣೆಗಳ ಮೂಲಕ ವಿವರಿಸಲಾಯಿತು. ಈ ತರಬೇತಿ ಶಿಬಿರದಲ್ಲಿ ಉಡುಪಿ ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆಯಾದ ಜಮಾಅತ್ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ, ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.