ಅಭಿವೃದ್ಧಿಯೆಡೆಗೆ ಹುಬ್ಬಳ್ಳಿ, ಧಾರವಾಡ ಮಹಾನಗರ: ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ

KannadaprabhaNewsNetwork |  
Published : Jan 27, 2025, 12:47 AM IST
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಧ್ವಜಾರೋಹಣ ನೆರವೇರಿಸಿದರು.  | Kannada Prabha

ಸಾರಾಂಶ

ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.

ಹುಬ್ಬಳ್ಳಿ: ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಹುಬ್ಬಳ್ಳಿ- ಧಾರವಾಡ ಮಹಾನಗರ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ ಎಂದು ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.

ನಗರದ ಈದ್ಗಾ ಮೈದಾನದಲ್ಲಿ ಭಾನುವಾರ ಗಣರಾಜೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪಾಲಿಕೆಯ ಸಾಮಾನ್ಯ ನಿಧಿಯಿಂದ ಪ್ರತಿ ವಾರ್ಡ್‌ ಅಭಿವೃದ್ಧಿಗೆ ತಲಾ ₹1 ಕೋಟಿ ಅನುದಾನ ನೀಡಲಾಗಿದೆ. 15ನೇ ಹಣಕಾಸು ಯೋಜನೆಯಡಿ ₹42 ಕೋಟಿ ಅನುದಾನ ದೊರಕಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಪೌರಕಾರ್ಮಿಕ ಕಲ್ಯಾಣ ಯೋಜನೆಯಡಿ ₹25 ಕೋಟಿ ವೆಚ್ಚದಲ್ಲಿ 320 ಮನೆಗಳನ್ನು ನಿರ್ಮಿಸುತ್ತಿದ್ದು, ಈಗಾಗಲೇ 224 ಮನೆಗಳು ನಿರ್ಮಾಣವಾಗಿವೆ. ಕೆರೆ ಅಭಿವೃದ್ಧಿ, ಗ್ಯಾಸ್ ಚಿತಾಗಾರ, ಘನತ್ಯಾಜ್ಯ ನಿರ್ವಹಣಾ ಘಟಕಗಳಿಗೆ ತಡೆಗೋಡೆ, ಪಾರ್ಕಿಂಗ್ ವ್ಯವಸ್ಥೆ, ಪಾಲಿಕೆ ಕೇಂದ್ರ ಕಚೇರಿಯಲ್ಲಿ ನೂತನ ಸಭಾಭವನ ನಿರ್ಮಾಣ, ಆಸ್ತಿ ತೆರಿಗೆ ಸಂಗ್ರಹ, ಇ–ಸ್ವತ್ತು ಮೇಳದಂಥ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.

ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್‌ ರಾಮಪ್ಪ ಬಡಿಗೇರ, ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಪಾಲಿಕೆ ಆವರಣದಲ್ಲಿ ಮೇಯರ್‌ ಧ್ವಜಾರೋಹಣ

ಹುಬ್ಬಳ್ಳಿ ಪಾಲಿಕೆ ಆವರಣದಲ್ಲಿ ಮೇಯರ್‌ ರಾಮಪ್ಪ ಬಡಿಗೇರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದಾಗಿದ್ದು, ಅದಕ್ಕೆ ಸಂವಿಧಾನವೇ ಆಧಾರಸ್ತಂಭವಾಗಿದೆ. ಹು-ಧಾ ಮಹಾನಗರ ಪಾಲಿಕೆ ಅಭಿವೃದ್ಧಿಯತ್ತ ಸಾಗುತ್ತಿದ್ದು, ಇದಕ್ಕೆ ಎಲ್ಲ ಅಧಿಕಾರಿಗಳ, ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಕಾರಣವಾಗಿದೆ ಎಂದರು.

ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಶ್ರೀಧರ ದಂಡಪ್ಪನವರ, ಪದ್ಮಾವತಿ ತಂಬಗಿ, ದೀಪಿಕಾ, ನವೀನ ಹಿರೇಮಠ, ಎ‌‌.ಒ. ಬೆಳಗಾಂವಕರ, ಜಿ.ಬಿ. ರಾಮದತ್ತ, ಮಂಜುನಾಥ ಬಿ, ಪ್ರಿಯಾಂಕಾ ಎ.ಇ, ಬೊಮ್ಮಲಿಂಗೇಶ, ರಾಜೇಶ, ಶ್ರೀಧರ ಟಿ.ಎನ್, ರಮೇಶ ನೂಲ್ವಿ, ಉಮೇಶ ಸವಣೂರು, ಫಿರೋಜ್ ಸೇರಿದಂತೆ 15 ಜನರನ್ನು ಸನ್ಮಾನಿಸಲಾಯಿತು. ಈ ವೇಳೆ ಪಾಲಿಕೆ ಸದಸ್ಯರು ಪಾಲ್ಗೊಂಡಿದ್ದರು.

ತಾಲೂಕು ಆಡಳಿತ ಸೌಧ

ಹುಬ್ಬಳ್ಳಿಯ ತಾಲೂಕು ಆಡಳಿತ ಸೌಧದ ಎದುರು ಭಾನುವಾರ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

ಸರ್ಕಾರದ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ದೇಶದ ಅಭಿವೃದ್ಧಿಯ ಕನಸುಗಳನ್ನು ಸಾಕಾರಗೊಳಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಗೌರವ ಸಲ್ಲಿಸೋಣ ಎಂದು ತಹಸೀಲ್ದಾರ್‌ ಜೆ.ಬಿ. ಮಜ್ಜಗಿ ಕರೆ ನೀಡಿದರು.

ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿದರು. ಈ ವೇಳೆ ಸಾವಯವ ಕೃಷಿ ಕೈಗೊಂಡ ಪ್ರಗತಿ ಪರ ರೈತರು, ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಶಹರ ತಹಸೀಲ್ದಾರ್‌ ಕಲಗೌಡ ಪಾಟೀಲ, ಗ್ರೇಡ್ 2 ತಹಸೀಲ್ದಾರ್ ಜಿ.ಬಿ. ಪಾಟೀಲ, ಶಿವಾನಂದ ಹೆಬ್ಬಳ್ಳಿ, ಸಹಾಯಕ ಕೃಷಿ ಅಧಿಕಾರಿ ಮಂಜುಳಾ ತೆಂಬದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿದ್ದರು.

PREV

Recommended Stories

ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಟನಲ್ ರಸ್ತೆ, ಎ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ: ಡಿಕೆಶಿ