ಹುಬ್ಬಳ್ಳಿ:
ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಏ. 5, 12, 19, 26 ಹಾಗೂ ಮೇ 3, 10, 17, 24 ಮತ್ತು 31ರಂದು (ಭಾನುವಾರ) ಬೆಳಗ್ಗೆ 6.50ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಗ್ಗೆ 5.20ಕ್ಕೆ ರಾಮೇಶ್ವರಂ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಏ. 6, 13, 20, 27 ಹಾಗೂ ಮೇ 4, 11, 18, 25 ಮತ್ತು ಜೂ. 1ರಂದು (ಸೋಮವಾರ) ರಾತ್ರಿ 8ಕ್ಕೆ ರಾಮೇಶ್ವರಂನಿಂದ ಹೊರಟು, ಮರುದಿನ ರಾತ್ರಿ 7.40ಕ್ಕೆ ಹುಬ್ಬಳ್ಳಿ ಆಗಮಿಸಲಿದೆ.
ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಬಾಣಸವಾಡಿ, ಹೊಸೂರು, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರು, ತಿರುಚ್ಚಿರಾಪಳ್ಳಿ, ಪುದುಕ್ಕೊಟ್ಟೈ, ಕಾರೈಕುಡಿ, ಶಿವಗಂಗಾ, ಮನಮಧುರೈ ಮತ್ತು ರಾಮನಾಥಪುರಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.ಈ ವಿಶೇಷ ರೈಲು ಒಂದು ಎಸಿ ಫಸ್ಟ್ ಕ್ಲಾಸ್, 2 ಎಸಿ ಟು ಟೈರ್, 3 ಎಸಿ ತ್ರೀ ಟೈರ್, 6 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ, ಒಂದು ಪ್ಯಾಂಟ್ರಿ ಕಾರ್, ಒಂದು ಜನರೇಟರ್-ಕಮ್-ಬ್ರೇಕ್ ವ್ಯಾನ್ ಮತ್ತು ಒಂದು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್/ದಿವ್ಯಾಂಗ ಸ್ನೇಹಿ ಬೋಗಿಗಳನ್ನು ಹೊಂದಿರಲಿದೆ. ಈ ವಿಶೇಷ ರೈಲುಗಳ ಮುಂಗಡ ಕಾಯ್ದಿರಿಸುವಿಕೆ ಆರಂಭವಾಗಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.