ಮೇ ೨೧ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಡಾ.ಎಂ.ಎಸ್.ಪ್ರಭುಸ್ವಾಮಿ

KannadaprabhaNewsNetwork |  
Published : May 16, 2025, 02:01 AM IST
೧೫ಕೆಎಂಎನ್‌ಡಿ-೪ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಡಾ..ಎಂ.ಪ್ರಭುಸ್ವಾಮಿ ಇತರರು ಪೋಸ್ಟರ್ ಪ್ರದರ್ಶಿಸಿದರು. | Kannada Prabha

ಸಾರಾಂಶ

ಮೈಸೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್ ಹಾಗೂ ಲೀಡ್ ಟ್ರೈನಿಂಗ್ ಅಂಡ್ ಕಾರ್ಪೋರೇಟ್ ಸಲ್ಯೂಷನ್ಸ್ ವತಿಯಿಂದ ಮೇ ೩೧ರಂದು ಮೈಸೂರಿನ ಚಿಕ್ಕಹಳ್ಳಿ ಬಡಾವಣೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮೈಸೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್ ಹಾಗೂ ಲೀಡ್ ಟ್ರೈನಿಂಗ್ ಅಂಡ್ ಕಾರ್ಪೋರೇಟ್ ಸಲ್ಯೂಷನ್ಸ್ ವತಿಯಿಂದ ಮೇ ೩೧ರಂದು ಮೈಸೂರಿನ ಚಿಕ್ಕಹಳ್ಳಿ ಬಡಾವಣೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಪ್ರಭುಸ್ವಾಮಿ ತಿಳಿಸಿದರು.

ಕಾರ್ಯಕ್ರಮವನ್ನು ಶಾಸಕ ಟಿ.ಎಸ್.ಶ್ರೀವತ್ಸ ಅವರು ಉದ್ಘಾಟಿಸುವರು. ಉದ್ಯೋಗ ಮೇಳದಲ್ಲಿ ಸುಮಾರು ೬೦ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಲೀಡ್ ಟ್ರೈನಿಂಗ್ ಅಂಡ್ ಕಾರ್ಪೋರೇಟ್ ಸಲ್ಯೂಷನ್ಸ್ ಸಿಇಒ ಎಂ.ಆರ್‌. ಶ್ರೀವಿದ್ಯಾ ಮಾತನಾಡಿ, ನಮ್ಮ ಸಂಸ್ಥೆಯಿಂದ ಹಲವಾರು ಉದ್ಯೋಗ ಮೇಳ ನಡೆಸಲಾಗಿದ್ದು, ಸಾಕಷ್ಟು ಮಂದಿಗೆ ಉದ್ಯೋಗ ದೊರಕಿಸಿಕೊಡಲಾಗಿದೆ ಎಂದರು.

ಈ ಮೇಳದಲ್ಲಿ ಮೈಸೂರು, ನಂಜನಗೂಡು, ಬೆಂಗಳೂರು, ಹೈದ್ರಾಬಾದ್ ಮೂಲದ ೩೨ ಕಂಪನಿಗಳು ಈಗಾಗಲೇ ನೋಂದಾವಣೆಯಾಗಿದ್ದು, ಒಟ್ಟಾರೆ ೬೦ಕ್ಕೂ ಹೆಚ್ಚು ಕಂಪನಿಗಳು ಬರುವ ನಿರೀಕ್ಷೆ ಇದೆ. ಕಳೆದ ಬಾರಿ ನಡೆದ ಉದ್ಯೋಗ ಮೇಳದಲ್ಲಿ ೨೫೦೦ಕ್ಕೂಹೆಚ್ಚು ಮಂದಿ ಅಭ್ಯರ್ಥಿಗಳು ಭಾಗವಹಿಸಿದ್ದು, ೬೦೦ಕ್ಕೂ ಹೆಚ್ಚು ಮಂದಿ ಉದ್ಯೋಗ ಪಡೆದಿದ್ದಾರೆ ಎಂದು ವಿವರಿಸಿದರು.

ಐಟಿ ಕಂಪನಿ ಸೇರಿದಂತೆ ಭದ್ರತಾ ಸಿಬ್ಬಂದಿವರೆಗೆ ಎಲ್ಲ ವಿಧದ ಉದ್ಯೋಗಗಳ ಅವಕಾಶಗಳಿದ್ದು, ೧೮ ರಿಂದ ಮೇಲ್ಪಟ್ಟ ವಯೋಮಾನದವರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದರು.

ಕಾಲೇಜಿನ ವಿಜಯಲಕ್ಷ್ಮಿ, ಮಾದೇಶ್ ಇತರರು ಗೋಷ್ಠಿಯಲ್ಲಿದ್ದರು.

ಮೇ 28 ರಿಂದ 31 ರವರೆಗೆ ಉಪಲೋಕಾಯುಕ್ತರಿಂದ ದೂರು ಸ್ವೀಕಾರ: ಡಾ: ಕುಮಾರ

ಮಂಡ್ಯ: ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಮೇ 28 ರಿಂದ 31 ರವರೆಗೆ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ನಗರದ ಜಿಪಂ ಕಾವೇರಿ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಸರ್ಕಾರ ನೀಡಿರುವ ಸೂಚನೆ ಹಾಗೂ ಆದೇಶಗಳನ್ವಯ ಕಾರ್ಯ ನಿರ್ವಹಿಸಿ ಕಾರಣಾಂತರಗಳಿಂದ ಯಾವುದಾದರೂ ಕಡತಗಳು ಹಾಗೂ ಸಾರ್ವಜನಿಕರ ಕೆಲಸ ಬಾಕಿ ಇದ್ದಲ್ಲಿ ಪರಿಶೀಲಿಸಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಮೇ 28 ರಿಂದ 31 ರವರೆಗೆ ಯಾವುದೇ ರಜೆ ಪಡೆಯಲು ಅವಕಾಶವಿಲ್ಲ ಹಾಗೂ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಜಿಲ್ಲೆಗೆ ಸಂಬಂಧಿಸಿದ ಸುಮಾರು 156 ದೂರು ಅರ್ಜಿಗಳಿಗೆ ಕ್ರಮ ಕೈಗೊಂಡು ಉತ್ತರ ನೀಡುವಂತೆ ನಿರ್ದೇಶನ ನೀಡಲಾಗಿದೆ. ಆಯಾ ಇಲಾಖೆ ಅವರು ಮಾಹಿತಿ ನೀಡಿ ಶೇ100 ರಷ್ಟು ಜಿಲ್ಲೆಯಲ್ಲಿ ಸಾಧನೆಯಾಗಬೇಕು. ಮಾಹಿತಿ ಪಡೆಯಲು ಜಿಲ್ಲಾಧಿಕಾರಿಗಳ ಕಚೇರಿಯಿಂದ ಇಲಾಖಾವಾರು ಸಿಬ್ಬಂದಿಯನ್ನು ಸಹ ನಿಯೋಜಿಸಿದೆ ಎಂದರು.

ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತನಿಖೆಗೆ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ ಹಾಗೂ ಸಾರ್ವಜನಿಕರಿಂದ ದೂರು ಸಹ ಸ್ವೀಕರಿಸಲಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆಯ ಆಸನದ ವ್ಯವಸ್ಥೆ, ಸಾರ್ವಜನಿಕರ ವಿವರಗಳು ನೊಂದಣಿ ಮಾಡಿಕೊಳ್ಳಲು, ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಯುವ ಸ್ಥಳದಲ್ಲಿ ಕಂಪ್ಯೂಟರ್, ಕಂಪ್ಯೂಟರ್ ಆಪರೇಟರ್ಗಳು, ಇಂಟರ್ನೆಟ್ ಹಾಗೂ ಸ್ಟೆನೋಗ್ರಾಫರ್ ವ್ಯವಸ್ಥೆಯಾಗಬೇಕು ಎಂದು ತಿಳಿಸಿದರು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸುರೇಶ್ ಬಾಬು ಮಾತನಾಡಿ ಮಾನ್ಯ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಾಯ್ಯ ಸಾರ್ವಜನಿಕರಿಂದ ದೂರು ಸ್ವೀಕರಿಸುವ ವಿಷಯದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಕಚೇರಿ ಮುಖ್ಯಸ್ಥರು ತಮ್ಮ ಕಚೇರಿ ಕೆಲಸಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಲೋಕಾಯುಕ್ತ ಡಿ.ಒ.ಎಸ್.ಪಿ ಸುನೀಲ್, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಿ, ಧನುಷ್ ಸೇರಿದದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ