ಕನ್ನಡಪ್ರಭ ವಾರ್ತೆ ರಾಮದುರ್ಗ ಡಿ.13ರಂದು ರಾಷ್ಟ್ರೀಯ ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಣ್ಣಪುಟ್ಟ ವ್ಯಾಜ್ಯಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲು ಅಧಿಕಾರಿಗಳು ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾ.ಮಂಜುನಾಥ ಬಣಕಾರ ಅಧಿಕಾರಿಗಳಿಗೆ ಸೂಚನೆ ನೀಡಿದರು
ಕನ್ನಡಪ್ರಭ ವಾರ್ತೆ ರಾಮದುರ್ಗ
ಡಿ.13ರಂದು ರಾಷ್ಟ್ರೀಯ ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಣ್ಣಪುಟ್ಟ ವ್ಯಾಜ್ಯಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲು ಅಧಿಕಾರಿಗಳು ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾ.ಮಂಜುನಾಥ ಬಣಕಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.ನ್ಯಾಯಾಲಯದ ಆವರಣದಲ್ಲಿ ಜರುಗಿದ ರಾಷ್ಟ್ರೀಯ ಬೃಹತ್ ಲೋಕ ಅದಾಲತ್‌ನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷದ ಕೊನೆಯ ಬೃಹತ್ ಲೋಕ ಅದಾಲತ್ ಆಗಿದ್ದು, ಇದರ ಯಶಸ್ಸಿಗೆ ತಾಲೂಕಿನ ಎಲ್ಲ ಅಧಿಕಾರಿಗಳು ಶ್ರಮಿಸಬೇಕು. ಪಂಚಾಯತಿ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಪೋಕ್ಸೋ ಕಾಯ್ದೆಯಿಂದ ಗ್ರಾಮೀಣ ಪ್ರದೇಶದ ಅಮಾಯಕರು ನ್ಯಾಯಾಲಯಕ್ಕೆ ವಿನಾಕಾರಣ ಅಲೆದಾಡಬೇಕಿದೆ. ಕೆಲವರಿಗೆ ಶಿಕ್ಷೆಯೂ ಆಗಲಿದೆ. ಪೋಕ್ಸೋ ಕಾನೂನಿನ ದುರ್ಬಳಕೆಯೂ ಹೆಚ್ಚಾಗಿದ್ದು, ಅಶಿಕ್ಷಿತರು ಜೈಲು ವಾಸ ಅನುಭವಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಪೋಕ್ಸೋ ಕುರಿತು ಜನ ಜಾಗೃತಿ ಮೂಡಿಸಬೇಕು. ಪೋಕ್ಸೋ ಪ್ರಕರಣ ದಾಖಲಿಸುವ ಮೊದಲು ಸರಿಯಾದ ವಿಚಾರಣೆ ನಡೆಸಬೇಕು ಎಂದು ಹೇಳಿದರು.ಮದ್ಯ ವ್ಯಸನಕ್ಕೆ, ಗುಟಕಾ, ಸಿಗರೇಟ್ ಸೇವನೆಯಿಂದ ಹದಿಹರೆಯದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಬಕಾರಿ ಹೆಚ್ಚಿನ ಮಟ್ಟದಲ್ಲಿ ಮಾರಾಟವಾದರೆ ಮಾತ್ರ ಸರ್ಕಾರಕ್ಕೆ ಆದಾಯ ಹೆಚ್ಚಲಿದೆ. ಆದರೆ ಹದಿಹರೆಯದ ಮಕ್ಕಳ ಮೇಲೆ ದುಷ್ಪರಿಣಾಮ ಆಗುವುದನ್ನು ತಪ್ಪಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.ಸಿಪಿಐ ವಿನಾಯಕ ಬಡಿಗೇರ, ಪಿಎಸ್‌ಐಗಳಾದ ಸವಿತಾ ಮುನ್ಯಾಳ, ಬಸವರಾಜ ಕೊಣ್ಣೂರೆ, ಅಬಕಾರಿ ಇನ್‌ಸ್ಪೆಕ್ಟರ್ ಬಸವರಾಜ ಕರುವಿನಕೊಪ್ಪ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅಜರಾಜ್ ಮುದಕವಿ, ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಮತ್ತು ನ್ಯಾಯವಾದಿಗಳ ಸಂಘದ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.