ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ಕಾರ್ಯಕ್ರಮ ಮುಂದೂಡಿಕೆ: ಈ ಪರಿಶೀಲನಾ ಪ್ರಕ್ರಿಯೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ನಿಖರವಾಗಿ ಪೂರ್ಣಗೊಳಿಸಲು ಇನ್ನೂ ಕೆಲವು ದಿನಗಳ ಕಾಲಾವಕಾಶದ ಅಗತ್ಯವಿದೆ. ಈ ಕಾರಣದಿಂದಾಗಿ, ಜೂ. 27ರಂದು ನಡೆಯಬೇಕಿದ್ದ ಸ್ಕಾಲರ್‌ಶಿಪ್ ವಿತರಣೆ ಕಾರ್ಯಕ್ರಮವನ್ನು ಕೆಲವು ದಿನಗಳ ಕಾಲ ಮುಂದೂಡಲಾಗಿದೆ.
ದಾಖಲೆಗಳ ಪರಿಶೀಲನೆ: ಅರ್ಜಿ ಸಲ್ಲಿಸಿರುವ ಬಹುತೇಕ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ. ಇನ್ನು ಕೆಲವು ವಿದ್ಯಾರ್ಥಿಗಳ ಅರ್ಜಿಗಳ ಅಂತಿಮ ಪರಿಶೀಲನೆಗೆ ಕೆಲವು ಪೂರಕ ದಾಖಲೆಗಳ ಅಗತ್ಯವಿದ್ದು, ನಮ್ಮ ತಂಡ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.ಸ್ಕಾಲರ್‌ಶಿಪ್ ವಿತರಣೆಯ ಪರಿಷ್ಕೃತ ದಿನಾಂಕ ಹಾಗೂ ಇನ್ನೂ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇನೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಕೈಗೊಂಡಿರುವ ಈ ಪಾರದರ್ಶಕ ಪ್ರಕ್ರಿಯೆಗೆ ನಿಮ್ಮ ಸಹಕಾರ ಹೀಗೆಯೇ ಇರಲಿ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು ಎಂದು ಸಂಸದ ಡಾ.ಕೆ. ಸುಧಾಕರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.