ಕನ್ನಡಪ್ರಭ ವಾರ್ತೆ ಹೊಸನಗರ
ತಾಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಮಾತನಾಡಿದರು.
ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.ಹಾಗೂ ಲೋಕೋಪಯೋಗಿ ಸಚಿವರೊಂದಿಗೆ , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತುರ್ತಾಗಿ ವ್ಯವಸ್ಥಿತ ರೀತಿಯ ಕಾಮಗಾರಿ ನಡೆಸಲು ಕ್ರಮ ವಹಿಸಲಾಗುವುದು ಎಂದ ಅವರು ಈ ಭಾಗದ ಜನಸಾಮಾನ್ಯರ ಅಹವಾಲುಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಮುಂದೆಯೂ ಮಾಡುತ್ತೇನೆಂದು ಭರವಸೆ ನೀಡಿದರು.
ಹುಲಿಕಲ್ ಘಾಟ್ ರಸ್ತೆ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ಅನುದಾನ ನಿಗದಿಗೊಳಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದರು.
ಹುಲಿಕಲ್ ಘಾಟ್ ತಡೆಗೋಡೆ ಕಾಮಗಾರಿ ವಿವರ
ಸುಮಾರು 80 ಮೀಟರ್ ಉದ್ದದ ಆರ್.ಸಿ.ಸಿ. ತಡೆಗೋಡೆಯನ್ನು ಇಲಾಖೆಯ ತಾಂತ್ರಿಕ ವಿನ್ಯಾಸದಂತೆ ನಿರ್ಮಿಸಲಾಗುತ್ತಿದೆ. ಡಿಸೆಂಬರ್ ಮಾಹೆಯಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 60 ಮೀಟರ್ ಉದ್ದದ ಭಾಗದಲ್ಲಿ ಹಳೆಯ ಮಣ್ಣನ್ನು ತೆರವುಗೊಳಿಸಿ, ಅಡಿಪಾಯದೊಂದಿಗೆ ಸುಮಾರು 6 ಮೀಟರ್ ಎತ್ತರದವರೆಗೆ ಗೋಡೆ ನಿರ್ಮಿಸಲಾಗಿದೆ. ಹೊಸನಗರ ತಾಲೂಕಿನ ತೀರ್ಥಹಳ್ಳಿ - ಕುಂದಾಪುರ ರಾಷ್ಟ್ರೀಯ ಹೆದ್ದಾರಿ 52ರ ಸರಪಳಿ 38.00 ಕಿ.ಮೀ ನಿಂದ 43.58 ಕಿ.ಮೀ ವರೆಗಿನ ಸುಮಾರು 5.58 ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.