ಕುಂದಾಪುರದಲ್ಲಿ ಹುಲಿವೇಷದ ಅಬ್ಬರ: 19ರಂದು ನೃತ್ಯ ಪ್ರದರ್ಶನ

KannadaprabhaNewsNetwork |  
Published : Oct 18, 2026, 03:30 AM IST
5.ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ | Kannada Prabha

ಸಾರಾಂಶ

ಕರಾವಳಿಯ ಸಾಂಪ್ರದಾಯಿಕ ಕಲೆಯಾದ ಹುಲಿವೇಷಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ವತಿಯಿಂದ 19ರಂದು ಸಂಜೆ 7 ಗಂಟೆಗೆ ಕುಂದಾಪುರದ ಬೋರ್ಡ್ ಹೈಸ್ಕೂಲ್ನ ಬಯಲು ರಂಗಮಂದಿರದಲ್ಲಿ ಹುಲಿವೇಷ ನೃತ್ಯ ಪ್ರದರ್ಶನ ಆಯೋಜಿಸಲಾಗಿದೆ ಎಂದು ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ಅಧ್ಯಕ್ಷ ಬಿ. ಕಿಶೋರಕುಮಾರ್‌ ತಿಳಿಸಿದ್ದಾರೆ.

ಕುಂದಾಪುರ; ಕರಾವಳಿಯ ಸಾಂಪ್ರದಾಯಿಕ ಕಲೆಯಾದ ಹುಲಿವೇಷಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ವತಿಯಿಂದ 19ರಂದು ಸಂಜೆ 7 ಗಂಟೆಗೆ ಕುಂದಾಪುರದ ಬೋರ್ಡ್ ಹೈಸ್ಕೂಲ್ನ ಬಯಲು ರಂಗಮಂದಿರದಲ್ಲಿ ಹುಲಿವೇಷ ನೃತ್ಯ ಪ್ರದರ್ಶನ ಆಯೋಜಿಸಲಾಗಿದೆ ಎಂದು ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ಅಧ್ಯಕ್ಷ ಬಿ. ಕಿಶೋರಕುಮಾರ್‌ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನವರಾತ್ರಿ ಸಂದರ್ಭದಲ್ಲಿ ವಿಶೇಷವಾಗಿ ಪ್ರದರ್ಶಿಸಲಾಗುವ ಹುಲಿವೇಷ ನೃತ್ಯವು ಕುಂದಾಪುರದ ಸಾಂಸ್ಕೃತಿಕ ವೈಶಿಷ್ಟ್ಯಗಳಲ್ಲಿ ಒಂದಾಗಿದೆ. ತಾಸೆ, ಡೋಲು ಸೇರಿದಂತೆ ವಿವಿಧ ವಾದ್ಯಗಳ ನಾದಕ್ಕೆ ತಕ್ಕಂತೆ ಹೆಜ್ಜೆ ಹಾಕುವ ಹುಲಿವೇಷಧಾರಿಗಳ ನರ್ತನ ನೋಡುಗರ ಗಮನ ಸೆಳೆಯುತ್ತದೆ.

ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ಹಲವು ವರ್ಷಗಳಿಂದ ಹುಲಿವೇಷ ಕಲಾವಿದರೊಂದಿಗೆ ಕೈಜೋಡಿಸಿ, ಸಾರ್ವಜನಿಕರಿಗಾಗಿ ವಿಶೇಷ ವೇದಿಕೆಯಲ್ಲಿ ಈ ನೃತ್ಯ ಪ್ರದರ್ಶನವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯೂ ಕುಂದಾಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ವಿವಿಧ ಹುಲಿವೇಷ ತಂಡಗಳು ಭಾಗವಹಿಸಿ ಕಲಾಸಕ್ತರನ್ನು ರಂಜಿಸಲಿವೆ.

ಪಾರಂಪರಿಕ ಕಲೆಯನ್ನು ಉಳಿಸಿ ಮುಂದಿನ ತಲೆಮಾರುಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಬಿ. ಕಿಶೋರ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಸ್ತಿಗಾಗಿ ಸೊಸೆ, ಮೊಮ್ಮಕ್ಕಳೊಂದಿಗೆ ಪುತ್ರನನ್ನೇ ಕೊಂದ
ಜೆನ್‌ ಝೀಗಳ ದಾರಿತಪ್ಪಿಸುತ್ತಿರುವ ಸಿಜೆಪಿ: ಬಿ.ವೈ. ರಾಘವೇಂದ್ರ